AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಮಾರ್ಚ 17ಕ್ಕೆ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ: ಸಚಿವ ಸುಧಾಕರ್ ಮಾಹಿತಿ

ಒಂದೂವರೆ ಕೋಟಿ ಆಯುಷ್ಮಾನ್ ಕಾರ್ಡ್​​​ ವಿತರಣೆ‌ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾರ್ಚ್​ 17ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

PM Narendra Modi: ಮಾರ್ಚ 17ಕ್ಕೆ ಮತ್ತೆ  ಪ್ರಧಾನಿ ಮೋದಿ ಕರ್ನಾಟಕಕ್ಕೆ: ಸಚಿವ ಸುಧಾಕರ್ ಮಾಹಿತಿ
ಸಚಿವ ಕೆ ಸುಧಾಕರ್​​
ವಿವೇಕ ಬಿರಾದಾರ
|

Updated on: Feb 27, 2023 | 3:13 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಮತ ಕ್ರೋಢೀಕರಣ ಜೋರಾಗಿಯೆ ನಡೆಯುತ್ತಿದೆ. ಕಾಂಗ್ರೆಸ್ (Congress)​, ಬಿಜೆಪಿ (BJP), ಜೆಡಿಎಸ್​ (JDS) ಮೂರು ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ನಾನಾ ತಂತ್ರಗಳನ್ನು ಹೆಣೆಯುತ್ತಿವೆ. ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಕೇಂದ್ರ ಹಾಗೂ ರಾಜ್ಯ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಇಡುತ್ತಿದೆ. ಇನ್ನು ಬಿಜೆಪಿಯ ರಾಜ್ಯ ನಾಯಕರ ಜೊತೆಗೆ ಕೇಂದ್ರ ನಾಯಕರು ಕೂಡ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇದರ ಭಾಗವೆಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda), ಕೇಂದ್ರ ಗೃಹ ಸಚಿವ ಅಮಿತ್​ (Amith Shah) ಶಾ, ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಪ್ರಧಾನಿ ಮೋದಿ ಕಳೆದ 2-3 ತಿಂಗಳಲ್ಲಿ ಈಗಾಗಲೆ 5 ಬಾರಿ ರಾಜ್ಯ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಬರಲಿದ್ದಾರೆ. ಹೌದು ಬೆಂಗಳೂರು-ಮೈಸೂರು ಉದ್ಘಾಟನೆಗೆ ಮಾರ್ಚ್​ 11 ಮತ್ತು ಒಂದೂವರೆ ಕೋಟಿ ಆಯುಷ್ಮಾನ್ ಕಾರ್ಡ್​​​ ವಿತರಣೆ‌ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾರ್ಚ್​ 17ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ಭೇಟಿ ಬಹುತೇಕ ಕನ್ಫರ್ಮ್​​ ಆಗಿದೆ. ಚಿಕ್ಕಬಳ್ಳಾಪುರದಲ್ಲಿ 22 ಸಾವಿರ ಉಚಿತ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ಮೆಡಿಕಲ್ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮೂರು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಭೇಟಿಯ ದಿನಾಂಕವನ್ನು ಅಧಿಕೃತಗೊಳಿಸಬೇಕಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?