ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಮತ ಕ್ರೋಢೀಕರಣ ಜೋರಾಗಿಯೆ ನಡೆಯುತ್ತಿದೆ. ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಮೂರು ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ನಾನಾ ತಂತ್ರಗಳನ್ನು ಹೆಣೆಯುತ್ತಿವೆ. ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಕೇಂದ್ರ ಹಾಗೂ ರಾಜ್ಯ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಇಡುತ್ತಿದೆ. ಇನ್ನು ಬಿಜೆಪಿಯ ರಾಜ್ಯ ನಾಯಕರ ಜೊತೆಗೆ ಕೇಂದ್ರ ನಾಯಕರು ಕೂಡ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇದರ ಭಾಗವೆಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda), ಕೇಂದ್ರ ಗೃಹ ಸಚಿವ ಅಮಿತ್ (Amith Shah) ಶಾ, ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಪ್ರಧಾನಿ ಮೋದಿ ಕಳೆದ 2-3 ತಿಂಗಳಲ್ಲಿ ಈಗಾಗಲೆ 5 ಬಾರಿ ರಾಜ್ಯ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಬರಲಿದ್ದಾರೆ. ಹೌದು ಬೆಂಗಳೂರು-ಮೈಸೂರು ಉದ್ಘಾಟನೆಗೆ ಮಾರ್ಚ್ 11 ಮತ್ತು ಒಂದೂವರೆ ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾರ್ಚ್ 17ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ಭೇಟಿ ಬಹುತೇಕ ಕನ್ಫರ್ಮ್ ಆಗಿದೆ. ಚಿಕ್ಕಬಳ್ಳಾಪುರದಲ್ಲಿ 22 ಸಾವಿರ ಉಚಿತ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ಮೆಡಿಕಲ್ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮೂರು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಭೇಟಿಯ ದಿನಾಂಕವನ್ನು ಅಧಿಕೃತಗೊಳಿಸಬೇಕಿದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ