ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು: ನಿಡುಮಾಮಿಡಿ ಶ್ರೀ

ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಗೌರಿಬಿದನೂರಿನಲ್ಲಿ ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕೊಲೆ ಮಾಡಲು  ಸಂಚು ರೂಪಿಸಿದ್ದರು: ನಿಡುಮಾಮಿಡಿ    ಶ್ರೀ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 24, 2022 | 3:26 PM

ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಗೌರಿಬಿದನೂರಿನಲ್ಲಿ ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಹೇಳಿದ್ದಾರೆ. ಗೌರಿಬಿದನೂರಿನ ಸಮಾನತಾ ಸೌಧದಲ್ಲಿ ನಡೆದ ಪ್ರಗತಿಪರ ಚಿಂತಕ ಪ್ರೋ. ಗಂಗಾಧರಮೂರ್ತಿ  ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫ್ಯಾಸಿಸ್ಟ್ ಸಂಸ್ಕೃತಿಯ ಜನರು ಸಂಶೋಧಕ ಡಾ. ಎಂ.ಎಂ ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶರ್​ರನ್ನು ಹತ್ಯೆ ಮಾಡಿದ ಮಾದರಿಯಲ್ಲೇ ಇನ್ನೂ ಹಲವರ ಹತ್ಯೆಗೆ ಸಂಚು ರೂಪಿಸಿದ್ದರು. ಆದರೆ ಜೀವ ಕಾಯುವುದಕ್ಕೆ ಮೇಲೆ ಇದ್ದಾನೆ ಎಂದು ಹೇಳಿದರು.

ಜಾತಿ ತಾರತಮ್ಯ ತೊಡೆದು ಹಾಕಲು ಮುಂದಾಗಿದ್ದಕ್ಕೆ ನನ್ನನ್ನೆ ಬಹಿಷ್ಕಾರ ಹಾಕಿದರು. 1991ರಲ್ಲಿ ದೇವಾಲಯದಲ್ಲಿ ಅರ್ಚಕನನ್ನು ನೇಮಕ ಮಾಡಿದ್ದಕ್ಕೆ ಬಹಿಷ್ಕಾರ ಹಾಕಿದರು. ಜನರ ಬದಲಾವಣೆಯನ್ನು ಮತವಾಗಿ ಬದಲಾಯಿಸಿ. ನೀವು ಹೇಗೆ ಮುಖ್ಯಮಂತ್ರಿ ಸ್ಥಾನಕ್ಕೆ ಬರುತ್ತೀರಿ ಅನ್ನೊದು ನಿಮ್ಮ ಮೇಲೆ ನಿಂತಿದೆ. ಸಿದ್ದರಾಮಯ್ಯ ನಾಡಿನ ಮುಂದಿನ ಆಶಾ ಕಿರಣ ಎಂದರು.

ಕಾಂಗ್ರೆಸ್​​ ಸರ್ಕಾರವನ್ನ 10 ಪರ್ಸೆಂಟ್​ ಸರ್ಕಾರ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಕಾಂಗ್ರೆಸ್ 10 ಪರ್ಸೆಂಟ್​ ಸರ್ಕಾರ ಅಂದಿದ್ದರು. ನೀವು ಕಾಂಗ್ರೆಸ್​​ ಸರ್ಕಾರದಷ್ಟೇ ಇರಿ 40 ಪರ್ಸೆಂಟ್​ ಆಗಬೇಡಿ. ರಾಜ್ಯದಲ್ಲಿರುವ 40 ಪರ್ಸೆಂಟ್​​ ತಪ್ಪಿಸಿ ನೀವು ಅಷ್ಟೆ ಇರಿ.ಬೆಲೆ ಏರಿಕೆಯ ಹಾಗೆ ಭ್ರಷ್ಟಾಚಾರ ಏರಿಕೆಯಾಗುತ್ತಿದೆ ನೋಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಯಾವ ಪಕ್ಷದಿಂದಲೂ ಭ್ರಷ್ಟಾಚಾರ ನಿವಾರಿಸಲು ಆಗುವುದಿಲ್ಲ. ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಿ. ಗಣನೀಯವಾಗಿ ಭ್ರಷ್ಟಚಾರ ತಗ್ಗಿಸುವುದಾಗಿ ಭರವಸೆ ನೀಡಿ. ಆಗಿರುವ ಅನ್ಯಾಯ ಸರಿಪಡಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ. ಜನ ಖಂಡಿತವಾಗಿ ಕಾಂಗ್ರೇಸ್​​ನ್ನು ಸ್ವಾಗತಿಸುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 24 September 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ