ಆಸ್ತಿ ವಿವಾದ: ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ

ಮೊದಲ ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಕೊಂದ ಪತಿ ಮತ್ತು ಮಗ - ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಲೆ ಮಾಡಿದ ಗಂಡ ಮುನಿರೆಡ್ಡಿ ಹಾಗೂ ಆತನ ಎರಡನೇ ಹೆಂಡತಿಯ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಆಸ್ತಿ ವಿವಾದ: ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ
ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 25, 2024 | 4:53 PM

ಆಸ್ತಿ ವಿವಾದದ ಹಿನ್ನೆಲೆಯಲ್ಲಿ (Property dispute) ಮೊದಲನೇ ಹೆಂಡತಿಯನ್ನು (Wife) ಗಂಡ (Husband) ಹಾಗೂ ಎರಡನೇ ಹೆಂಡತಿಯ ಮಗ ( Son) ಸೇರಿಕೊಂಡು ಮಚ್ಚಿನಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ (Sidlaghatta taluk in chikkaballapur) ಸೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಐವತ್ತು ವರ್ಷದ ಪದ್ಮಮ್ಮ ಕೊಲೆಯಾದ ಮಹಿಳೆ. ಇನ್ನು 60 ವರ್ಷದ ಮುನಿರೆಡ್ಡಿ ಹಾಗೂ ಈತನ ಎರಡನೇ ಪತ್ನಿಯ ಮಗ ಗಿರೀಶ್ ಕೊಲೆ ಮಾಡಿದ ಆರೋಪಿಗಳು. ಮೊದಲನೇ ಹೆಂಡತಿ ಪದ್ಮಮ್ಮಳಿಗೆ ಇಬ್ಬರು ಗಂಡು ಮಕ್ಕಳಿದ್ದು ದುರಾದೃಷ್ಟವಶಾತ್ ಇಬ್ಬರೂ ಗಂಡು ಮಕ್ಕಳು ಸಾವನ್ನಪ್ಪಿದ್ದಾರೆ. ಹಾಗಾಗಿ ಪದ್ಮಮ್ಮಳಿಗೆ ಕೊಟ್ಟಿದ್ದ ಆಸ್ತಿಯನ್ನು ಗಂಡ ವಾಪಸ್ ಕೊಡುವಂತೆ ಪಟ್ಟು ಹಿಡಿದಿದ್ದ.

ಮಕ್ಕಳಿಲ್ಲದ ನಿನಗೆ ಏಕೆ ಆಸ್ತಿ ಬೇಕು ನಾನು ನಿನಗೆ ಆಸ್ತಿ ಕೊಡುವುದಿಲ್ಲ ಎಂದು ಗಲಾಟೆ ಮಾಡಿದ್ದಾನೆ. ಇದೇ ವಿಚಾರ ನ್ಯಾಯಾಲಯದ ಮೆಟ್ಟಿಲು ಸಹ ಏರಿದೆ. ಆದರೆ ಇಂದು ಬೆಳಗ್ಗೆ ಗಂಡ ಮುನಿರೆಡ್ಡಿ ಮಚ್ಚಿನಿಂದ ಕೊಚ್ಚಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಲೆ ಮಾಡಿದ ಗಂಡ ಮುನಿರೆಡ್ಡಿ ಹಾಗೂ ಆತನ ಎರಡನೇ ಹೆಂಡತಿಯ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Also Read: ಅಜ್ಜವಾರ – ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ಭಾರೀ ವಂಚನೆ, ಹಾಲಿನ ಡೈರಿ ಗುಮಾಸ್ತ-ಕಾರ್ಯದರ್ಶಿ ಸಸ್ಪೆಂಡ್​

ಇನ್ನು ಮೃತ ಪದ್ಮಮ್ಮಳ ಇಬ್ಬರು ಗಂಡು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ, ಆದರೂ ಪದ್ಮಮ್ಮ ಕಷ್ಟಪಟ್ಟು ದುಡಿದು ಸ್ವಂತ ಮನೆ ನಿರ್ಮಾಣ ಮಾಡುತ್ತಿದ್ದಳು. ಇಂತಹದರಲ್ಲಿ ವಿಚ್ಚೇದಿತ ಗಂಡ ಕರುಣೆ ಇಲ್ಲದ ಕಟುಕನಂತೆ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇನ್ನು ಕೊಲೆಗೆ ಸಾಥ್ ನೀಡಿದ ಮಗ ಗಿರೀಶ್‌ನನ್ನು ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Tue, 25 June 24

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು