Narendra Modi Chikkaballapur Visit: ಮುದ್ದೇನಹಳ್ಳಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಫರ್
Chikkaballapur: ಮಾರ್ಚ್ 25ರಂದು ಪ್ರಧಾನ ಮಂತ್ರಿ ನರೇಂದ್ರಯವರು, ಬೆಳಿಗ್ಗೆ 10.40ಕ್ಕೆ ನೇರವಾಗಿ ಹೆಲಿಕಾಪ್ಟರ್ ಮೂಲಕ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಗೆ ಆಗಮಿಸಿ, ಕಾಲೇಜು ಉದ್ಘಾಟನೆ ನಂತರ 12 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು (PM Narendra Modi) ಇದೇ ಮಾರ್ಚ್ 25ರಂದು ಬೆಳಗ್ಗೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಮುದ್ದೇನಹಳ್ಳಿ (Muddenahalli) ಗ್ರಾಮದ ಬಳಿ ಇರುವ ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ಆಗಮಿಸಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ. ಇದಕ್ಕಾಗಿ ಪೂರ್ವಸಿದ್ದತೆಗಳು ಭರದಿಂದ ಸಾಗಿವೆ. ಈ ಕುರಿತು ಒಂದು ವರದಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವುದರ ಮೂಲಕ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ, ಸತ್ಯ ಸಾಯಿ ಗ್ರಾಮದ (Sathya Sai Grama) ಸತ್ಯ ಸಾಯಿ ಸರಳಾ ಆಸ್ಪತ್ರೆಗೆ ಇದೆ ತಿಂಗಳ 25ರಂದು ಬೆಳಿಗ್ಗೆ 10.40ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯರು ಭೇಟಿ ನೀಡಲಿದ್ದಾರೆ. ಅಂದೇ ಆಸ್ಪತ್ರೆಯ ಎದುರುಗಡೆ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Sadguru Madhusudan Sai Institute of Medical Sciences and Research) ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಎಂದು ಗೋವಿಂದರೆಡ್ಡಿ, ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ. ಸತ್ಯಸಾಯಿ ಗ್ರಾಮ ಅವರು ಮಾಹಿತಿ ನೀಡಿದ್ದಾರೆ.
ನೂತನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 22 ವಿಭಾಗಗಳು ಇದ್ದು, ಒಂದು ನೂರು ಹಾಸಿಗೆಗಳ ಸಾಮರ್ಥ್ಯ ಕಲ್ಪಿಸಲಾಗಿದೆ. ಈಗಾಗಲೇ ಪ್ರತಿ ವರ್ಷ ನೂರು ವೈದ್ಯ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಕಾಲೇಜು ಉದ್ಘಾಟನೆ ಮಾಡಲಿರುವ ಕಾರಣ ಉಳಿದ ಸಣ್ಣಪುಟ್ಟ ಕಾಮಗಾರಿಗಳ ನಿರ್ವಹಣೆ ಜೋರಾಗಿದೆ ಸಾಗಿದೆ ಎಂದು ಡಾ. ರಘುಪತಿ ಎ.ಆರ್, ಡೈರೆಕ್ಟರ್, ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಸ್ಥೆ ತಿಳಿಸಿದ್ದಾರೆ.
ಮಾರ್ಚ್ 25ರಂದು ಪ್ರಧಾನ ಮಂತ್ರಿ ನರೇಂದ್ರಯವರು, ಬೆಳಿಗ್ಗೆ 10.40ಕ್ಕೆ ನೇರವಾಗಿ ಹೆಲಿಕಾಪ್ಟರ್ ಮೂಲಕ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಗೆ ಆಗಮಿಸಿ, ಕಾಲೇಜು ಉದ್ಘಾಟನೆ ನಂತರ 12 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಇದ್ರಿಂದ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್, ಎಸ್ಪಿಜಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುದ್ದೇನಹಳ್ಳಿ ಮಧುಸೂದನ ಸಾಯಿ ವೈದ್ಯಕೀಯ ಕಾಲೇಜಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಚಿತ ವೈದ್ಯಕೀಯ ಶಿಕ್ಷಣ!
ಮಧುಸೂದನ ಸಾಯಿ ವೈದ್ಯಕೀಯ ಕಾಲೇಜು ಸಂಸ್ಥೆಯು ಗ್ರಾಮೀಣ ಸೇವೆಯನ್ನು ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಶಿಕ್ಷಣವನ್ನು ನೀಡುತ್ತದೆ. ಉಚಿತ ವೈದ್ಯಕೀಯ ಶಿಕ್ಷಣವನ್ನು ನೀಡುತ್ತಿರುವ ದೇಶದ ಮೊದಲ ಸಂಸ್ಥೆ ಇದಾಗಿದೆ. ಇದು ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. 350 ಹಾಸಿಗೆಗಳಿರುವ ಸತ್ಯಸಾಯಿ ಸರಳಾ ಸ್ಮಾರಕ ಬೋಧನಾ ಆಸ್ಪತ್ರೆಯೂ ಸಂಸ್ಥೆಯ ಭಾಗವಾಗಿದೆ. ಇಲ್ಲಿ ಗ್ರಾಮಸ್ಥರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಎಂಬಿಬಿಎಸ್ ಜೊತೆಗೆ ವೈದ್ಯಕೀಯ ಪಿಜಿ, ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್‌ಗಳೂ ಇರುತ್ತವೆ.
ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:14 am, Mon, 20 March 23