AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮ ಪ್ರವಾಸ ಹೋಗ್ತೀರಾ? ಈ ವಿಚಾರ ತಿಳಿದಿರಲೇಬೇಕು: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

ನಂದಿಗಿರಿಧಾಮ ವಿಶ್ವವಿಖ್ಯಾತ ಪ್ರವಾಸಿ ತಾಣ. ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬಂದು ಹೋಗುತ್ತಾರೆ. ಆದರೆ, ಇತ್ತೀಚಿನ ಕೆಲವು ದಿನಗಳಲ್ಲಿ ಕಂಡುಬಂದ ವಿದ್ಯಮಾನವೊಂದು ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಭೀತಿಗೆ ಕಾರಣವಾಗಿದೆ. ಅದರಲ್ಲೂ ಮುಂಜಾನೆ ಅಥವಾ ಮುಸ್ಸಂಜೆ ಹೊತ್ತು ದ್ವಿಚಕ್ರ ವಾಹನದಲ್ಲೇನಾದ್ರೂ ನಂದಿಗಿರಿಧಾಮ ರಸ್ತೆಯಲ್ಲಿ ಹೋಗುವುದಾದ್ರೆ ಈ ವಿಚಾರ ತಿಳಿದಿರಲೇಬೇಕು.

ನಂದಿಗಿರಿಧಾಮ ಪ್ರವಾಸ ಹೋಗ್ತೀರಾ? ಈ ವಿಚಾರ ತಿಳಿದಿರಲೇಬೇಕು: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ
ನಂದಿ ಹಿಲ್ಸ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 02, 2025 | 10:51 AM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 2: ವಾರಾಂತ್ಯ ಬಂತೆಂದರೆ ಸಾಕು, ಬೆಂಗಳೂರಿನ ಹೆಚ್ಚಿನವರು ಭೇಟಿ ನೀಡುವ ನೆಚ್ಚಿನ ತಾಣ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ (Nandi Hills) . ಆದರೆ, ಇದೀಗ ನಂದಿಗಿರಿಧಾಮಕ್ಕೆ ಸಂಜೆ ವೇಳೆ ಅಥವಾ ಮುಂಜಾನೆ ಹೋಗುವುದಾದರೆ, ಅದೂ ದ್ವಿಚಕ್ರ ವಾಹನದಲ್ಲಿ ಹೋಗುವುದಾದರೆ ಬಹಳ ಎಚ್ಚರಿಕೆ ಅಗತ್ಯ. ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸುವುದು ಹೆಚ್ಚಾಗಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ.

ಚಿರತೆ ಹಾವಳಿ ಹೆಚ್ಚಾಗಿರುವುದರಿಂದ ಚಿಕ್ಕಬಳ್ಳಾಪುರ ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ. ರಾತ್ರಿಯಾದರೆ ಸಾಕು ಚಿರತೆ ಭೀತಿ ಭಯ ಕಾಡುತ್ತಿದೆ ಎಂದು ಸ್ಥಳೀಯ ನಿವಾಸಿ ವೆಂಕಟೇಶ ಎಂಬವರು ತಿಳಿಸಿದ್ದಾರೆ.

ರೈತರೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆ ಹಿಂಡು

ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನ ವರ್ಲಕೊಂಡ ಬೆಟ್ಟದ ಬಳಿ, ಚಿರತೆಗಳ ಹಿಂಡು ಪ್ರತ್ಯೇಕ್ಷವಾಗಿ ರೈತರೊಬ್ಬರ ಮೇಲೆ ದಾಳಿ ಮಾಡಿತ್ತು. ಅದಾದ ನಂತರ ತಪ್ಪಿಸಿಕೊಂಡಿದ್ದ ಕೆಲವು ಚಿರತೆಗಳು ಎಲ್ಲಿವೆ ಎಂಬ ಮಾಹಿತಿ ತಿಳಿದಿರಲಿಲ್ಲ. ಆದರೆ, ಈಗ ನಂದಿಗಿರಿಧಾದ ಸುತ್ತಮುತ್ತ ಚಿರತೆಗಳು ಗಿರಕಿ ಹೊಡೆಯುತ್ತಿವೆ. ಅಲ್ಲಲ್ಲಿ ಸ್ಥಳೀಯರ ಕಣ್ಣಿಗೆ ಕಾಣಿಸುತ್ತಿವೆ. ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ, ಈರೇನಹಳ್ಳಿ ಸೇರಿದಂತೆ ಮೊಕ್ಷಗುಂಡಂ ಸರ್ ಎಂ. ವಿಶ್ವೇಶ್ವರಯ್ಯ ಮಾಸ್ಟರ್ ತರಬೇತಿ ಕೇಂದ್ರದ ಸುತ್ತಮುತ್ತ ಚಿರತೆಗಳು ಪತ್ತೆಯಾಗಿವೆ. ಇದರಿಂದ ಸ್ಥಳೀಯರು ಸಂಜೆಯಾದ ನಂತರ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆಗಳನ್ನು ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಬ್ಬರು ಸಾವು

ಚಿರತೆಗಳು ಪ್ರವಾಸಿಗರು ಹಾಗೂ ಸ್ಥಳಿಯರ ಮೇಲೆ ದಾಳಿ ಮಾಡುವುದಕ್ಕೂ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ