ಗ್ರಾಮ ಪಂಚಾಯತಿಗೆ ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್, ಡಾ. ಕೆ.ಸುಧಾಕರ್ ವಿರುದ್ಧ ಆಕ್ರೋಶ

| Updated By: ಆಯೇಷಾ ಬಾನು

Updated on: Jun 22, 2022 | 3:11 PM

ಪ್ರಕರಣ ದಾಖಲು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಆಗಮಿಸಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಕಾಶ್ ರೆಡ್ಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗ್ರಾಮ ಪಂಚಾಯತಿಗೆ ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್, ಡಾ. ಕೆ.ಸುಧಾಕರ್ ವಿರುದ್ಧ ಆಕ್ರೋಶ
ಗ್ರಾಮ ಪಂಚಾಯತಿಗೆ ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪ
Follow us on

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿಗೆ(Gram Panchayat) ನುಗ್ಗಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿರುವ ಆರೋಪ ಕೇಳಿ ಬಂದಿದೆ. ಕಚೇರಿಯಲ್ಲಿದ್ದ ಮನೆ ಮಂಜೂರಾತಿ ಆದೇಶ ಪತ್ರದ ಪೋಟೋ ಪ್ರೇಮ್ಸ್ ಹೊಡೆದು ಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿಯ ಕಚೇರಿಯಲ್ಲಿ ನಡೆದಿದೆ. ಹಾಗೂ ಕಾಂಗ್ರೆಸ್ ಮುಖಂಡ ಪ್ರಕಾಶ್ ರೆಡ್ಡಿ(Prakash Reddy) ಹಾಗೂ ಇತರರ ವಿರುದ್ಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಪ್ರಕರಣ ದಾಖಲು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಆಗಮಿಸಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಕಾಶ್ ರೆಡ್ಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ಪ್ರಕಾಶ್ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ-ಮಂಚೇನಹಳ್ಳಿ ಗೌರಿಬಿದನೂರು ರಸ್ತೆ ತಡೆದು ಆಕ್ರೋಶ ಹೊರ ಹಾಕಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ರಸ್ತೆಗಳು ಗುಂಡಿಮುಕ್ತವಾಗಬೇಕಾದರೆ ಪ್ರಧಾನಿ ಮೋದಿ ಅವರನ್ನು ಇಲ್ಲಿಗೆ ಅಗಾಗ್ಗೆ ಕರೆಸಿಕೊಳ್ಳುತ್ತಿರಬೇಕು: ಜಮೀರ್ ಅಹ್ಮದ್

ಸರ್ಕಾರಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಕೋಲಾರ ಜಿಲ್ಲೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರಿ ಆಸ್ಪತ್ರೆ ವೈದ್ಯನ ಮೇಲೆ ರೋಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಕಲಿ ಪ್ರಮಾಣಪತ್ರ ನೀಡದಿದ್ದಕ್ಕೆ ವಿನೋದ್ ಎಂಬಾತ ವೈದ್ಯ ಶ್ರೀನಿವಾಸ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದ. ಸದ್ಯ ಆರೋಪಿ ವಿನೋದ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:11 pm, Wed, 22 June 22