ಸಂಪುಟ ಸಭೆಯಲ್ಲಿ ಸಚಿವರ ನಡುವೆ ವಾಕ್ಸಮರ: ಆರೋಗ್ಯ ಇಲಾಖೆ ಯೋಜನೆಗಳ ಮಂಜೂರಾತಿ ಬಗ್ಗೆ ಕಾವೇರಿದ ಚರ್ಚೆ
ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ನಾರಾಯಣಗೌಡ ಮತ್ತು ಡಾ.ಕೆ.ಸುಧಾಕರ್ ಮಧ್ಯೆ ವಾಕ್ಸಮರ ನಡೆದಿದೆ
ಬೆಂಗಳೂರು: ಆರೋಗ್ಯ ಇಲಾಖೆಯ ಎರಡು ಯೋಜನೆಗಳ ಕಾರ್ಯಸೂಚಿಯ ಬಗ್ಗೆ ಚರ್ಚಿಸಲು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ನಾರಾಯಣಗೌಡ (Narayana Gowda) ಮತ್ತು ಡಾ.ಕೆ.ಸುಧಾಕರ್ (Dr K Sudhakara) ಮಧ್ಯೆ ವಾಕ್ಸಮರ ನಡೆದಿದೆ. ಕಾಮಗಾರಿಗೆ ಅನುಮೋದನೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಆರೋಗ್ಯ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಗೆ ಎರಡು ಯೋಜನೆ ಮಂಜೂರು ಮಾಡಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಸಭೆಯಲ್ಲಿ ಮಾತನಾಡಿದ ನಾರಾಯಣಗೌಡ, ಆರೋಗ್ಯ ಇಲಾಖೆಯ ಎಲ್ಲ ಯೋಜನೆಗಳೂ ನಿಮ್ಮ ಜಿಲ್ಲೆಗೇ ಏಕೆ ಸಿಗಬೇಕು ಎಂದು ಪ್ರಶ್ನಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿಗೆ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ಸಂಬಂಧ ಚರ್ಚೆ ನಡೆಯಿತು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಹಾನಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿ. ಜಿಲ್ಲೆಯಲ್ಲಿ ಈವರೆಗೆ 436 ಮನೆಗಳು ನೆಲಸಮವಾಗಿದೆ. ಬಿದ್ದ ಮನೆ ದುರಸ್ತಿಗೆ ₹ 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದಿದ್ದಾರೆ ಸಚಿವ ಡಾ.ಕೆ.ಸುಧಾಕರ್ (dr k sudhakar).
ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಮುಂಬೈ ಕರ್ನಾಟಕ ಇನ್ನು ಮುಂದೆ ಕಿತ್ತೂರು ಕರ್ನಾಟಕ: ಹೊಸ ಹೆಸರಿಗೆ ಸಚಿವ ಸಂಪುಟ ಒಪ್ಪಿಗೆ ಇದನ್ನೂ ಓದಿ: MPLAD ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್