ಬೆನಕನ ಅಮಾವಾಸ್ಯೆ; ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ

| Updated By: preethi shettigar

Updated on: Sep 07, 2021 | 1:04 PM

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿ ಅನೇಕ ಭಕ್ತರು ಭಾಗಿಯಾಗಿದ್ದರು.

ಬೆನಕನ ಅಮಾವಾಸ್ಯೆ; ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ
Follow us on

ಚಿಕ್ಕಬಳ್ಳಾಪುರ: ನಗರದ ಹೊರಹೊಲಯದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆನಕನ ಅಮಾವಾಸ್ಯೆ ಹಿನ್ನಲೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್, ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿ ಅನೇಕ ಭಕ್ತರು ಭಾಗಿಯಾಗಿದ್ದರು.

ಚುಂಚಶ್ರೀಗಳು ಮಂಗಳಾರತಿ ಮಾಡುವುದನ್ನು ನೋಡುವುದೇ ಚೆಂದ
ಡಾ. ನಿರ್ಮಲಾನಂದನಾಥರಿಗೂ ಚಿಕ್ಕಬಳ್ಳಾಪುರದ ವೀರಾಂಜನೇಯನಿಗೂ ಅವಿನಾಭಾವ ಸಂಬಂಧವಿದೆ. ಇದಕ್ಕೂ ಮೊದಲು ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖ ಮಠದ ಪೀಠಾಧ್ಯಕ್ಷರಾಗಿದ್ದರು. ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದರೂ ಕೂಡ ವೀರಾಂಜನೇಯನನ್ನು ಮರೆತಿಲ್ಲ. ಹೀಗಾಗಿ ಇಂದು ಹುಣ್ಣಿಮೆ ಅಮಾವಾಸ್ಯೆಗೆ ವಿಶೇಷ ಪೂಜೆ ನೆರವೇರಿಸಿ ಧನ್ಯರಾಗಿದ್ದಾರೆ.

ಬೀದರ್: ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿಯೇ ದೇವರ ದರ್ಶನ
ಮಬ್ಬು ಕತ್ತಲಿನ ಗುಹೆಯಲ್ಲಿ ಸದಾ ಹರಿಯುವ ನೀರಿನಲ್ಲಿ ಸುಮಾರು 300 ಅಡಿಗಳಷ್ಟು ದೂರ ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿ ನಡೆದು ಹೋಗಿ, ದೇವರ ದರ್ಶನ ಪಡೆಯುವುದು ಒಂದು ವಿಶಿಷ್ಟ ಅನುಭವ. ಇಂತಹ ಅನುಭವಕ್ಕೆ ಸಾಕ್ಷಿಯಾಗಿರುವುದು ಬೀದರ್ ಹೊರವಲಯದಲ್ಲಿರುವ ನರಸಿಂಹ ಝರಣಿ ಗುಹಾ ದೇವಾಲಯ. ಇದು ಕರ್ನಾಟಕದ ಅಪರೂಪದ ಯಾತ್ರಾಸ್ಥಳ. ಜತೆಗೆ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ.

ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರಗಳಿಂದ ಅಪಾರ ಪ್ರಮಾಣದ ಭಕ್ತರು, ನವ ವಧುವರರು ನರಸಿಂಹ ಝರಣಿಗೆ ಬಂದು ಪೂಜಿಸುವ ಸಂಪ್ರದಾಯವಿದೆ. ಮಕ್ಕಳಾಗದ ದಂಪತಿ, ಸಂತಾನ ಪ್ರಾಪ್ತಿಗಾಗಿ ನರಸಿಂಹ ದೇವರಲ್ಲಿ ಹರಕೆ ಕಟ್ಟಿಕೊಳ್ಳುತ್ತಾರೆ. ಹೆರಿಗೆಗೆ ತವರಿಗೆ ಹೋಗುವ ಮುನ್ನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಹೋಗುವ ರೂಢಿಯಿದೆ. ಮಕ್ಕಳಾದ ಮೇಲೆ ಬಂದು ಮಗುವಿನ ಜಾವಳ ತೆಗೆಸುವ ಅಥವಾ ತೊಟ್ಟಿಲು ಬಿಡುವ ಹರಕೆ ಇಲ್ಲಿ ಸಲ್ಲಿಸುತ್ತಾರೆ.

ನರಸಿಂಹ ಝರಣಿ ಗುಹಾ ದೇವಾಲಯಕ್ಕೆ ಸುಮಾರು 300 ಅಡಿಗಳಷ್ಟು ದೂರ ನಡೆದು ಹೋಗಿ ದೇವರ ದರ್ಶನ ಮಾಡಬೇಕು. ಗುಹೆಯ ಮಬ್ಬುಗತ್ತಲಿನಲ್ಲಿ ನೀರಿನಲ್ಲಿ ನಡೆದು ಹೋಗಲು ಮಾನಸಿಕ ಸಿದ್ಧತೆ ಇದ್ದರೆ ದರ್ಶನ ಸುಲಭ. ಗುಹೆಯೊಳಗಿನ ನೀರು ಯಾವುದೇ ಸಂದರ್ಭದಲ್ಲೂ ಎದೆಮಟ್ಟ ಮೀರುವುದಿಲ್ಲ. ಈ ನೀರಲ್ಲಿ ಎಷ್ಟು ಸಲ ಓಡಾಡಿದರೂ ಶೀತ ಆಗುವುದಿಲ್ಲ. ಈ ನೀರಿನಲ್ಲಿ ಗಂಧಕ (ಸಲ್ಫರ್)ದ ಅಂಶವಿದೆ. ನೀರು ಚಳಿಗಾಲದಲ್ಲೂ ಬೆಚ್ಚಗಿನ ಅನುಭವ ನೀಡುತ್ತದೆ.

ಈ ನೀರಿನಲ್ಲಿ ನಡೆದರೆ ಚರ್ಮದ ರೋಗಗಳು ನಿವಾರಣೆ
ಈ ದೇವಾಲಯಕ್ಕೆ ಸಾಗುವ ನೀರಿನಲ್ಲಿ ನಡೆದರೆ ಚರ್ಮದ ರೋಗಗಳು ನಿವಾರಣೆ ಆಗುತ್ತವೆ ಎಂಬ ನಂಬಿಕೆ ಇದೆ. ಗುಹೆಯೊಳಗೆ ನಡೆದು ಸ್ವಾಮಿಯ ದರ್ಶನಕ್ಕೆ ಹೋಗುವಾಗ ಧರಿಸಲು ಅಗತ್ಯ ಬಟ್ಟೆ, ಟವೆಲ್, ಲುಂಗಿ, ಮಹಿಳೆಯರಿಗೆ ಪ್ರತ್ಯೇಕ ಸೀರೆ ತರಬೇಕು. ಕೌಂಟರ್‌ನಲ್ಲಿ ಟಿಕೆಟ್ ಪಡೆದು ಸಾಲಿನಲ್ಲಿ ಗುಹೆ ಮುಂಭಾಗದಿಂದ ನರಸಿಂಹ ದೇವರ ಕಡೆಗೆ ನಡೆದು ಸಾಗಬೇಕು. ಅದಕ್ಕೂ ಮೊದಲು ಗುಹೆಯಿಂದ ಹರಿದು ಗೋಮುಖದ ಮೂಲಕ ಬರುವ ನೀರಿನಲ್ಲಿ ಮೈ ತೊಳೆದುಕೊಳ್ಳಬೇಕು.

ಗುಹೆಯೊಳಕ್ಕೆ ಹೋಗದೇ ಹಿಂದಿರುಗುವವರಿಗೆ ಇಲ್ಲಿಯೇ ಪೂಜೆ, ಮಂಗಳಾರತಿ ಮಾಡಿ ಕೊಡುವ ವ್ಯವಸ್ಥೆಯೂ ಇದೆ. ವಿಶೇಷ ಪೂಜೆ ಮಾಡಿಸುವವರು ಅರ್ಚಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. ಸಾಮಾನ್ಯ ಪೂಜೆಗಾಗಿ ಅರ್ಚಕರೊಬ್ಬರು ಗುಹೆಯೊಳಗೆ ಇರುತ್ತಾರೆ. ನರಸಿಂಹ ಜಯಂತಿಯಂದು ಇಲ್ಲಿ ವಿಶೇಷ ಪೂಜೆ, ಹೋಮ-ಹವನಗಳು ನಡೆಯುತ್ತವೆ. ಅದನ್ನು ಬಿಟ್ಟರೆ ಇಲ್ಲಿ ವರ್ಷದಲ್ಲಿ ವಿಶೇಷ ಆಚರಣೆಗಳಿಲ್ಲ.

ಇದನ್ನೂ ಓದಿ:
ಶಿಕ್ಷಕನ ನೆನಪಿಗಾಗಿ ದೇವಾಲಯ ನಿರ್ಮಾಣ; 96 ವರ್ಷಗಳ ಹಿಂದಿನ ದೇವಸ್ಥಾನಕ್ಕೆ ನಿತ್ಯವೂ ಪೂಜೆ ಸಲ್ಲಿಸಿ ಸ್ಮರಿಸುತ್ತಿರುವ ಗ್ರಾಮಸ್ಥರು

ಶ್ರಾವಣ ಮಾಸದಲ್ಲಿ ರಾಜಸ್ತಾನದ ಪರಶುರಾಮ್ ಮಹಾದೇವ್ ದೇವಸ್ಥಾನದಲ್ಲಿ ಭಕ್ತರಿಂದ ವಿಶಿಷ್ಟ ರೀತಿಯ ಪೂಜೆ

Published On - 12:53 pm, Tue, 7 September 21