AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

Sri Sathya Sai Medical College, Muddenahalli: ಭಾರತ ರತ್ನ ವಿಶ್ವೇಶ್ವರಯ್ಯನವರ ಗ್ರಾಮವೂ ಹೌದು ಇದು. ತನ್ಮಯತೆಯಿಂದ ಸೇವಾ ಸಮರ್ಪಣೆಯನ್ನು ನೋಡಿದ್ದೇನೆ. ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ಇದು ಅನುಕರಣೀಯ. ಉಚಿತ ಆಸ್ಪತ್ರೆ ನಡೆಸುವುದಕ್ಕೆ ಅನೇಕ ಕಷ್ಟಗಳು ಎದುರಾಗುತ್ತವೆ. ಮೆಡಿಕಲ್ ಕಾಲೇಜು ಉಚಿತವಾಗಿ ನಡೆಸಲು ನಿರ್ಧರಿಸಲಾಗಿದೆ. ಇದು ಪ್ರಪಂಚದ‌ ಮೊದಲ ಉಚಿತ ಮೆಡಿಕಲ್ ಕಾಲೇಜು ಆಗಲಿದೆ ಎಂದು ಅಮಿತ್ ಶಾ ಘೋಷಿಸಿದರು.

ಮುದ್ದೇನಹಳ್ಳಿ  ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
TV9 Web
| Updated By: ಸಾಧು ಶ್ರೀನಾಥ್​|

Updated on:Apr 01, 2022 | 4:59 PM

Share

ಮುದ್ದೇನಹಳ್ಳಿ (ಚಿಕ್ಕಬಳ್ಳಾಪುರ): ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಲಾನ್ಯಾಸ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಹಕಾರ ಸಚಿವರೂ ಆದ ಅಮಿತ್​ ಶಾ ಅವರು (Amit Shah) ಒಳ್ಳೆಯ ಕಾರ್ಯದಲ್ಲಿ ಭಾಗಿಯಾಗುವ ಸೌಭಾಗ್ಯ ದೊರಕಿದೆ. ಅನೇಕ ಸಂತ ಮಹಾತ್ಮರು ಸೇವೆಯಿಂದಲೇ ದೇಶವನ್ನು ಯುಗ ಯುಗಗಳಿಂದ ಮುನ್ನಡೆಸಿದ್ದಾರೆ. ನಿಸ್ವಾರ್ಥ ಸೇವೆ ನೋಡಿ ನನಗೆ ಹೆಚ್ಚು ಮಾತಾಡುವ ಅವಶ್ಯಕತೆ ಇಲ್ಲ. ಭಾರತ ರತ್ನ ವಿಶ್ವೇಶ್ವರಯ್ಯನವರ ಗ್ರಾಮವೂ ಹೌದು ಇದು. ತನ್ಮಯತೆಯಿಂದ ಸೇವಾ ಸಮರ್ಪಣೆಯನ್ನು ನೋಡಿದ್ದೇನೆ. ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ಇದು ಅನುಕರಣೀಯ. ಉಚಿತ ಆಸ್ಪತ್ರೆ ನಡೆಸುವುದಕ್ಕೆ ಅನೇಕ ಕಷ್ಟಗಳು ಎದುರಾಗುತ್ತವೆ.  ಆದರೂ ಇಲ್ಲಿ ಉಚಿತವಾಗಿ ಮೆಡಿಕಲ್ ಕಾಲೇಜು ನಡೆಸಲು ನಿರ್ಧರಿಸಲಾಗಿದೆ. ಇದು ಪ್ರಪಂಚದ‌ ಮೊದಲ ಉಚಿತ ಮೆಡಿಕಲ್ ಕಾಲೇಜು ಆಗಲಿದೆ (Sri Sathya Sai Medical College, Muddenahalli) ಎಂದು ಅಮಿತ್ ಶಾ ಘೋಷಿಸಿದರು.

ಪರಿವರ್ತನೆ ಮತ್ತು ಆಧುನಿಕತೆಯ ಮೂಲಕ ಸೇವೆಯನ್ನು ನಡೆಸಲಾಗುತ್ತಿದೆ. ನಮ್ಮದು ಒಂದು ಪರಂಪರೆ ಇದೆ ಎಂದ ಕೇಂದ್ರ ಸಚಿವ ಅಮಿತ್​ ಶಾ ಅವರು ವೇದ ಉಪನಿಷತ್ತಿನಲ್ಲಿ ಇಡೀ ಜಗತ್ತಿನ ಸಮಸ್ಯೆಗಳಿಗೆ ಪರಿಹಾರವಿದೆ. ಭಾರತೀಯ ನೃತ್ಯ ಸಂಗೀತ ಮನಸ್ಸಿನ ಆಹ್ಲಾದಕ್ಕೆ ಮಾತ್ರವಲ್ಲ, ಮನಸ್ಸಿನ ಚಿರಶಾಂತಿ ಸಮಚಿತ್ತತೆಗೂ ನೃತ್ಯ ಸಂಗೀತ ಮುಖ್ಯ. ವೇದ ವಿಜ್ಞಾನ, ಸಂಗೀತ ನೃತ್ಯಕ್ಕೂ ಮುಂದೆ ವೇದಿಕೆ ಸೃಷ್ಟಿಸಲಾಗುವುದು. ಕೇವಲ ಶಿಕ್ಷಣ ನೀಡುವುದು ಮಾತ್ರ ಮಹತ್ವದ ಕೆಲಸ ಅಲ್ಲ. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದೂ ಮಹತ್ವದ ಕೆಲಸ ಎಂದರು.

ಮುದ್ದೇನಹಳ್ಳಿಯಲ್ಲಿ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರ್ವೇ ಸಂತು ನಿರಾಮಯ ಎಂಬ ಯೋಚನೆಯೊಂದಿಗೆ ಮೋದಿ ಸರ್ಕಾರ ಕೆಲಸ ಮಾಡ್ತಿದೆ. ಕೇವಲ ಏಳು ವರ್ಷಗಳಲ್ಲಿ 500 ಕ್ಕೂ ಹೆಚ್ಚು ಮೆಡಿಕಲ್ ಕಾಲೇಜ್ ಪ್ರಾರಂಭ ಮಾಡಿದ್ದೇವೆ. 89 ಸಾವಿರಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳು ಪ್ರತಿವರ್ಷ ಅಧ್ಯಯನ ಮಾಡ್ತಾರೆ. ಬಹುದೊಡ್ಡ ಮೆಡಿಕಲ್ ಎಜುಕೇಷನ್ ಸೌಕರ್ಯ ಒದಗಿಸುವ ಕೆಲಸ ಮೋದಿ ಸರಕಾರ ಮಾಡಿದೆ ಎಂದು ಅಮಿತ್ ಶಾ ಹೇಳಿದರು. ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಬಹುರೂಪದ ಮೆಡಿಕಲ್ ಸೌಲಭ್ಯ ಸಿಗುವಂತೆ ಮಾಡಿದ್ದೇವೆ. ಜನೌಷಧ ಕೇಂದ್ರವನ್ನೂ ಕೂಡ ಪ್ರಾರಂಭಿಸಿದೆವು, ಕಡಿಮೆ ಬೆಲೆಗೆ ಔಷಧ ಸಿಗುತ್ತಿದೆ. ವೆಲ್ ನೆಸ್ ಸೆಂಟರ್ ಗಳು ಹಾಗೂ ಯೋಗವನ್ನು ಜೋಡಿಸುವ ಮೂಲಕ ರೋಗ ನಿಯಂತ್ರಣ ಸಾಧ್ಯವಾಗಿದೆ. ಗುಡ್ ಬಿಹೇವಿಯರ್ ನಿಂದ ಆರೋಗ್ಯವು ನಿಯಂತ್ರಣ ಸಾಧ್ಯವಾಗಿದೆ. ಭಾರತೀಯ ಸಂಸ್ಕೃತಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಭಾರತಕ್ಕೆ ಗೌರವ ಹೆಚ್ಚುವ ಕೆಲಸ ಮೋದಿ ಮಾಡಿದ್ದಾರೆ ಎಂದು ಅಮಿತ್​ ಶಾ ಹೆಮ್ಮೆಪಟ್ಟರು.

Also Read: ನಾವು ಕರ್ನಾಟಕವನ್ನ ರಾಹುಲ್ ಗಾಂಧಿ -ಸೋನಿಯಾ ಗಾಂಧೀಜಿಗೆ ಗೆಲ್ಲಿಸಿ ಕೊಡಬೇಕು :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ

Also Read: ಹುಟ್ಟೂರಲ್ಲಿ ಮಣ್ಣಿನ ಮಗನಿಗೆ ಮ್ಯೂಸಿಯಂ -ಎಚ್ ಡಿ ದೇವೇಗೌಡರ ಮ್ಯೂಸಿಯಂನಲ್ಲಿ ಏನೆಲ್ಲಾ ಇರಲಿದೆ, ವಿವರ ಇಲ್ಲಿದೆ

Published On - 4:54 pm, Fri, 1 April 22

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?