ನಂದಿ ಬೆಟ್ಟದಲ್ಲಿ ಭಾರೀ ಭೂಕುಸಿತ, ಕನಿಷ್ಠ ಒಂದು ವಾರ ಬಂದ್: ಚಿಕ್ಕಬಳ್ಳಾಪುರ ತಹಶೀಲ್ದಾರ್
ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುಡ್ಡ ಕುಸಿತದಿಂದ ಗಿರಿಧಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಸಂಚಾರಕ್ಕೆ ಪೂರಕವಾಗಿ ಮಾಡಲು ಒಂದು ವಾರ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಇದರಿಂದಾಗಿ ರಸ್ತೆ ಸಂಚಾರ ಬಂದ್ ಆಗಿದೆ. ಪರಿಣಾಮ ಈ ವಾರದ ಕೊನೆಗೆ ನಂದಿ ಗಿರಿಧಾಮ ನೋಡಲು ಹೋಗುವವರಿಗೆ ನಿರಾಸೆಯಾಗಿದೆ. ಸದ್ಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುಡ್ಡ ಕುಸಿತದಿಂದ ಗಿರಿಧಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಸಂಚಾರಕ್ಕೆ ಪೂರಕವಾಗಿ ಮಾಡಲು ಒಂದು ವಾರ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಬಳಿ ತೆರವು ಕಾರ್ಯ ನಂದಿ ಗಿರಿಧಾಮದ ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿತ ಹಿನ್ನೆಲೆ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಸ್ಥಳಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿ ಹೋದ ರಸ್ತೆಯನ್ನು ಜೆಸಿಬಿ ಮೂಲಕ ದುರಸ್ಥಿ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಪಿಡಬ್ಲ್ಯೂಡಿ ಇಂಜಿನಿಯರ್ ಸಂತೋಷ ನೇತೃತ್ವದಲ್ಲಿ ರಸ್ತೆ ದುರಸ್ಥಿ ಕಾರ್ಯ ಆರಂಭವಾಗಿದೆ.
ಗಿರಿಧಾಮದ ವಸತಿ ಗೃಹದಲ್ಲಿ ತಂಗಿರುವ ಪ್ರವಾಸಿಗರಿಗೆ ಪರ್ಯಾಯ ವ್ಯವಸ್ಥೆ ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಗಿರಿಧಾಮದಿಂದ ಬೆಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಾರುಗಳು ಕೆಳಗೆ ಬರಲಾಗದೆ ಇದ್ದಿದ್ದರಿಂದ ಕಾಲ್ನಡಿಗೆಯಲ್ಲಿ ಸುಲ್ತಾನ ಪೇಟೆ ಮಾರ್ಗವಾಗಿ ಕೆಳಗೆ ಇಳಿಯಲು ಕೆಎಸ್ಟಿಡಿಸಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
30ಕ್ಕೂ ಹೆಚ್ಚು ಜನ ಪ್ರವಾಸಿಗರು ಬೆಟ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಸುಲ್ತಾನಪೇಟೆಯಿಂದ ಬೆಂಗಳೂರು ತಲುಪಲು ಕೆಎಸ್ಟಿಡಿಸಿಯ ಬಸ್ಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಟಿಡಿಸಿ ಹಿರಿಯ ಅಧಿಕಾರಿ ಟಿವಿ9 ಡಿಜಿಟಲ್ಗೆ ಮಾಹಿತಿ ನೀಡಿದ್ದಾರೆ.
ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ ಚಿಕ್ಕಬಳ್ಳಾಪುರದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಜೈಭೀಮ್ ನಗರ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದಲ್ಲಿ ನಡೆದಿದೆ. ವಿದ್ಯುತ್ ಕಂಬ ಬಿದ್ದಿರುವ ಪರಿಣಾಮ ನಂದಿ ಗಿರಿಧಾಮದಲ್ಲಿ ವಿದ್ಯುತ್ ಸಂಪೂರ್ಕ ಸ್ಥಗಿತವಾಗಿದೆ. ಅಲ್ಲದೆ ನಂದಿ ಗಿರಿಧಾಮದ ಕೆಲವೆಡೆ ಮರಗಳು ಕೂಡ ನೆಲಕ್ಕುರುಳಿವೆ. ಅದೃಷ್ಟವಷಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು
Karnataka Dams Water Level: ಇನ್ನೂ 3 ದಿನ ಮಳೆ ಹೆಚ್ಚಳ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Published On - 10:33 am, Wed, 25 August 21