ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು; ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ
ಜನಪ್ರಿಯ ಪ್ರವಾಸಿ ಸ್ಥಳಗಳಾದ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜುಲೈ 2 ರಂದು ಬೆಳಿಗ್ಗೆ 6 ರಿಂದ ಜುಲೈ 3 ರ ಸಂಜೆ 6 ರವರೆಗೆ ನಿರ್ಬಂಧವು ಜಾರಿಯಲ್ಲಿರುತ್ತದೆ.
ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕರ್ನಾಟಕದ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರಿಯ ಪ್ರವಾಸಿ ಸ್ಥಳಗಳಾದ ನಂದಿಗಿರಿಧಾಮ (Nandigiridhama) ಮತ್ತು ಸ್ಕಂದಗಿರಿ ಬೆಟ್ಟಗಳಲ್ಲಿ (Skandagiri Hills) ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಜುಲೈ 2 ರಂದು ಬೆಳಿಗ್ಗೆ 6 ರಿಂದ ಜುಲೈ 3 ರ ಸಂಜೆ 6 ರವರೆಗೆ ನಿರ್ಬಂಧವು ಜಾರಿಯಲ್ಲಿರುತ್ತದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿಎನ್ ಆದೇಶ ಹೊರಡಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಷ್ಟ್ರಪತಿಗಳು ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯ ಕಾರಣಕ್ಕೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶವನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಕಲಂ 144(3)ರ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರಪತಿಗಳು ಜುಲೈ 3 ರಂದು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ‘ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್’ನ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Chikkaballapur: ಮೋಜು ಮಸ್ತಿಗೆ ಸಿಕ್ಕ ಸಿಕ್ಕ ಬೈಕ್ಗಳನ್ನು ಕದ್ದು ಮಾರಾಟ! ಇಬ್ಬರು ಆರೋಪಿಗಳು ಅರೆಸ್ಟ್
ಪ್ರಧಾನಿ ನರೇಂದ್ರ ಮೋದಿ ಕೂಡ ಕಳೆದ ಮಾರ್ಚ್ 25ರಂದು ಮುದ್ದೇನಹಳ್ಳಿಗೆ ಭೇಟಿ ನೀಡಿದ್ದರು. ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ತೆರಳಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಿದ್ದರು. ಆ ಸಂದರ್ಭದಲ್ಲಿಯೂ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:55 pm, Sat, 1 July 23