ನ್ಯಾಯಬೆಲೆ ಅಂಗಡಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ; ನೊಂದ ಮಹಿಳೆ ಮನೆಗೆ ಸಚಿವ ಸುಧಾಕರ್ ಭೇಟಿ
ನ್ಯಾಯಬೆಲೆ ಅಂಗಡಿ ಮಾಲಕಿ ಪದ್ಮಾವತಿ ವಿರುದ್ಧ ಆರೋಪ ಕೇಳಿಬಂದಿದೆ. ಪಡಿತರ ಪಡೆಯಲು ಹೋಗಿದ್ದ ಮಹಿಳೆ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಮಾಡಿ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದೆ.
ಚಿಕ್ಕಬಳ್ಳಾಪುರ: ನ್ಯಾಯಬೆಲೆ ಅಂಗಡಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನೊಂದ ಮಹಿಳೆ ಮನೆಗೆ ಸಚಿವ ಡಾ.ಕೆ. ಸುಧಾಕರ್ ಭೇಟಿ ನೀಡಿದ್ದಾರೆ. ಕಾಟೇನಹಳ್ಳಿಯಲ್ಲಿ ಮಹಿಳೆ ಮನೆಗೆ ಭೇಟಿ ನೀಡಿ ಸುಧಾಕರ್ ಮಹಿಳೆಗೆ ಸಮಾಧಾನ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕಾಟೇನಹಳ್ಳಿಯಲ್ಲಿ ಘಟನೆ ನಡೆದಿತ್ತು. ಸಚಿವ ಡಾ.ಸುಧಾಕರ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸುಧಾಕರ್ ಸೂಚನೆ ಕೊಟ್ಟಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲಕಿ ಪದ್ಮಾವತಿ ವಿರುದ್ಧ ಆರೋಪ ಕೇಳಿಬಂದಿದೆ. ಪಡಿತರ ಪಡೆಯಲು ಹೋಗಿದ್ದ ಮಹಿಳೆ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಮಾಡಿ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದೆ.
ಹುಬ್ಬಳ್ಳಿ: ಚರ್ಚ್ ಫಾದರ್ ವಿರುದ್ಧ ಮತಾಂತರ ಆರೋಪ ಹುಬ್ಬಳ್ಳಿಯ ಭೈರದೇವರಕೊಪ್ಪ ಚರ್ಚ್‌ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚ್ ಪಾಸ್ಟರ್ ಸೋಮು ವಿರುದ್ಧ ಮತಾಂತರ ಆರೋಪ ಕೇಳಿಬಂದಿದೆ. ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪಾಸ್ಟರ್ ಸೋಮು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿದ್ದಾರೆ. ನವನಗರ ಪೊಲೀಸರ ಜೊತೆ ಶಾಸಕ ಬೆಲ್ಲದ ಮಾತುಕತೆ ನಡೆಸಿದ್ದಾರೆ.
ಹುಬ್ಬಳ್ಳಿಯ ನವನಗರದ ಚರ್ಚ್‌ನಲ್ಲಿ ಮತಾಂತರ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಚರ್ಚ್ ಒಳಗಡೆ ಹಿಂದೂಪರ ಸಂಘಟನೆಗಳು ರಾಮಜಪ ನಡೆಸಿದ್ದಾರೆ. ಮತಾಂತರ ಮಾಡುವವರನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. ರಸ್ತೆಯಲ್ಲಿ ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದೆ. ಪ್ರತಿಭಟನೆಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಸಾಥ್ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.
ಹುಬ್ಬಳ್ಳಿಯ ನವನಗರದ ಚರ್ಚ್‌ನಲ್ಲಿ ಮತಾಂತರ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ದೂರು ನೀಡಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಬಂಧಿಸದಿದ್ದರೆ ಪ್ರತಿಭಟನೆ ಕೈಬಿಡಲ್ಲವೆಂದು ಬೆಲ್ಲದ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ಕಾನೂನು ಬದ್ಧವಾಗಿ ಕೆಲಸ ಮಾಡಲಿ. ಅವರಿಗೆ ಯಾವುದೇ ಜಾತಿ ಇರಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಫೌಂಡೇಷನ್: ಜಿ ಪರಮೇಶ್ವರ್ ಹೇಳಿಕೆ
ಇದನ್ನೂ ಓದಿ: ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
Published On - 5:16 pm, Sun, 17 October 21