ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ

ಸ್ವತಃ ಚಿಕ್ಕಪ್ಪನೇ ಮೂರು ವರ್ಷದ ಅಣ್ಣನ ಮಗನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ
ಕೊಲೆ ಆರೋಪಿ ರಂಜಿತ್
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಆಯೇಷಾ ಬಾನು

Updated on:Jun 20, 2024 | 8:43 AM

ಚಿಕ್ಕಬಳ್ಳಾಪುರ, ಜೂನ್.20: ಮೂರು ವರ್ಷದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ನಂದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮಕಾಯಲಹಳ್ಳಿಯ ಗ್ರಾಮದ ಶಿರಿಷ, ಮಂಜುನಾಥ ದಂಪತಿ ಪುತ್ರ ಗೌತಮ್ (3) ಹತ್ಯೆಯಾದ ಮಗು. ಅದೇ ಗ್ರಾಮದ ಸ್ವತಃ ಮಗುವಿನ ಚಿಕ್ಕಪ್ಪ ರಂಜಿತ್ (30) ಕೊಲೆ ಆರೋಪಿ.

ಎಂದಿನಂತೆ ಅಣ್ಣ ಮಂಜುನಾಥ ಅವರ ಮನೆಗೆ ಬಂದ ಆರೋಪಿ ರಂಜಿತ್ ಊಟ ಮಾಡಿ ಸಂಜೆ ಐದು ಗಂಟೆ ಸಮಯದಲ್ಲಿ ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಮಂಜುನಾಥ ಅವರ ಚಿಕ್ಕಪ್ಪನ ಮಗನಾಗಿರುವ ಆರೋಪಿ ರಂಜಿತ್, ಎಂಜಿನಿಯರಿಂಗ್ ಪದವೀಧರ. ಮೂರು ತಿಂಗಳಿಂದಲೂ ನಿಮ್ಮಕಾಯಲಹಳ್ಳಿಯಲ್ಲಿ ಮನೆ ನಿರ್ಮಿಸುತ್ತಿದ್ದ ರಂಜಿತ್, ಮಂಜುನಾಥ ಅವರ ಮನೆಯಲ್ಲಿ ವಾಸವಿದ್ದು,ಅಲ್ಲೆ ಊಟ ತಿಂಡಿ ಮಾಡುತ್ತಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳಾದ ಡಿ ಎಲ್ ನಾಗೇಶ್.ಅಡಿಷನಲ್ ಎಸ್ಪಿ ಖಾಸಿಂ ಖಾನ್.ಡಿ ವೈ ಎಸ್ ಪಿ. ಪಿ ಮುರಳೀಧರ.ಬಟ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿ, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮನೆಯನ್ನೇ ಪಾರ್ಕ್ ಮಾಡಿದ ಪರಿಸರ ಪ್ರೇಮಿ; 250ಕ್ಕೂ ಹೆಚ್ಚು ಬಗೆಯ ಗಿಡಗಳ ಹಸಿರ ಮನೆ

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್, ಸಾಜೀದ್ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದರು. ಆದ್ರೆ, ನೆಟ್​ವರ್ಕ್ ಇಲ್ಲದೆ ಮೂವರು ಸಂಪರ್ಕಕ್ಕೆ ಸಿಗಲಿಲ್ಲ. ಹೀಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ನಡೆಸಲಾಗ್ತಿದೆ. ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 am, Thu, 20 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ