ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ; ಕಾಂಗ್ರೆಸ್ ಸದಸ್ಯರ ಕಿಡ್ನಾಪ್ ಆರೋಪ, ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಧರಣಿ
ಆರೋಗ್ಯ ಹಾಗೂ ವೈದ್ಯಕೀಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಬಾಗೇಪಲ್ಲಿ ಗುಡಿಬಂಡೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗುಡಿಬಂಡೆ ಪೊಲೀಸ್ ಠಾಣೆ ಎದುರು ಧರಣಿ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ: ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಸದಸ್ಯರೆ ಇಲ್ಲದ ಬಿಜೆಪಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಸದಸ್ಯರನ್ನು ಕಿಡ್ನಾಪ್ ಮಾಡಿ ಮತ ಪಡೆಯಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಉದ್ದಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಗ್ಯ ಹಾಗೂ ವೈದ್ಯಕೀಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಬಾಗೇಪಲ್ಲಿ ಗುಡಿಬಂಡೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗುಡಿಬಂಡೆ ಪೊಲೀಸ್ ಠಾಣೆ ಎದುರು ಧರಣಿ ನಡೆಸುತ್ತಿದ್ದಾರೆ. ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಸದಸ್ಯರನ್ನು ಕಿಡ್ನಾಪ್ ಮಾಡಿಸಿದ್ದಾರೆ ಎಂದು ಆರೋಪಿಸಿ ಸಾವಿರಾರು ಜನ ಬೆಂಬಲಿಗರ ಜೊತೆ ಶಾಸಕ ಸುಬ್ಬಾರೆಡ್ಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಾಮ ಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಸಚಿವ ಡಾ.ಕೆ.ಸುಧಾಕರ ಸೂಚನೆ ಮೇರೆಗೆ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆರೋಪಿಸಿದ್ದಾರೆ.
ಇನ್ನು ಆಕ್ರೋಶಗೊಂಡ ಬೆಂಬಲಿಗರು ಮತದಾನ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ್ದು ಪೊಲೀಸರು ಹಾಗೂ ಶಾಸಕ ಮತ್ತು ಅವರ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ಸಂಭವಿಸಿದೆ. ನೂಕು ನುಗ್ಗಲು ವೇಳೆ ಪೊಲೀಸ್ ಪೇದೆಗೆ ಗಾಯವಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ ಇನ್ಸ್ ಪೆಕ್ಟರ್ ಪ್ರಶಾಂತ್, ಶಾಸಕರ ಕಾಲರ್ಗೆ ಕೈಹಾಕಿದ ಆರೋಪ ಕೇಳಿ ಬಂದಿದೆ. ಸಚಿವ ಸುಧಾಕರ್ ಸೂಚನೆ ಮೆರೆಗೆ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡುತ್ತಿದ್ದಾರೆ. ಕಿಡ್ನಾಪ್ ಆದ ಕಾಂಗ್ರೆಸ್ ಸದಸ್ಯರನ್ನು ಸ್ಥಳಕ್ಕೆ ಕರಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬೆಂಬಲಿಗರು ಪಟ್ಟು ಹಿಡಿದಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳದಲ್ಲಿ ನಾಲ್ಕು ಜನ ಪೊಲೀಸ್ ಇನ್ಸ್ ಪೆಕ್ಟರ್, 10 ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ ಪೆಕ್ಟರ್, ನೂರಕ್ಕೂ ಹೆಚ್ಚು ಪೊಲೀಸ್ ಪೇದೆಯಿಂದ ಭಾರಿ ಬಂದೋಬಸ್ತ್ ಮಾಡಲಾಗಿದೆ. ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 11 ಸದಸ್ಯರಿದ್ದರೆ. ಅದರಲ್ಲಿ ಬಿಜೆಪಿ -0, ಕಾಂಗ್ರೆಸ್ -06, ಜೆಡಿಎಸ್ -02, ಪಕ್ಷೇತರರು -03.
ರಣಾಂಗಣ ಮಧ್ಯೆ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯಿತಿಯ ರಣಾಂಗಣದ ಮಧ್ಯೆ ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಅಧ್ಯಕ್ಷರಾಗಿ ರಿಜ್ವಾನ್, ಉಪಾಧ್ಯಕ್ಷರಾಗಿ ಅನಿಲ್ ಕುಮಾರ್ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ ಗೆದ್ದಿದ್ದರೂ ಬಿಜೆಪಿ ಬೆಂಬಲದಿಂದ ಆಯ್ಕೆ ಆಗಿದ್ದಾರೆ. ಗುಡಿಬಂಡೆ ಪ.ಪಂ ಅಧ್ಯಕ್ಷರಾಗಿ ಬಶೀರಾ ರಿಜ್ವಾನ್ ಆಯ್ಕೆ ಆಗಿದ್ದಾರೆ. ಜೆಡಿಎಸ್‌ನ 2 ಮತ, ಮೂವರು ಪಕ್ಷೇತರ ಸದಸ್ಯರ ಮತ, ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಮತ ಪಡೆದು ಆಯ್ಕೆ ಆಗಿದ್ದಾರೆ. ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಗಿದೆ. ಇತ್ತ ಕಾಂಗ್ರೆಸ್‌ನಿಂದ ಪ್ರತಿಭಟನೆ, ಮತ್ತೊಂದೆಡೆ ಬಿಜೆಪಿಯಿಂದ ಸಂಭ್ರಮಾಚರಣೆ ಕಂಡುಬಂದಿದೆ.
ಇದನ್ನೂ ಓದಿ: CM Bommai: ಕೃಷ್ಣ ರಾಜ ಸಾಗರ ಹಾಗೂ ಕಬಿನಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On - 2:10 pm, Tue, 2 November 21