Sadhuguru Jaggi Vasudev: ಇಶಾ ಫೌಂಡೇಷನ್ ತಮಿಳುನಾಡಿನಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗುತ್ತಾ? ಸ್ಥಳ ಮಹತ್ವ ಏನು?

Isha Foundation: ನಿರೀಕ್ಷೆಯಂತೆ ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಹೇಳಿದಂತೆ ಆಶ್ರಮದ ನಿರ್ಮಾಣ ಕಾಮಗಾರಿ ಮುಂದುವರೆದಿದ್ದು ಆಶ್ರಮದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ.

Sadhuguru Jaggi Vasudev: ಇಶಾ ಫೌಂಡೇಷನ್ ತಮಿಳುನಾಡಿನಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗುತ್ತಾ? ಸ್ಥಳ ಮಹತ್ವ ಏನು?
ತಮಿಳುನಾಡಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್​ ಆಗಿದ್ದೇಕೆ ಇಶಾ ಫೌಂಡೇಷನ್?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 28, 2022 | 5:06 PM

ಚಿಕ್ಕಬಳ್ಳಾಪುರ : ಇಶಾ ಫೌಂಡೇಷನ್ (Isha Foundation) ಸಂಸ್ಥಾಪಕ, ಆಧ್ಯಾತ್ಮಿಕ ಗುರು, ಯೋಗ ಗುರು, ಸದ್ಗುರು ಎಂದು ಖ್ಯಾತಿಯಾಗಿರುವ ಜಗ್ಗಿ ವಾಸುದೇವ್ (Sadhuguru Jaggi Vasudev), ತಮಿಳುನಾಡಿನಂತೆ ತವರು ರಾಜ್ಯ ಕರ್ನಾಟಕ, ಅದರಲ್ಲೂ ರಾಜಧಾನಿ ಬೆಂಗಳೂರಿನಿಂದ 50 ಕಿ.ಮೀ. ದೂರದಲ್ಲಿರುವ ಚಿಕ್ಕಬಳ್ಳಾಪುರ (Chikkaballapur) ಬಳಿ ಇಶಾ ಫೌಂಡೇಷನ್ ಆಶ್ರಮ ನಿರ್ಮಾಣ ಮಾಡುತ್ತಿದ್ದಾರೆ. ಆಶ್ರಮದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ನಿರ್ಮಾಣ ಕಾರ್ಯ ಇನ್ನೇನು ಬಹುತೇಕ ಮುಗಿದಿದ್ದು, ಹೊಸವರ್ಷ 2023ರ ಜನವರಿ 15 ರಂದು ಆದಿಯೋಗಿ ಪ್ರತಿಮೆ ಅನಾವರಣಗೊಳ್ಳಲಿದೆ.

ಆಶ್ರಮ ಎಲ್ಲಿದೆ:

ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮದ ಬಳಿ ನೂತನ ಇಶಾ ಫೌಂಡೇಷನ್ ನ ಆಶ್ರಮ ಕಾಮಗಾರಿ ನಡೆದಿದೆ. ಚಿಕ್ಕಬಳ್ಳಾಪುರ ನಗರದಿಂದ 7 ಕಿ.ಮೀ. ದೂರದಲ್ಲಿರುವ ಆವಲಗುರ್ಕಿ ಗ್ರಾಮದಲ್ಲಿ ಆಶ್ರಮ ನಿರ್ಮಾಣ ಕಾರ್ಯ ಜೋರಾಗಿದೆ. ಸುಮಾರು 200 ಎಕರೆ ವಿಶಾಲ ಪ್ರದೇಶದಲ್ಲಿ ಆಶ್ರಮ ತಲೆ ಎತ್ತಿದೆ. ಆಶ್ರಮಕ್ಕೆ ಮುಕುಟ ಪ್ರಾಯದಂತೆ 112 ಅಡಿ ಎತ್ತರದ ಆದಿಯೋಗಿ ಮೂರ್ತಿ ನಿರ್ಮಾಣ ಮಾಡಿದ್ದು, ಉದ್ಘಾಟನೆಗೆ ಸನ್ನದ್ಧವಾಗಿದೆ.

ಇಶಾ ಆಶ್ರಮಕ್ಕೆ ಹೇಗೆ ಹೋಗುವುದು:

ರಾಜಧಾನಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ, ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಲಿಂಗಶೆಟ್ಟಿಪುರ, ಕರ‍್ನಹಳ್ಳಿ ಮೂಲಕ ಆಶ್ರಮಕ್ಕೆ ಹೋಗಬಹುದು. ಮತ್ತೊಂದು ಚಿಕ್ಕಬಳ್ಳಾಪುರ ನಗರದಿಂದ ಪ್ರಶಾಂತ ನಗರ, ಹನುಮಂತಪುರ, ನರಸಿಂಹಸ್ವಾಮಿ ದೇವಸ್ಥಾನ ಮೂಲಕ ಆಶ್ರಮಕ್ಕೆ ಹೋಗಬಹುದು. ಮತ್ತೊಂದು ಚಿಕ್ಕಬಳ್ಳಾಪುರ ನಗರದಿಂದ ಮುಸ್ಟೂರು ರಸ್ತೆ ಮೂಲಕವೂ ಆಶ್ರಮಕ್ಕೆ ತೆರಳಬಹುದು.

ಜನವರಿ 15 ರಂದು ಆದಿಯೋಗಿ ಮೂರ್ತಿ ಉದ್ಘಾಟನೆ:

ನಿರೀಕ್ಷೆಯಂತೆ ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಹೇಳಿದಂತೆ ಆಶ್ರಮದ ನಿರ್ಮಾಣ ಕಾಮಗಾರಿ ಮುಂದುವರೆದಿದ್ದು ಆಶ್ರಮದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ. ಇದರಿಂದ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ|| ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿ ಹೇಗೆ?

ಇಶಾ ಫೌಂಡೇಷನ್ ಮುಖ್ಯಸ್ಥರು ಹೇಳುವ ಹಾಗೆ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಆಗಮಿಸುವವರು ಇಶಾ ಫೌಂಡೇಷನ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ನೋಂದಣಿ ಮಾಡಿಕೊಳ್ಳಬೇಕು.

ತಮಿಳುನಾಡಿನಲ್ಲಿ ತೊಂದರೆಯಾದ್ದರಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್​:

sadhguru jaggi vasudev new ashram at chikkaballapur

ತಮಿಳುನಾಡಿನ ಕೊಯಮತ್ತೂರು ಬಳಿ ವಿಶಾಲವಾದ ಇಶಾ ಫೌಂಡೇಷನ್ ನ ಆಶ್ರಮವಿದೆ. ಸದ್ಗುರು ಜಗ್ಗಿ ವಾಸುದೇವನ್ ಇಷ್ಟಪಟ್ಟು ಆಶ್ರಮ ಮಾಡಿಕೊಂಡಿದ್ದಾರೆ. ಆದರೆ ಇತ್ತೀಚೆಗೆ ಅಲ್ಲಿ ಕೆಲವು ಕಿರಿಕಿರಿಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್​ ಆದರೂ ಆಗಬಹುದೆಂದು ಅವರ ಅನುಯಾಯಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಿಂದ ಕೇವಲ 60 ಕಿ.ಮೀ. ದೂರದಲ್ಲಿದ್ದು ರಾಜಧಾನಿಯ ಅವರ ಅನುಯಾಯಿಗಳು ಬಂದುಹೋಗುವುದಕ್ಕೆ ಅನುಕೂಲವಾಗುತ್ತದೆ. ಅದೇ ಕಾರಣಕ್ಕೆ ಸಾವಿರಾರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನ ಅತ್ಯಾಧುನಿಕ ಮಾದರಿಯ ಆಶ್ರಮ ಕೆಲಸ ಭರದಿಂದ ಸಾಗಿದೆ.

ಚಿಕ್ಕಬಳ್ಳಾಪುರಕ್ಕೆ ಮತ್ತೊಂದು ಪ್ರವಾಸಿತಾಣದ ಗರಿ:

ಚಿಕ್ಕಬಳ್ಳಾಪುರ ಜಿಲ್ಲೆ ಈಗಾಗಲೇ ವಿವಿಧ ಪ್ರವಾಸಿತಾಣಗಳ ಮೂಲಕ ಖ್ಯಾತಿಯಾಗಿದೆ. ವಿಶ್ವ ಪ್ರಸಿದ್ದ ನಂದಿ ಗಿರಿಧಾಮ ಸೇರಿದಂತೆ ಚಾರಣಿಗರ ಅಚ್ಚುಮೆಚ್ಚಿನ ತಾಣ ಸ್ಕಂದಗಿರಿ, ಚನ್ನಗಿರಿ, ಆವಲಬೆಟ್ಟ, ಕೈವಾರ ಬೆಟ್ಟ ಪ್ರಸಿದ್ದಿಯಾಗಿವೆ. ಇನ್ನು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥ, ಚಿಂತಾಮಣಿಯ ಕೈವಾರ ಕ್ಷೇತ್ರ, ಮುರಗಮಲ್ಲ ದರ್ಗಾ, ಚಿಕ್ಕಬಳ್ಳಾಪುರದ ನಂದಿಯ ಭೋಗನಂದೀಶ್ವರ, ಶ್ರೀನಿವಾಸಸಾಗರ ಜಲಾಶಯ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿವೆ. ಇನ್ನು ನೂತನ ಇಶಾ ಆಶ್ರಮದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ ಅನಾವರಣದಿಂದ ಮತ್ತೊಂದು ನೂತನ ಪ್ರವಾಸಿ ತಾಣ ತಲೆ ಎತ್ತಿದಂತಾಗಿದೆ.

ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

Published On - 3:55 pm, Wed, 28 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್