ಗೇ ಡೇಟಿಂಗ್ ಆ್ಯಪ್​​ ಮೂಲಕ ಪರಿಚಯ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಮೂವರ ಬಂಧನ

ಚಿಕ್ಕಬಳ್ಳಾಪುರದಲ್ಲಿ ಗೇ ಡೇಟಿಂಗ್ ಆ್ಯಪ್‌ಗಳನ್ನು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸಿಸುತ್ತಿದ್ದ ಸಕ್ರಿಯ ಜಾಲವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಎಂಟು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳ ಕೃತ್ಯ ಕಂಡು ಪೊಲೀಸರೇ ನಿಜಕ್ಕೂ ಶಾಕ್​ ಆಗಿದ್ದಾರೆ.

ಗೇ ಡೇಟಿಂಗ್ ಆ್ಯಪ್​​ ಮೂಲಕ ಪರಿಚಯ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಮೂವರ ಬಂಧನ
ಬಂಧಿತರು
Image Credit source: tv9 kannada
Edited By:

Updated on: Oct 05, 2026 | 6:50 PM

ಮುಖ್ಯಾಂಶಗಳು

  • ಗೇ ಡೇಟಿಂಗ್ ಆ್ಯಪ್ ಬಳಸೋರೆ ಎಚ್ಚರ
  • ಗೇ ಡೇಟಿಂಗ್ ಆ್ಯಪ್ ಮೂಲಕ ಬಲೆ ಬೀಸಿ ಹಲ್ಲೆ, ದರೋಡೆ, ಬ್ಲ್ಯಾಕ್‌ಮೇಲ್
  • ಚಿಕ್ಕಬಳ್ಳಾಪುರ ಪೊಲೀಸರಿಂದ ಮೂವರು ಖತರ್ನಾಕ್ ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ, ಅಕ್ಟೋಬರ್​​ 05: ರಾಜ್ಯದಲ್ಲಿ ಡೇಟಿಂಗ್​ ಆ್ಯಪ್​​ ವಂಚನೆ ಪ್ರಕರಣಗಳು ಇತ್ತೀಚೆಗೆ ಸಾಕಷ್ಟು ವರದಿ ಆಗುತ್ತಿವೆ. ಇದೀಗ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದರಲ್ಲೂ ಗೇ ಡೇಟಿಂಗ್ ಆ್ಯಪ್‌ಗಳನ್ನು ಬಳಸುವವರನ್ನು ಗುರಿಯಾಗಿಸಿಕೊಂಡು ಹಲ್ಲೆ, ದರೋಡೆ ಹಾಗೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಚಿಕ್ಕಬಳ್ಳಾಪುರ ಪೊಲೀಸರು ಭೇದಿಸಿದ್ದಾರೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ನಡೆದಿದ್ದೇನು? 

‘ಗ್ರೈಂಡರ್-ಗೇ’ ಆ್ಯಪ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿಗಳು, ಅಮಾಯಕರನ್ನು ನಿರ್ಜನ ಪ್ರದೇಶಗಳಿಗೆ ಕರೆಸಿಕೊಂಡು ಚಿತ್ರಹಿಂಸೆ ನೀಡಿ ಹಣ ವಸೂಲಿ ಮಾಡುತ್ತಿದ್ದರು. ಆರೋಪಿಗಳ ಈ ಕೃತ್ಯ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಬೆತ್ತಲೆಗೊಳಿಸಿ ಹಲ್ಲೆ: ವಿಡಿಯೋ ಚಿತ್ರೀಕರಣ

ಆ್ಯಪ್ ಮೂಲಕ ಪರಿಚಯವಾದವರನ್ನು ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು, ಜಾತವಾರ ಹಾಗೂ ಕೊಂಡೇನಹಳ್ಳಿಯ ನಿರ್ಜನ ಪ್ರದೇಶಗಳಿಗೆ ಕರೆದೊಯ್ಯಲಾಗುತ್ತಿತ್ತು. ಅಲ್ಲಿ ಅವರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿ, ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು.

ಇದನ್ನೂ ಓದಿ: ಡೇಟಿಂಗ್ ಆ್ಯಪ್ ಪರಿಚಯವಾದ ಯುವತಿಯಿಂದ ವಂಚನೆ: ಪಬ್​ಗೆ ಕರೆದು ಯುವಕನ ಕಿಡ್ನ್ಯಾಪ್!

ಫೋನ್‌ಪೇ ಮೂಲಕ ಹಣ ವರ್ಗಾಯಿಸಿಕೊಂಡು, ಅವರ ಕುಟುಂಬದವರಿಗೂ ಬೆದರಿಕೆ ಹಾಕುತ್ತಿದ್ದರು. ಬಳಿಕ ಮೊಬೈಲ್ ಕಸಿದುಕೊಂಡು ನಿರ್ಜನ ಪ್ರದೇಶದಲ್ಲೇ ಬಿಟ್ಟು ಪರಾರಿಯಾಗುತ್ತಿದ್ದರು. ಕಳೆದೊಂದು ವಾರದಲ್ಲಿ ಚಿಕ್ಕಬಳ್ಳಾಪುರದ ತರಕಾರಿ ವ್ಯಾಪಾರಿ ಹಾಗೂ ಶಿಡ್ಲಘಟ್ಟದ ಶಿಕ್ಷಕರೊಬ್ಬರ ಮೇಲೆ ಇದೇ ರೀತಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.

ಮೂವರು ಆರೋಪಿಗಳ ಬಂಧನ: 8 ಪ್ರಕರಣಗಳಲ್ಲಿ ಭಾಗಿ

ಪ್ರಕರಣದ ತನಿಖೆ ನಡೆಸಿದ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಜಾತವಾರ ಗ್ರಾಮದ ಮಹೇಶ್, ನಾಯನಹಳ್ಳಿಯ ಚೇತನ್ ಹಾಗೂ ಹೊಸಕೋಟೆ ಮೂಲದ ಅರುಣ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ನಕಲಿ ಕ್ಯೂಆರ್ ಕೋಡ್ ಮೂಲಕ 12 ಲಕ್ಷ ರೂ. ವಂಚನೆ: ಆರು ಆರೋಪಿಗಳ ಬಂಧನ

ಇನ್ನು ಬಂಧಿತ ಆರೋಪಿಗಳು ಇದುವರೆಗೆ ಒಟ್ಟು 8 ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಚಿಂತಾಮಣಿ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲೂ ಈ ಗ್ಯಾಂಗ್ ತನ್ನ ಜಾಲವನ್ನು ವಿಸ್ತರಿಸಿಕೊಂಡಿತ್ತು ಎಂಬುವುದು ಪೊಲೀಸ್​ ತನಿಖೆಯಲ್ಲಿ ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Loading...
Unable to load recommendations.
Follow Us