ಕೃಷಿ ಸಚಿವ ಪಾಟೀಲ್ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ಭೀಕರ ಅಪಘಾತ: ಕೃಷಿ ಇಲಾಖೆಯ ಇಬ್ಬರ ದುರ್ಮರಣ

Sidlaghatta: ಕೃಷಿ ಸಚಿವ ಬಿಸಿ ಪಾಟೀಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರ್ತವ್ಯ ನಿರ್ವಹಿಸಿ, ವಾಪಸ್ ತೆರಳುತಿದ್ದಾಗ ಅಪಘಾತಕ್ಕೆ ತುತ್ತಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಿಂಡಿಪಾಪನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

ಕೃಷಿ ಸಚಿವ ಪಾಟೀಲ್ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ಭೀಕರ ಅಪಘಾತ: ಕೃಷಿ ಇಲಾಖೆಯ ಇಬ್ಬರ ದುರ್ಮರಣ
ಕೃಷಿ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ಭೀಕರ ಅಪಘಾತ: ಕೃಷಿ ಇಲಾಖೆಯ ಇಬ್ಬರ ದುರ್ಮರಣ (ಒಳ ಚಿತ್ರದಲ್ಲಿ ಅಧಿಕಾರಿ ವಿನಯ್)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 19, 2022 | 8:44 PM

ಶಿಡ್ಲಘಟ್ಟ: ಅಪರಿಚಿತ ವಾಹನ ಹರಿದು ಕೃಷಿ ಇಲಾಖೆಯ (agriculture department) ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಕೃಷಿ ಸಚಿವ ಬಿಸಿ ಪಾಟೀಲ್ (BC Patil) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರ್ತವ್ಯ ನಿರ್ವಹಿಸಿ, ವಾಪಸ್ ತೆರಳುತಿದ್ದಾಗ ಅಪಘಾತಕ್ಕೆ ತುತ್ತಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಿಂಡಿಪಾಪನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕೃಷಿ‌ ಅಧಿಕಾರಿ ವಿನಯ್ ಹಾಗೂ ಇಲಾಖೆಯ ಗುತ್ತಿಗೆ ನೌಕರ ಲೊಕೇಶ್ ಮರಣಕ್ಕೆ ತುತ್ತಾದವರು. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಅವರ ‌ಕಾರ್ಯಕ್ರಮಕ್ಕೆ ಆಗಮಿಸಿ, ವಾಪಸ್ ಶಿಡ್ಲಘಟ್ಟದತ್ತ (Sidlaghatta) ತೆರಳುತಿದ್ದಾಗ ಈ ದುರ್ಘಟನೆ ನಡೆದಿದೆ.

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಬಿಬಿಎಂಪಿ ನಕಲಿ ಟ್ಯಾಕ್ಸ್ ಇನ್ಸ್​ಪೆಕ್ಟರ್​​ ಬೆಂಗಳೂರಲ್ಲಿ ಬಿಬಿಎಂಪಿ ನಕಲಿ ಟ್ಯಾಕ್ಸ್ ಇನ್ಸ್​ಪೆಕ್ಟರ್​​ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಸಿಕ್ಕಿಬಿದಿದ್ದಾನೆ. ಫ್ಲ್ಯಾಟ್ ಖಾತೆ ಬದಲಾವಣೆಗೆ ಚಂದ್ರು 25 ಸಾವಿರ ಲಂಚ ಕೇಳಿದ್ದಾನೆ. ಸರ್ಕಾರಿ ಅಧಿಕಾರಿ ಎಂದುಕೊಂಡು ಎಸಿಬಿಗೆ ವ್ಯಕ್ತಿಯೋರ್ವ ದೂರು ನೀಡಿದ್ದಾನೆ. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಎಸಿಬಿ ಅಧಿಕಾರಿಗಳು, ದಾಳಿ ವೇಳೆ ಚಂದ್ರು ಬಿಬಿಎಂಪಿ ಅಧಿಕಾರಿ ಅಲ್ಲ ಅನ್ನೋದು ಪತ್ತೆಯಾಗಿದೆ. ಆರೋಪಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿರುವ ಶಂಕೆ ವ್ಯಕ್ತವಾಗಿದೆ. ಚಂದ್ರುನನ್ನು ಬಂಧಿಸಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅಬಕಾರಿ ಇಲಾಖೆ ಮೇಲೆ ಎಸಿಬಿ ದಾಳಿ; ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಬಕಾರಿ ಇಲಾಖೆ ಮೇಲೆ ಎಸಿಬಿ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, 20,000 ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಬಕಾರಿ ಪಿಎಸ್‌ಐ ಪ್ರೀತಿ ರಾಥೋಡ್‌ ಸಿಕ್ಕಿಬಿದಿದ್ದಾರೆ. ಕಾರವಾರ ಕೋಡಿಭಾಗ ಮೂಲದ ಮುಸ್ತಾಕ್ ಹಸನ್ ಬೇಗ್ ಎಂಬವದರಿಂದ ಲಂಚ ಪಡೆಯುತ್ತಿದ್ದ ಪ್ರೀತಿ, 50 ಸಾವಿರಕ್ಕೆ ಲಂಚ ಬೇಡಿಕೆ ಇಟ್ಟು ಸಿಕ್ಕಿಬಿದಿದ್ದಾರೆ.

ಇದನ್ನೂ ಓದಿ: ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ಸಹಾಯಧನದಲ್ಲಿ ಕಾಶಿ ಯಾತ್ರೆ ಪ್ರವಾಸ; ರಾಜ್ಯ ಸರ್ಕಾರ ಆದೇಶ

ಡಿಗ್ರಿ ಮುಗಿದು 2ವರ್ಷಗಳಾದರೂ ಸಿಗದ ಉದ್ಯೋಗ; ಕಾಲೇಜು ಸಮೀಪವೇ ಚಹಾ ಮಾರುತ್ತಿರುವ ಯುವತಿ

Published On - 6:07 pm, Tue, 19 April 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?