AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರಣ ಪ್ರಿಯರಿಗೆ ಗುಡ್​ನ್ಯೂಸ್​! ಆರು ತಿಂಗಳ ಬಳಿಕ ಸ್ಕಂದಗಿರಿಯಲ್ಲಿ ಮತ್ತೆ ಟ್ರೆಕ್ಕಿಂಗ್ ಶುರು

ಬರೋಬ್ಬರಿ ಆರು ತಿಂಗಳ ಬಳಿಕ ಸ್ಕಂದಗಿರಿ ಮತ್ತು ಕೈವಾರ ಬೆಟ್ಟಗಳಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೊಡಗು, ಚಿಕ್ಕಮಗಳೂರು ಘಟನೆಗಳಿಂದ ನಿಷಿದ್ಧವಾಗಿದ್ದ ಚಾರಣ ಇದೀಗ ಎಸ್‌ಒಪಿ ಅಳವಡಿಕೆಯಿಂದ ಪುನರಾರಂಭಗೊಂಡಿದೆ. ಪ್ರಕೃತಿ ಪ್ರೀಯರು, ಚಾರಣಿಗರು ಮತ್ತೆ ಈ ರಮಣೀಯ ತಾಣಗಳತ್ತ ಮುಖ ಮಾಡಿದ್ದಾರೆ.

ಚಾರಣ ಪ್ರಿಯರಿಗೆ ಗುಡ್​ನ್ಯೂಸ್​! ಆರು ತಿಂಗಳ ಬಳಿಕ ಸ್ಕಂದಗಿರಿಯಲ್ಲಿ ಮತ್ತೆ ಟ್ರೆಕ್ಕಿಂಗ್ ಶುರು
ಸ್ಕಂದಗಿರಿImage Credit source: tv9 kannada
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 11, 2026 | 8:07 PM

Share

ಮುಖ್ಯಾಂಶಗಳು

  • ಚಿಕ್ಕಬಳ್ಳಾಪುರ ತಾಲೂಕಿನ ಸ್ಕಂದಗಿರಿ, ಕೈವಾರ ಬೆಟ್ಟದಲ್ಲಿ ಅವಕಾಶ
  • 6 ತಿಂಗಳ ಬಳಿಕ ಚಾರಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
  • SOP ಜಾರಿ ಹಿನ್ನೆಲೆ ಚಾರಣಕ್ಕೆ ಅವಕಾಶ

ಚಿಕ್ಕಬಳ್ಳಾಪುರ, ಅಕ್ಟೋಬರ್​​ 11: ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಗ್ರಾಮದ ಬಳಿ ಇರುವ ಸ್ಕಂದಗಿರಿ ಬೆಟ್ಟ ಪ್ರಕೃತಿಯ ಸೌಂದರ್ಯವನ್ನು ಹೊದ್ದುಕೊಂಡಿದೆ. ಬರೋಬ್ಬರಿ ಆರು ತಿಂಗಳ ಬಳಿಕ ಇದೀಗ ಪ್ರಸಿದ್ಧ ಸ್ಕಂದಗಿರಿ ಬೆಟ್ಟ ಹಾಗೂ ಕೈವಾರ ಬೆಟ್ಟದಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಪ್ರಕೃತಿ ಹಾಗೂ ಚಾರಣ ಪ್ರಿಯರು ಮತ್ತೆ ಸ್ಕಂದಗಿರಿಯತ್ತ ಮುಖ ಮಾಡಿದ್ದಾರೆ.

ಸ್ಕಂದಗಿರಿ ಹಾಗೂ ಕೈವಾರ ಬೆಟ್ಟದಲ್ಲಿ ಚಾರಣಕ್ಕೆ ಅವಕಾಶ

ರಾಜಧಾನಿ ಬೆಂಗಳೂರಿನ ಜನರು ಸ್ಕಂದಗಿರಿತ್ತ ಮುಖ ಮಾಡುತ್ತಿದ್ದರು. ಆದರೆ ಕೊಡಗು ಹಾಗೂ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಡೆದ ಕೆಲವು ಅಹಿತಕರ ಘಟನೆಯಿಂದ ರಾಜ್ಯ ಸರ್ಕಾರ ಕಳೆದ ಆರು ತಿಂಗಳುಗಳಿಂದ ರಾಜ್ಯದಲ್ಲಿರುವ ಎಲ್ಲಾ ಚಾರಣ ತಾಣಗಳಲ್ಲಿ ಚಾರಣಕ್ಕೆ ನಿರ್ಬಂಧಿಸಲಾಗಿತ್ತು. ಆದರೆ ಈಗ ಅರಣ್ಯ ಪ್ರದೇಶದ ಸುರಕ್ಷತೆ ಹಾಗೂ ಚಾರಣ ನಿರ್ವಹಣೆಗೆ ಸಂಬಂಧಿಸಿದಂತೆ ಎಸ್‌ಒಪಿ ರೂಪಿಸಿ ಅನುಷ್ಠಾನಗೊಳಿಸಿದ ಹಿನ್ನಲೆ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತೆ ಸ್ಕಂದಗಿರಿ ಹಾಗೂ ಕೈವಾರ ಬೆಟ್ಟದಲ್ಲಿ ಚಾರಣಕ್ಕೆ ಅವಕಾಶ ಕಲ್ಪಿಸಿದ್ದಾರೆ.

LIVE TV

ಇದನ್ನೂ ಓದಿ: ಖಾಸಗಿ ದರ್ಬಾರ್, ಚಾಮುಂಡಿ ದರ್ಶನ: ಮೈಸೂರು ದಸರಾ ಉದ್ಘಾಟನೆಯ ಸುಂದರ ಕ್ಷಣಗಳು; ಇಲ್ಲಿವೆ ಫೋಟೋಸ್​​

ಇನ್ನೂ ಸ್ಕಂದಗಿರಿ ಹಾಗೂ ಕೈವಾರ ಬೆಟ್ಟದಲ್ಲಿ ಚಾರಣಕ್ಕೆ ಅವಕಾಶ ಸಿಕ್ಕಿದ್ದೆ ತಡ, ಮೊದಲನೇ ದಿನವಾದ ಇಂದು, 150 ಜನ ಚಾರಣಿಗರು ಆಗಮಿಸಿದ್ದು, ಸ್ಕಂದಗಿರಿ ಬೆಟ್ಟದಲ್ಲಿ ಪ್ರಕೃತಿ ಸೌಂದರ್ಯ ಸವಿದರು. ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು, ಬೆಟ್ಟದ ತುದಿಯಿಂದ ಸುತ್ತಲಿನ ಸುಂದರ ದೃಶ್ಯಗಳನ್ನು ಕಣ್ತುಂಬಿಕೊಳ್ಳಬೇಕು ಎಂಬ ಆಸೆಯಿಂದ ಚಾರಣಿಗರು ಸ್ಕಂದಗಿರಿಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಗೇ ಡೇಟಿಂಗ್ ಆ್ಯಪ್​​ ಮೂಲಕ ಪರಿಚಯ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಮೂವರ ಬಂಧನ

ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ವ್ಯಕ್ತಿಗೆ 250 ರೂ ಪ್ರವೇಶ ಶುಲ್ಕ ಹಾಗೂ ಶನಿವಾರ, ಭಾನುವಾರ ಚಾರಣ ಕೈಗೊಳ್ಳುವವರಿಗೆ 500 ರೂ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಆದರೆ ಚಾರಣ ಹಣವಿದ್ದವರಿಗೆ ಮಾತ್ರ ಎನ್ನುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?