Accident: ಹಾವನ್ನು ಉಳಿಸಲು ಹೋಗಿ ರಸ್ತೆ ಮಧ್ಯೆ ಬ್ರೇಕ್ ಹಾಕಿದ ಟ್ರಕ್ ಚಾಲಕ, ಹಿಂದೆಯಿಂದ ಬಂದ 5 ವಾಹನಗಳು ಡಿಕ್ಕಿ

ಹಾವೊಂದನ್ನು ಉಳಿಸಲು ಹೋಗಿ ಟ್ರಕ್ ಚಾಲಕನೊಬ್ಬ ಬ್ರೇಕ್ ಹಾಕಿದ ಪರಿಣಾಮ ಐದು ವಾಹನಗಳು ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

Accident: ಹಾವನ್ನು ಉಳಿಸಲು ಹೋಗಿ ರಸ್ತೆ ಮಧ್ಯೆ ಬ್ರೇಕ್ ಹಾಕಿದ ಟ್ರಕ್ ಚಾಲಕ, ಹಿಂದೆಯಿಂದ ಬಂದ 5 ವಾಹನಗಳು ಡಿಕ್ಕಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 08, 2022 | 3:39 PM

ಚಿಕ್ಕಬಳ್ಳಾಪುರ: ಹಾವೊಂದನ್ನು ಉಳಿಸಲು ಹೋಗಿ ಟ್ರಕ್ ಚಾಲಕನೊಬ್ಬ ಬ್ರೇಕ್ ಹಾಕಿದ ಪರಿಣಾಮ ಐದು ವಾಹನಗಳು ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಪ್ರದೇಶದಲ್ಲಿ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕಂಟೈನರ್ ಟ್ರಕ್ ಚಾಲಕ ಹಾವುನ್ನು ಉಳಿಸಲು ಹೋಗಿ ರಸ್ತೆಯ ಮಧ್ಯದಲ್ಲಿ ಏಕಾಏಕಿ ನಿಲ್ಲಿಸಿದ್ದಾನೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದರಿಂದಾಗಿ ಹಿಂಬದಿಯಿಂದ ಟ್ರಕ್‌ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದು ಟಾಟಾ ಏಸ್, ಟಿಪ್ಪರ್ ಮತ್ತು ಬಂಡೆಗಳನ್ನು ಸಾಗಿಸುತ್ತಿದ್ದ ಮತ್ತೊಂದು ಮಿನಿ ಟಿಪ್ಪರ್ ಬಂದು ಡಿಕ್ಕಿ ಹೊಡೆದಿದೆ. ಕಂಟೈನರ್ ಟ್ರಕ್‌ನ ಚಕ್ರಕ್ಕೆ ಹಾವು ಸಿಲುಕಿದರೂ, ಹೆದ್ದಾರಿ ಪಕ್ಕದ ಪೊದೆಗೆ ಹೋಗುವ ಮೂಲಕ ಬದುಕುಳಿದಿದೆ ಎಂದು ತಾಲೂಕಿನ ಸಂಚಾರ ಪೊಲೀಸರು ಪ್ರಕಟಣೆಗೆ ತಿಳಿಸಿದ್ದಾರೆ. ಅಪಘಾತದಲ್ಲಿ ಸಿಕ್ಕಿಬಿದ್ದ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ: Accident: ಟಾಟಾ ಏಸ್, ಲಾರಿ ನಡುವೆ ಡಿಕ್ಕಿ, 6 ಸಾವು, 5 ಜನರಿಗೆ ಗಾಯ

ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚನ್ನಪಟ್ಟಣ ಬಳಿ ಇದೇ ರೀತಿಯ ಘಟನೆ ನಡೆದಿತ್ತು. ಅತಿ ವೇಗದ ಕಾರಣದಿಂದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದು ಏಳು ವಾಹನಗಳ ಸಾಲು ಸಾಲಾಗಿ ಬಂದು ಡಿಕ್ಕಿ ಹೊಡೆದು ಮಗು ಸಾವನ್ನಪ್ಪಿತು.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Thu, 8 December 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ