ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ವಿರುದ್ಧ ಎಫ್‌ಐಆರ್​ ದಾಖಲು ಮಾಡಲಾಗಿದೆ. 

ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು
ಶಿಕ್ಷಕ ಆರ್.ರಂಗಧಾಮಯ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 06, 2023 | 9:29 PM

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ (harassment) ಆರೋಪ ಕೇಳಬಂದಿರುವಂತಹ ಘಟನೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 354(A), 354(D), 504ರಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿದೆ.

ಅಷ್ಟೇ ಅಲ್ಲದೇ ಮನೆಗೆ ಬಂದರೆ ಮಾತ್ರ ಶಾಲೆಯ ದಿನವಹಿ ದಾಖಲಾತಿ ನೀಡುವುದಾಗಿ ಆರೋಪಿಸಲಾಗಿದೆ. ಶಿಕ್ಷಕಿ ಹೋದ ಕಡೆಯೆಲ್ಲಾ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಸಹೋದ್ಯೋಗಿಯಿಂದ ನೊಂದು ಸಹ ಶಿಕ್ಷಕಿ ಪೊಲೀಸರ ಮೊರೆ ಹೋಗಿದ್ದು, ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ಆರ್‌.ರಂಗಧಾಮಯ್ಯ ವಿರುದ್ಧ ಎಫ್‌ಐಆರ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Madikeri News: 2 ವರ್ಷದ ಮಗು, ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಪತಿ: ಬಂಧನ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ: ಮಹಿಳೆಯರಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಮಹಿಳೆಯರಿಗೆ ಸಣ್ಣ, ಪುಟ್ಟ ಗಾಯಗಳಾಗಿರುವಂತಹ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಬಳಿಯ, ಪದುಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಟಿಟಿ ವಾಹನದಲ್ಲಿ ಇಪ್ಪತ್ತು ಮಹಿಳಾ ಕಾರ್ಮಿಕರು ತೆರುಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ.

ಟಿಟಿ ವಾಹನ ಪಲ್ಟಿಯಾಗಿ ಬೀಳುತ್ತಿದ್ದಂತೆ ಒಳಗೆ ಸಿಲುಕಿದ್ದ ಮಹಿಳೆಯರ ರಕ್ಷಣೆಗೆ ಸ್ಥಳೀಯರು ಧಾವಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಪರೀಕ್ಷೆಯಲ್ಲಿ ಫೇಲ್​; ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹ: 2 ಮಕ್ಕಳ ಜೊತೆ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾದ ತಂದೆ 

ಬೀದರ್: ಇಬ್ಬರು ಮಕ್ಕಳ ಜೊತೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರಿನಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್(28), ಪುತ್ರಿ ತನು(6), ಪುತ್ರ ಸಾಯಿರಾಜ್(5) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವಾಗೆ ಶಂಕಿಸಲಾಗಿದೆ. ಮೂವರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸ್ಥಳಕ್ಕೆ ಹುಮ್ನಾಬಾದ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.