AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್​​​ನಲ್ಲಿ ಮಾತ್ರ ಓಪನ್..!

ಪ್ರೇಮಿಗಳ ಪಾಲಿನ ಪ್ರೇಮಧಾಮ, ವಯೋವೃದ್ದರ ಪಾಲಿಗೆ ಆರೋಗ್ಯಧಾಮ, ಮಕ್ಕಳ ಪಾಲಿಗೆ ಆಟದ ಮೈದಾನ...ವಿಶ್ವವಿಖ್ಯಾತ ನಂದಿಗಿರಿಧಾಮ...ಅದರಲ್ಲೂ ಬೆಂಗಳೂರಿಗರ ಪಾಲಿಗಂತೂ ವಿಕೆಂಡ್​ ಹಾಟ್ ಫೇವರೆಟ್ ತಾಣ ಈ ಸುಂದರ ಪ್ರಕೃತಿ ಸೊಬಗಿನ ತಾಣ ನಂದಿಬೆಟ್ಟ. ಆದ್ರೆ ಈ ನಂದಿಬೆಟ್ಟದ ರಸ್ತೆಗೆ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ನಾಳೆಯಿಂದ (ಮಾರ್ಚ್ 24) ಒಂದು ತಿಂಗಳ ಕಾಲ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ ಬಂದ್ ಇರಲಿದೆ. ಆದ್ರೆ, ವೀಕೆಂಡ್​ ಎಂಜಾಯ್ ಮಾಡಲು ಅವಕಾಶವಿದೆ.

ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್​​​ನಲ್ಲಿ ಮಾತ್ರ ಓಪನ್..!
Nandi Hills
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 23, 2025 | 3:41 PM

Share

ಚಿಕ್ಕಬಳ್ಳಾಪುರ, (ಮಾರ್ಚ್ 23): ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ (Nandi Hills Road) ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ನಂದಿಗಿರಿಧಾಮದ ಅಂಕು ಡೊಂಕಿನ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೂ ಬರೋಬ್ಬರಿ 1 ತಿಂಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಆದ್ರೆ ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್​ ಶುಕ್ರವಾರ ಸಂಜೆ 6-30 ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲು ಬೆಟ್ಟದ ಕ್ರಾಸ್ ನಿಂದ ಬೆಟ್ಟದ ಮೇಲ್ಬಾಗದವರೆಗೂ ಸರಿಸುಮಾರು 7 ಮುಕ್ಕಾಲು ಕಿಲೋಮೀಟರ್ ದೂರದ ಅಂಕುಡೊಂಕಿನ ರಸ್ತೆಗೆ ಅಲ್ಲಲ್ಲಿ ಹಾಳಾಗಿದೆ. ಹೀಗಾಗಿ ರಸ್ತೆಗೆ ಸಂಪೂರ್ಣವಾಗಿ ಮರು ಡಾಂಬರೀಕರಣ ಮಾಡಬೇಕಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಾರದಲ್ಲಿ 5 ದಿನಗಳ ಕಾಲ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಅತಿಥಿ ಗೃಹಗಳ ಬುಕಿಂಗ್ ಮಾತ್ರ ಮಾಡಿಕೊಳ್ಳಬಹುದಾಗಿದೆ.

ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವಾರದ ಐದೂ ದಿನಗಳು ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಮಾರ್ಚ್ 24 ರಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಕಾಮಗಾರಿ ನಡೆಯಲಿದೆ.

1 ತಿಂಗಳು ಮಾತ್ರ ನಂದಿಗಿರಿಧಾಮ ಬಂದ್ ಮಾಡಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಸಾಧ್ಯವಾದಷ್ಟು ಬೇಗ ಡಾಂಬರೀಕರಣ ಮಾಡಿ ಮುಗಿಸಲು ಲೋಕೋಪಯೋಗಿ ಇಲಾಖೆಗೆ ಡಿಸಿ ಸೂಚನೆ ನೀಡಿದ್ದಾರೆ.

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?