AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಕರ್ನಾಟಕದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡನನ್ನು 24 ದಿನಗಳ ಬಳಿಕ ಪೊಲೀಸರು ಬಂಧಿಸಿ ಯಶಸ್ವಿಯಾಗಿದ್ದರು. ಇದಿಗ ಸ್ಥಳ ಮಹಜರು ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ರಾಜೀವ್​ ಗೌಡನಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು
ರಾಜೀವ್​​ ಗೌಡ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 30, 2026 | 6:01 PM

Share

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ (Shidlaghatta Municipal Commissioner) ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಜಡ್ಜ್​ ಮೊಹಮ್ಮದ್ ರೋಷನ್ ಶಾ ತಾಕೀತು ಮಾಡಿದ್ದಾರೆ.

ಬರೋಬ್ಬರಿ 14ದಿನಗಳ ಬಳಿಕ ಕೇರಳ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ರಾಜೀವ್ ಗೌಡನಿಗೆ ಕೋರ್ಟ್​ ಮೊದಲು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಸ್ಥಳ ಮಹಜರು ಮಾಡಿ ತನಿಖೆ ಮಾಡಬೇಕಿದೆ. ಹೀಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದು, ಇದರ ಮೇರೆಗೆ ಕೋರ್ಟ್ ಎರಡು ದಿನ ರಾಜೀವ್ ಗೌಡನನ್ನು ಪೊಲಿಸ್ ಕಸ್ಟಡಿಗೆ ನೀಡಿತ್ತು. ಬಳಿಕ ಪೊಲೀಸರು ರಾಜೀವ್​ ಗೌಡನನ್ನು ಮಂಗಳೂರಿಗೆ ಕರೆದೊಯ್ದು ಎರಡು ದಿನ ಸ್ಥಳ ಮಹಜರು ಮಾಡಿದ್ದು, ಇಂದು (ಜನವರಿ 30) ಕಸ್ಟಡಿ ಅಂತ್ಯವಾಗಿದ್ದರಿಂದ ರಾಜೀವ್​ ಗೌಡನನ್ನು ಶಿಡ್ಲಘಟ್ಟ ಜಿಎಂಎಫ್​ ಕೋರ್ಟ್​ಗೆ ಹಾಜರುಪಡಿಸಿದರು. ಮತ್ತೊಂದೆಡೆ ರಾಜೀವ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ಪುರಸ್ಕರಿದ್ದು, ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.

ಇದನ್ನೂ ಓದಿ: ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿಬಿದ್ದಿದ್ದು ಹೇಗೆ?

ಏನಿದು ಧಮ್ಕಿ ಪ್ರಕರಣ?

ಬ್ಯಾನರ್ ತೆರವು ಮಾಡಿದ​ ವಿಚಾರವಾಗಿ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡಗೆ ಫೋನ್​ನಲ್ಲಿ ರಾಜೀವ್​​ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅಷ್ಟೇ ಅಲ್ಲದೇ ಜೀವ ಬೆದರಿಕೆ ಸಹ ಹಾಕಿದ್ದ. ಈ ಘಟನೆ ಸಂಬಂಧ ಅಮೃತಾ ಅವರು ನೀಡಿದ್ದ ದೂರಿನೆ ಮೇರೆಗೆ ಶಿಡ್ಲಘಟ್ಟ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ಆರೋಪಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ. ಇತ್ತ ಪೊಲೀಸರು ಸಹ ಮನೆಗೆ ತೆರಳಿ ನೋಟಿಸ್ ನೀಡಿ ಎಲ್ಲೆಡೆ ಹುಡುಕಾಡಿದ್ದರು. ಕೊನೆಗೆ 14 ದಿನದ ಬಳಿಕ ಮಂಗಳೂರಿನ ಉದ್ಯಮಿಯೊಬ್ಬರ ಆಶ್ರಯದಲ್ಲಿದ್ದ ರಾಜೀವ್ ಗೌಡ ಕೇರಳ ಗಡಿಭಾಗದಲ್ಲಿ ಸಿಕ್ಕಿಬಿದ್ದಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 30 January 26

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್