Crime News: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆಗೆ ಯತ್ನ
ದುಷ್ಕರ್ಮಿಗಳು ಮಚ್ಚಿನಲ್ಲಿ ಹಿಂದಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ, ಯುವರಾಜ ತಪ್ಪಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಿಕ್ಕಬಳ್ಳಾಪುರ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದ ಯುವರಾಜ (35) ಎಂಬವರ ಮೇಲೆ ಹಲ್ಲೆಗೆ ಯತ್ನವಾಗಿದೆ. ದುಷ್ಕರ್ಮಿಗಳು ಮಚ್ಚಿನಲ್ಲಿ ಹಿಂದಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ, ಯುವರಾಜ ತಪ್ಪಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಿಕ್ಕಮಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದ್ಯಾವನಗೂಲ್ ಗ್ರಾಮದಲ್ಲಿ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ದ್ಯಾವನಗೂಲ್ ಗ್ರಾಮದ ಹಳ್ಳದ ಬದಿಯಲ್ಲಿ ಶವ ಪತ್ತೆ ಆಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬೈಕ್ಗೆ ಕಾರು ಟಚ್ ಆಗಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ಬೈಕ್ಗೆ ಕಾರು ಟಚ್ ಆಗಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ಆದ ಘಟನೆ ಕೋಲಾರ ತಾಲೂಕಿನ ತೇರಹಳ್ಳಿ ಬೆಟ್ಟದ ಮೇಲೆ ನಡೆದಿದೆ. ಗುಂಪುಕಟ್ಟಿಕೊಂಡು ಗ್ರಾಮಕ್ಕೆ ಬಂದು ಕಾರು ಚಾಲಕನಿಂದ ಹಲ್ಲೆ ಮಾಡಲಾಗಿದೆ. ಗಲಾಟೆಯಲ್ಲಿ 10 ಜನರಿಗೆ ಗಾಯ ಆಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ್ದಾರೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಗೆ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಗೆ ಪಲ್ಟಿಯಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಚಿಕೆರೆ ಬಳಿ ನಡೆದಿದೆ. ಘಟನೆಯಲ್ಲಿ ಸಿನಿಮೀಯ ಮಾದರಿಯಲ್ಲಿ ಚಾಲಕ ಪಾರಾಗಿದ್ದಾನೆ. ಬಾಳೆಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಆಗಿದೆ. ಪಕ್ಕದ ಅಣಜಿ ಗ್ರಾಮದ ರೈತರ ಜಮೀನಿನಿಂದ ಬಾಳೆ ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಆಗಿರುವ ಬಗ್ಗೆ ತಿಳಿದುಬಂದಿದೆ. ಲಾರಿ ಪಲ್ಟಿ ಆಗುವುದನ್ನು ಅರಿತ ಚಾಲಕ ಬೇಗ ಲಾರಿಯಿಂದ ಜಿಗಿದು ಬಚಾವ್ ಆಗಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಆನೇಕಲ್: ಕಾರು ಅಡ್ಡಗಟ್ಟಿ ಗುಂಡಿಕ್ಕಿ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಇದನ್ನೂ ಓದಿ: ಉದ್ಯಮಿ ಕುಟುಂಬದ ಭೀಕರ ಆತ್ಮಹತ್ಯೆ ಪ್ರಕರಣ; ತೆಲಂಗಾಣ ಆಡಳಿತ ಪಕ್ಷ ಟಿಆರ್ಎಸ್ ಶಾಸಕನ ಪುತ್ರ ವನಮಾ ರಾಘವೇಂದ್ರ ರಾವ್ ಬಂಧನ
Published On - 9:48 pm, Sat, 8 January 22