AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ; ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್

ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ; ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್
ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ
TV9 Web
| Edited By: |

Updated on:Jul 13, 2022 | 9:20 PM

Share

ಚಿಕ್ಕಬಳ್ಳಾಪುರ: ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇಂದು ಅದ್ದೂರಿಯಾಗಿ ನಡೆದಿದ್ದು ಘಟಿಕೋತ್ಸವದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಅಣು ವಿಜ್ಞಾನಿ R.ಚಿದಂಬರಂ, ಇಸ್ರೋ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್, ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಆಶ್ರಮದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಇನ್ನು ಘಟಿಕೋತ್ಸವದಲ್ಲಿ ಸಚಿವರಾದ ಸುಧಾಕರ್, ಎಂಟಿಬಿ ನಾಗರಾಜ್ ಭಾಗಿಯಾಗಿದ್ದರು.

ಶಿಕ್ಷೆಯಿಂದ ಬದಲಾವಣೆ ಆಗಲ್ಲ, ಬದುಕುವುದಕ್ಕಾಗಿ ಜೀವನ ವ್ಯರ್ಥ ಸತ್ಯಸಾಯಿ ಮಾನವ ಅಭ್ಯುದಯ ವಿವಿ ಘಟಿಕೋತ್ಸವದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಿದ್ರು. ವಿಶ್ವದಲ್ಲಿ ಸ್ವೇಚ್ಛಾಚಾರ ಬಹುದೊಡ್ಡ ಸಮಸ್ಯೆ ಉಂಟುಮಾಡಿದೆ. ಭಾಷೆ ಹಾಗೂ ಪೂಜೆಗಳು ಬೇರೆಬೇರೆ ಆದ್ರೆ ಸಮಸ್ಯೆಗಳು ಆಗುತ್ತವೆ. ಶಿಕ್ಷೆಯಿಂದ ಬದಲಾವಣೆ ಆಗಲ್ಲ, ಬದುಕುವುದಕ್ಕಾಗಿ ಜೀವನ ವ್ಯರ್ಥ. ಪರೋಪಕಾರಕ್ಕಾಗಿ ಬದುಕುವುದೇ ಶ್ರೇಷ್ಠ. ವಿಜ್ಞಾನ, ಪರಂಪರೆಯನ್ನ ಒಟ್ಟಿಗೆ ಕೊಂಡೊಯ್ಯುವ ಕೆಲಸವಾಗಬೇಕು. ಕೆಲಸ ಮಾಡುವಾಗ ಯೋಚಿಸಿ ಮಾಡಬೇಕು. ಭೌತಿಕವಾಗಿ ದೇಶ ಬಲಿಷ್ಠಗೊಳಿಸುವಂತೆ, ಮಾನಸಿಕವಾಗಿಯೂ ಕಟ್ಟಬೇಕು. ಆಧ್ಯಾತ್ಮಿಕ ಭಾರತ ಮಾತ್ರವೇ ಪ್ರಪಂಚದ ಸರ್ವಶ್ರೇಷ್ಠ ಭಾರತ. ಭಾರತ ಹಿಂದೂ ರಾಷ್ಟ್ರವಾಗಿದ್ದು ಇಲ್ಲಿರುವ ದೇವರು ಒಂದೇ ಆಗಿದೆ. ಈ ವಿಚಾರದಲ್ಲಿ ಕೆಲವರು ಗೊಂದಲ ಮೂಡಿಸುತ್ತಾರೆ. ಸತ್ಯ ಕರುಣ ಪ್ರೇಮ ಭಾರತದ ಆತ್ಮವಾಗಬೇಕಿದೆ ಎಂದು ಭಾಗವತ್‌ ಭಾಷಣದಲ್ಲಿ ಹೇಳಿದ್ರು.

Published On - 8:12 pm, Wed, 13 July 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!