AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸುಧಾಕರ್ 7-8 ಕೋಟಿ ರೂ. ಖರ್ಚು ಮಾಡಿ ಕಾಂಗ್ರೆಸ್​​ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ(Chikkaballapur) ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದ್ದು, ಬಳಿಕ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ನಾನು ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು. ಈ ಕುರಿತು ಒಂದು ವರದಿ ಇಲ್ಲಿದೆ.

ಕೆ.ಸುಧಾಕರ್ 7-8 ಕೋಟಿ ರೂ. ಖರ್ಚು ಮಾಡಿ ಕಾಂಗ್ರೆಸ್​​ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್
ಪ್ರದೀಪ್ ಈಶ್ವರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 12, 2024 | 4:28 PM

Share

ಚಿಕ್ಕಬಳ್ಳಾಪುರ, ಸೆ.12: ಇಂದು(ಸೆ.12) ನಡೆದ ಚಿಕ್ಕಬಳ್ಳಾಪುರ(Chikkaballapur) ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದೆ. ಇದೀಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar), ‘ ನಗರಸಭೆ ಚುನಾವಣೆಗೆ ಸಂಸದ ಕೆ.ಸುಧಾಕರ್ 7 ರಿಂದ 8 ಕೋಟಿ ರೂಪಾಯಿ ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ ಎಂದು ಸುಧಾಕರ್​ ವಿರುದ್ದ ವಾಗ್ದಾಳಿ ನಡೆಸಿದರು.

 ಕೆ.ಸುಧಾಕರ್​ನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ-ಪ್ರದೀಪ್ ಈಶ್ವರ್

ಅಷ್ಟೇ ಅಲ್ಲ, ಅವರು ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಗೆ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಮುಂದೆ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ. ಮುಂದಿನ ನಗರಸಭೆ ಚುನಾವಣೆಯಲ್ಲಿ ‘ಕೈ​’ ಬಾವುಟ ಹಾರಿಸುತ್ತೇನೆ ಎಂದು ಪ್ರದೀಪ್ ಈಶ್ವರ್ ಕಿಡಿಕಾರಿದರು. ಜೊತೆಗೆ ಕೆ.ಸುಧಾಕರ್ ಅಲ್ಲ, ಅವರ ಅಪ್ಪನ ಕೈಯಲ್ಲೂ ನನ್ನ ಏನೂ ಮಾಡೋಕೆ ಆಗಲ್ಲ. ಆತ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು.

ಇದನ್ನೂ ಓದಿ:ಇತ್ತ ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆ; ಅತ್ತ ಜೆಡಿಎಸ್​ನ ಇಬ್ಬರು ಸದಸ್ಯರು ನಾಪತ್ತೆ

ಇನ್ನು ಈ ಬಾರಿ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ತೀವ್ರ ಕುತೂಹಲದಿಂದ ಕೂಡಿತ್ತು. ಜೊತೆಗೆ ಸಂಸದ ಡಾ.ಕೆ.ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಈ ಹಿನ್ನಲೆ ಡಿ.ವೈ.ಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಇನ್ನು ನಿನ್ನೆಯಷ್ಟೇ(ಸೆ.11) ನಗರಸಭೆ ಚುನಾವಣೆ ಬೆನ್ನಲ್ಲೇ ಜೆಡಿಎಸ್​ನ ಇಬ್ಬರು ನಗರಸಭೆ ಸದಸ್ಯರಾದ ಮಟಮಪ್ಪ ಹಾಗೂ ವೀಣಾ ರಾಮು ಎನ್ನುವವರು ನಾಪತ್ತೆಯಾಗಿದ್ದರು. ಆ ಮೂಲಕ ತೀವ್ರ ಹಣಾಹಣಿಗೆ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಕಾರಣವಾಗಿತ್ತು. ಇದೀಗ ಶಥಾಯಗತಾಯವಾಗಿ ಬಿಜೆಪಿಗೆ ನಗರಸಭೆ ಚುಕ್ಕಾಣಿ ಒಲಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Thu, 12 September 24