ಚಿಕ್ಕಬಳ್ಳಾಪುರ: ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ, ಆ ಪಕ್ಷದಲ್ಲಿ ಶಿಸ್ತು ಇಲ್ಲ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮೂಲಕ KPCC ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಟಿವಿ9 ಜೊತೆ ಮಾತನಾಡಿದ KPCC ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್ ಪಕ್ಷ ಕಟ್ಟಿದ್ರು. ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿಯಿತು ಎಂದು ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ ಎಂದಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು. ವಿವಿಧ ಪಕ್ಷಗಳ ಮುಖಂಡರುಗಳನ್ನು ಯಡಿಯೂರಪ್ಪ ಬಿಜೆಪಿಗೆ ಕರೆ ತಂದಿದ್ರು. ಆದ್ರೆ ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿಗೆ ಭವಿಷ್ಯವಿಲ್ಲ ಅಂತಾ ನಾಯಕರಿಗೆ ಮನವರಿಕೆಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುತ್ತದೆ. ಕಾಂಗ್ರೆಸ್ 120ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಬಿಜೆಪಿ ಕಚ್ಚಾಟದಿಂದ ಕಾಂಗ್ರೆಸ್ಗೆ 150 ಸ್ಥಾನ ಬಂದ್ರೂ ಆಶ್ಚರ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಕೋಟಿ ವೀರರು: ಹುಬ್ಬೇರಿಸುತ್ತಿದೆ ಅಭ್ಯರ್ಥಿಗಳ ಆಸ್ತಿ ಲೆಕ್ಕ, 10 ಸಾವಿರ ನಾಣ್ಯ ತಂದಿಟ್ಟ ಎಎಪಿ ಅಭ್ಯರ್ಥಿ
ಇನ್ನು ಇದೇ ವೇಳೆ ರಾಮಲಿಂಗಾರೆಡ್ಡಿ, ತಮಗೆ ಸಿಎಂ ಆಗುವ ಆಸೆ ಇರುವುದನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ನಾನು ಸೀನಿಯರ್. ನಾನು ಮುಖ್ಯಮಂತ್ರಿ ಹುದ್ದೆಗೆ ಅರ್ಹನಾಗಿದ್ದೇನೆ. ಆದ್ರೆ ಸ್ಪರ್ಧೆಯಲ್ಲಿ ಇಲ್ಲ. ಸಿಎಂ ಆಸೆ ಇಟ್ಟುಕೊಂಡಿರುವವರು ಆಗಲಿ. ನಮಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ತಿಳಿಸಿದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:27 am, Tue, 18 April 23