ಚಿಂತಾಮಣಿ: ಶಂಕಿತ ಹುಲಿ ಉಗುರು ಪತ್ತೆ; ಯುವಕ ಪರಾರಿ

ಗಾಂಜಾ ಸಂಗ್ರಹಿಸಿದ ಮಾಹಿತಿ ಪಡೆದು ನವೀನ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಮೇಲಿನ ಕೊಠಡಿಯಲ್ಲಿ ಹುಲಿ ಉಗುರು ಮಾದರಿಯ ವಸ್ತು ಪತ್ತೆಯಾಗಿದೆ. ಅದನ್ನು ಪೊಲೀಸರು ಚಿಂತಾಮಣಿ ತಾಲ್ಲೂಕು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದು, ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್​ರವರು ಈಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಚಿಂತಾಮಣಿ: ಶಂಕಿತ ಹುಲಿ ಉಗುರು ಪತ್ತೆ; ಯುವಕ ಪರಾರಿ
ಚಿಂತಾಮಣಿಯಲ್ಲಿ ಹುಲಿ ಉಗುರು ಪತ್ತೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 08, 2023 | 5:12 PM

ಚಿಕ್ಕಬಳ್ಳಾಪುರ, ನ.08: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಹುಲಿ ಉಗುರು(Tiger Claw) ಪ್ರಕರಣ ಸಧ್ಯಕ್ಕೆ ಮುಗಿಯುವ ತರ ಕಾಣುತ್ತಿಲ್ಲ. ಹೌದು, ಬಿಗ್​ ಬಾಸ್​ ಮನೆಯಿಂದ ಶುರುವಾಗಿ, ರಾಜಕಾರಣಿಗಳವರೆಗೂ ಬಂದಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೂಲದೇನಹಳ್ಳಿ ಗ್ರಾಮದ ಮನೆಯೊಂದರ ಮೇಲೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ಮಾಡಿದಾಗ ಶಂಕಿತ ಹುಲಿ ಉಗುರು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಸಂಗ್ರಹಿಸಿದ ಆರೋಪ ಮೇರೆಗೆ ದಾಳಿ

ಗಾಂಜಾ ಸಂಗ್ರಹಿಸಿದ ಮಾಹಿತಿ ಪಡೆದು ನವೀನ್ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಮೇಲಿನ ಕೊಠಡಿಯಲ್ಲಿ ಹುಲಿ ಉಗುರು ಮಾದರಿಯ ವಸ್ತು ಪತ್ತೆಯಾಗಿದೆ. ಆ ವಸ್ತುವನ್ನು ಪೊಲೀಸರು ಚಿಂತಾಮಣಿ ತಾಲ್ಲೂಕು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.‌ ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್​ರವರು ಈಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇನ್ನು ವಿಷಯ ತಿಳಿದು ನವೀನ್‌ ಪರಾರಿಯಾಗಿದ್ದು, ಆತನಿಗಾಗಿ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದರ ಜೊತೆಗೆ ಪತ್ತೆಯಾಗಿರುವ ಉಗರುನ್ನು ಎಫ್​ಎಸ್​ಎಲ್​ಗೆ ಕಳುಹಿಸಿಕೊಡಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಹುಲಿ ಉಗುರು ವಿವಾದ: ಹುಲಿಯುಗುರು ಡಾಲರ್ ಧರಿಸಿದ್ದ ಚಿಕ್ಕಮಗಳೂರಿನ ಇಬ್ಬರು ಅರ್ಚಕರಿಗೆ 14-ದಿನ ನ್ಯಾಯಾಂಗ ಕಸ್ಟಡಿ!

ಹುಲಿ ಉಗುರಿನ ಪೆಂಡೆಂಟ್​ ಧರಿಸಿ ಅಮಾನತಾಗಿದ್ದ ಡಿಆರ್​ಎಫ್​ಒ

ಚಿಕ್ಕಮಗಳೂರು ಅಕ್ಟೋಬರ್​ 27 ರಂದು ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅವರನ್ನು ಅಮಾನತುಗೊಳಿಸಲಾಗಿತ್ತು. ಹೌದು, ಹುಲಿ ಉಗುರು ಧರಿಸಿದ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿತ್ತು. ಬಳಿಕ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಇವರು ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಇನ್ನು ಈ ಕುರಿತು ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Wed, 8 November 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ