New Year Celebration: ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ
ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ 6 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ.
ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ 6 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಂದಿಗಿರಿಧಾಮದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಿಂದ ಅನತಿ ದೂರದಲ್ಲಿರುವ ನಿಸರ್ಗ ಪ್ರಿಯರ ಮತ್ತು ಚಾರಣಿಗರ ಪ್ರೀತಿಯ ಪ್ರವಾಸಿ ತಾಣ ನಂದಿ ಬೆಟ್ಟವನ್ನು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1 ಬೆಳಿಗ್ಗೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ನಂದಿಬೆಟ್ಟದ ಮೇಲೆ ಕೊಠಡಿಗಳಲ್ಲಿ ತಂಗಲು ಅವಕಾಶವಿಲ್ಲ. ಡಿಸೆಂಬರ್ 31 ರಂದು ರೂಂ ಬುಕಿಂಗ್ ಗೆ ಅವಕಾಶವಿಲ್ಲ.
ಈ ಬಗ್ಗೆ ಪ್ರವೇಶ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದಾರೆ. ಇನ್ನು ಬೆಂಗಳೂರಿನ ನೆರೆಹೊರೆ ಜಿಲ್ಲೆಯಾಗಿರುವ ತುಮಕೂರು ಜಿಲ್ಲೆಯಲ್ಲಿ ಹಲವು ಚಾರಣ, ನೈಸರ್ಗಿಕ ಮತ್ತು ಧಾರ್ಮಿಕ ಪ್ರವಾಸಿ ತಾಣಗಳಿವೆ. ಇಂತಹ ಪ್ರದೇಶಗಳಿಗೆ ಎರಡು ದಿನ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮತ್ತಷ್ಟು ಓದಿ: Namma Metro: ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಅವಧಿ ವಿಸ್ತರಿಸಿದ BMRCL
ತುಮಕೂರು ಜಿಲ್ಲೆಯ ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟದಲ್ಲಿ ಪ್ರವೇಶ ನಿರ್ಬಂಧ ಮಾಡಲಾಗಿದೆ. ಡಿ.31 ಬೆಳಗ್ಗೆ 8 ಗಂಟೆಯಿಂದ ಜನವರಿ 2 ರ ಬೆಳಗ್ಗೆ 8 ಗಂಟೆವರೆಗೂ ನಿರ್ಬಂಧ ಮುಂದುವರಿಯಲಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಚಾಮುಂಡಿ ಬೆಟ್ಟ: ಇನ್ನು ಡಿ. 31ರ ರಾತ್ರಿ 9 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಬಂಧಿಸಲಾಗುತ್ತಿದೆ. ನಂತರ ಜನವರಿ 1ರ ಬೆಳಗ್ಗೆ 6 ಗಂಟೆ ನಂತರ ಸಾರ್ವಜನಿಕರು ಮತ್ತು ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಮೈಸೂರು ಸಿಟಿ ಪೊಲೀಸ್ ಆಯುಕ್ತ ರಮೇಶ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:17 pm, Fri, 30 December 22