ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

Nandi Hills Rope Way: ವಿಶ್ವವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ರೋಪ್ ವೇ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023 ಮಾರ್ಚ್ 27 ರಂದು ಶಂಕು ಸ್ಥಾಪನೆ ಮಾಡಿದ್ದರು. ಆದರೆ, ಇದೀಗ ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ರಾಜ್ಯ ಸರ್ಕಾರ ಎಳ್ಳುನೀರು ಬೀಡುತ್ತಾ ಎಂಬ ಪ್ರಶ್ನೆ ಮೂಡಿದೆ.

ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು
ಹೆಚ್​ಕೆ ಪಾಟೀಲ್​
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 11, 2023 | 6:59 PM

ಚಿಕ್ಕಬಳ್ಳಾಫುರ, ಆ.11: ನಂದಿಹಿಲ್ಸ್ ರೋಪ್ ವೇ(Nandi Hills Rope Way) ಬಗ್ಗೆ ನಾನು ಈಗ ಏನು ಹೇಳುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್(HK Patil) ಹೇಳಿದ್ದಾರೆ. ಇಂದು(ಆ.11) ನಂದಿಗಿರಿಧಾಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ ನಂದಿಹಿಲ್ಸ್ ರೋಪ್ ವೇ ಬಗ್ಗೆ ಬಹಳ ಮಾತುಕತೆ ಆಗಿದ್ದವು. ರೋಪ್ ವೇ ಕಾಮಗಾರಿಯ ಬಗ್ಗೆ ದೊಡ್ಡ ಹಣದ ಸಂಖ್ಯೆಗಳು ಬಂದವು. ಆದ್ರೆ, ಯಾವುದೇ ಕಾಮಗಾರಿ ಆಗಿಲ್ಲ. ಮುಂದೆ ಏನು ಆಗಬೇಕೋ ಅದರ ಕಡೆ ಗಮನ ಕೊಡುತ್ತೇನೆ ಎಂದರು. ಈ ಮೂಲಕ ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ರಾಜ್ಯ ಸರ್ಕಾರ ಎಳ್ಳುನೀರು ಬೀಡುತ್ತಾ ಎಂಬ ಪ್ರಶ್ನೆ ಮೂಡಿದೆ.

ರೋಪ್ ವೇ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬರೊಬ್ಬರಿ 94 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿಹಿಲ್ಸ್ ರೋಪ್ ವೇ ನಿರ್ಮಾಣ ಮಾಡಲು 2023 ಮಾರ್ಚ್ 27 ರಂದು ಶಂಕು ಸ್ಥಾಪನೆ ಮಾಡಿದ್ದರು. ಜೊತೆಗೆ ಇದೇ ವೇಳೆ ಜಿಲ್ಲೆಯಲ್ಲಿ 800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡವನ್ನ ಉದ್ಘಾಟಿಸಿದ್ದರು. ಅಂದು ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಸಿಎಂ ಗೆ ಸಾಥ್ ನೀಡಿದ್ದರು.

ಇದನ್ನೂ ಓದಿ: Nandi Hills: ಪ್ರವಾಸಿಗರಿಗೆ ಗುಡ್ ನ್ಯೂಸ್, ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಪ್ರವೇಶದ ಸಮಯ ಬದಲಾವಣೆ

ರೋಪ್ ವೇ ಕಾಮಗಾರಿ ಯಾವ ಹಂತದಲ್ಲಿದೆ

ಪ್ರವಾಸಿತಾಣ ನಂದಿಗಿರಿಧಾಮದ ಬುಡದಲ್ಲಿ ರಾಜ್ಯ ಸರ್ಕಾರ 7 ಎಕರೆ ಜಮೀನು ಮಂಜೂರು ಮಾಡಿದೆ. 50 ಲಕ್ಷ ರೂಪಾಯಿ ಹಣ ಸಹ ಮಂಜೂರು ಮಾಡಿದೆ. ಜಮೀನಿನ ಸುತ್ತಲು ತಂತಿ ಬೆಲೆ ಹಾಕಿ ಬೀಡಲಾಗಿದೆ. ಅರಣ್ಯ ಇಲಾಖೆಯಿಂದ ಎನ್.ಒ.ಸಿ ನೀಡಬೇಕಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟನಲ್ಲಿ ತಡೆಯಾಜ್ಞೆ ಇದೆ. ಇದ್ರಿಂದ ಕಾಮಗಾರಿ ಆರಂಭವಾಗುವುದು ಸದ್ಯ ಅನುಮಾನ ಇದೆ.

ನಂದಿ ಗಿರಿಧಾಮಕ್ಕೆ ರೋಪ್ ವೇ ಕನಸು ಕಂಡಿದ್ದ ದಿವಂಗತ ನಟ ಶಂಕರ್​ನಾಗ್

ಹೌದು, ವಿಶ್ವವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ರೋಪ್ ವೇ ನಿರ್ಮಾಣದ ಕನಸನ್ನು ಅಂದೇ ದಿವಂಗತ ನಟ ಶಂಕರ್​ನಾಗ್ ಕಂಡಿದ್ದರು. ಆದರೆ, ಅಂತಿಮ ರೂಪಕ್ಕೆ ಬಂದಿರಲಿಲ್ಲವಾಗಿತ್ತು. ಅಂದು ರಾಜ್ಯ ಸರ್ಕಾರ 94 ಕೋಟಿ ರೂಪಾಯಿಗಳ ಅನುದಾನದಲ್ಲಿ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗಿರಿಧಾಮಕ್ಕೆ ಆಗಮಿಸಿ ಶಂಕು ಸ್ಥಾಪನೆ ಮಾಡಿದ್ದರು. ಇದರಿಂದ ಶಂಕರ್​ನಾಗ್​ ಕನಸಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದಂತಾಗಿತ್ತು. ಆದರೆ, ಇದೀಗ ಸರ್ಕಾರ ಬದಲಾಗಿದ್ದು, ಈ ಕಾಮಗಾರಿ ಬಗ್ಗೆ ತಲೆಕೆಡಸಿಕೊಂಡಂತೆ ಕಾಣುತ್ತಿಲ್ಲ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 11 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ