50 ವರ್ಷದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.

50 ವರ್ಷದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್
50 ವರ್ಷ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 20, 2021 | 9:54 AM

ಚಿಕ್ಕಬಳ್ಳಾಪುರ: ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ಮುನಿಸಿಕೊಂಡಂತೆ ವರುಣರಾಯ ತನ್ನ ಪ್ರತಾಪ ತೋರುತ್ತಿದ್ದಾನೆ. ಮಳೆ ಬರಲಿ ಮಳೆ ಬರಲೀ ಎಂದು ಪರಿತಪ್ಪಿಸುತ್ತಿದ್ದ ಜಿಲ್ಲೆಯ ಜನತೆ ಇನ್ನು ಸಾಕಪ್ಪಾ ನಿನ್ನ ರೌದ್ರಾವತಾರ. ನಿಲ್ಲಿಸು ನಿನ್ನ ಆರ್ಭಟ ಎಂಬಂತಾಗಿದೆ. ಇದನ್ನೇ ಜಿಲ್ಲೆಯವರೇ ಆದ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ – 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ(chikkaballapur rains). ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದು ಸಂತೋಷ ಮಿಶ್ರಿತ ವಿಷಾದ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿ. ಜಿಲ್ಲೆಯಲ್ಲಿ ಈವರೆಗೆ 436 ಮನೆಗಳು ನೆಲಸಮವಾಗಿದೆ. ಬಿದ್ದ ಮನೆ ದುರಸ್ತಿಗೆ ₹ 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದಿದ್ದಾರೆ ಸಚಿವ ಡಾ.ಕೆ.ಸುಧಾಕರ್ (dr k sudhakar).

ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾ ಮಳೆ ಹಿನ್ನೆಲೆ ಶನಿವಾರ ಬೆಳ್ಳಂಬೆಳಿಗ್ಗೆ ಆರೋಗ್ಯ- ವೈದ್ಯಕೀಯ ಹಾಗೂ ಚಿಕ್ಕಬಳ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ .ಕೆ. ಸುಧಾಕರ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು. ಜಲಾವೃತವಾಗಿರುವ ಸೇತುವೆಗಳ ವೀಕ್ಷಣೆ ಮಾಡಿದರು. ನಗರದ ಕಂದವಾರ ಕೆರೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಅಲ್ಲಿಗೆ ತೆರಳಿ ವೀಕ್ಷಣೆ ಮಾಡಿದರು.

ಜಿಲ್ಲಾಡಳಿತ ಮಳೆ ಹಾನಿ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆಯನ್ನೇ ನಾನು ನೋಡಿಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿದೆ. ಎಚ್ಚರಿಕೆಯ ಮಧ್ಯೆಯೂ ಕೆಲವರು ನೀರಿಗಿಳಿಯುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಜನರನ್ನು ಎಚ್ಚರಿಸಬೇಕು. ಮಳೆ ಆಪತ್ತನ್ನು ಎಲ್ಲರೂ ಒಗ್ಗಟ್ಟಗಾಗಿ ಎದುರಿಸೋಣ. ಮನೆ ಕಳೆದುಕೊಂಡವರು ಆತಂಕ ಪಡಬೇಕಾಗಿಲ್ಲ. ಜಿಲ್ಲಾಡಳಿತ ನಿಮ್ಮ ಜೊತೆ ಇರುತ್ತೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದರು.

ಹರಿಯುವ ಉತ್ತರ ಪಿನಾಕಿನಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲ್ಕಾಪುರದ ಬಳಿ ಹರಿಯುವ ಉತ್ತರ ಪಿನಾಕಿನಿ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ರಾಯರೇಖಲಹಳ್ಳಿ ನಿವಾಸಿ ಕುಂಬಿ (55) ಕೊಚ್ಚಿ ಹೋದ ವ್ಯಕ್ತಿ. ಧಾರಾಕರ ಮಳೆಯಿಂದ ನದಿ ತುಂಬಿ ಹರಿಯುತ್ತಿರುವಾಗ ರಸ್ತೆ ದಾಟಲು ಹೋಗಿ ಕುಂಬಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಚಿಕ್ಕಬಳ್ಲಾಪುರ ನಗರಕ್ಕೆ ಜಲಕಂಟಕ ಎದುರಾಗಿದೆ. ಕೆರೆಯ ನೀರು ನಗರದ ಬಿಬಿ ರಸ್ತೆಯ ಮೇಲೆ ಹರಿಯುತ್ತಿದ್ದು ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರ ನಗರಸಭೆ ಬಿಬಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ. – ಭೀಮಪ್ಪ ಪಾಟೀಲ

Chikkaballapura Lake Flood|ನಿರಂತರ ಮಳೆಯಿಂದ ಅಪಾಯಕ್ಕೆ ಆಹ್ವಾನ ನೀಡ್ತಿದೆ ಕಂದವಾರ ಕೆರೆ|TV9 KANNADA

Published On - 9:36 am, Sat, 20 November 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ