ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 10ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

Edited By:

Updated on: Apr 28, 2026 | 5:11 PM

ಗೌರಿಬಿದನೂರು ತಾಲೂಕಿನ ವೇದಲ ವೇಣಿ ಬಳಿ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಚಾಲಕನ ಎಡವಟ್ಟಿನಿಂದ ಸಂಭವಿಸಿದ ಈ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಗಂಭೀರ ಗಾಯಗೊಂಡವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ಚಿಕ್ಕಬಳ್ಳಾಪುರ, ಏಪ್ರಿಲ್ 28: ಗೌರಿಬಿದನೂರು ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ಏಕಾಏಕಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿಬಸ್‌ನ ಗಾಜುಗಳು ಒಡೆದುಹೋಗಿದ್ದು, ಬಸ್‌ನಲ್ಲಿ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ತೀವ್ರ ಗಾಯಗಳಾದ ಎಂಟು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನೆ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 28, 2026 05:10 PM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More