ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ: ಚಿಕ್ಕಮಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ

ಮನೆಯಲ್ಲಿ ವಯಸ್ಸಿಗೆ ಬಂದ ಮಗ ಅಥವಾ ಮಗಳು ಇದ್ದರೆ ಪೋಷಕರಿಗೆ ಅವರ ಮದ್ವೆ ಬಗ್ಗೆ ಚಿಂತೆ. ಅದರಲ್ಲೂ ಮುಖ್ಯವಾಗಿ ಮಗಳಿಗೆ ಮದುವೆ ಮಾಡಿವುದೇ ಅಪ್ಪ ಅಮ್ಮನಿಗೆ ದೊಡ್ಡ ಚಿಂತೆಯೇ ಆಗಿರುತ್ತೆ. ಮಗಳ ಮದುವೆಯನ್ನ ಕಣ್ತುಂಬಿಕೊಳ್ಳೋದು ಪ್ರತಿಯೊಬ್ಬ ತಂದೆಯ ಮಹದಾಸೆ ಆಗಿರುತ್ತೆ. ಮಗಳು ಅಷ್ಟೇ ತನ್ನ ತಂದೆಯ ಕಣ್‌ ಮುಂದೆ ದಾಂಪತ್ಯ ಜೀವನಕ್ಕೆ ಕಾಲಿಡಲು ಕನಸು ಕಾಣುತ್ತಾಳೆ. ಆದರೆ ಚಿಕ್ಕಮಗಳೂರಿನಲ್ಲೊಂದು ತರೀಕೆರೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ.

ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ: ಚಿಕ್ಕಮಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ
Chikkamagaluru Wedding
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Jan 20, 2025 | 6:22 PM

ಚಿಕ್ಕಮಗಳೂರು, (ಜನವರಿ 20): ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಿದೆ. ಚಂದ್ರು ಎನ್ನುವರೇ ಮಗಳ ಮದುವೆಯನ್ನು ಕಣ್ತುಂಬಿಕೊಳ್ಳದೇ ರಸ್ತೆ ಅಪಘಾತದಲ್ಲಿ ಕಣ್ಮುಚ್ಚಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಇಂದು (ಜನವರಿ 20) ಚಂದ್ರು ಮಗಳು ದೀಕ್ಷಿತಾಳ ಮದುವೆ ನಿಶ್ಚಯವಾಗಿತ್ತು. ಚಂದ್ರು ತನ್ನ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡೋ ತಯಾರಿಯಲ್ಲಿದ್ದರು. ಆದ್ರೆ, ನಿನ್ನೆ (ಜನವರಿ 19) ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಚಂದ್ರು ವಾಪಸ್ ಬರುವಾಗ ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇತ್ತ ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ಹೇಳಿದ ಸಂಬಂಧಿಕರು ಆರತಕ್ಷತೆ-ಮದುವೆ ಕಾರ್ಯವನ್ನು ಮುಗಿಸಿದ್ದಾರೆ. ಆದರೆ ಚಂದ್ರು ಸಾವನ್ನಪ್ಪಿದ್ದ ವಿಷಯ ಪತ್ನಿಗೂ ತಿಳಿದಿರಲಿಲ್ಲ. ಮಗಳಿಗೂ ಗೊತ್ತಿರಲಿಲ್ಲ.

ಮದುವೆ ಕಾರ್ಯಕ್ಕೆ ಓಡಾಡಿ ಸುಸ್ತಾಗಿ ಆಸ್ಪತ್ರೆ ಸೇರಿದ್ದಾರೆ ಎಂದು ಚಂದ್ರು ಪತ್ನಿ-ಮಗಳನ್ನ ನಂಬಿಸಿದ್ದಾರೆ. ಎಲ್ಲಾ ಮದುವೆ ಶಾಸ್ತ್ರ ಮುಗಿಯುವ ತನಕ ಆಸ್ಪತ್ರೆಯಲ್ಲೇ ಇಡಲಾಗಿದ್ದ ಚಂದ್ರು ಮೃತದೇಹವನ್ನು ಮನೆಗೆ ರವಾನಿಸಿ ಬಳಿಕ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ನವ ಜೋಡಿ ಹಾಗೂ ಸಂಬಂಧಿಕರು ಮದುವೆ ಮಂಟಪದಿಂದ ಮನೆಗೆ ಓಡೋಡಿ ಹೋಗಿದ್ದಾರೆ. ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು