ಪೆರೇಸಂದ್ರ ಬಳಿ ಹೆದ್ದಾರಿಯಿಂದ ಹೋಟೆಲಿಗೆ ನುಗ್ಗಿದ ಕ್ಯಾಂಟರ್: ತಾಯಿ ಗರ್ಭದಲ್ಲಿದ್ದ ಮಗು ಸೇರಿದಂತೆ ಮೂವರ ಸಾವು
ನಿಂತಿದ್ದ ಬೈಕ್, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟಲ್ ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟಲ್ ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿಕ್ಕಬಳ್ಳಾಪುರ: ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಿಂತಿದ್ದ ಬೈಕ್, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟಲ್ ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟಲ್ ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಬಾಣಂತಿಯ ಮತ್ತೊಂದು ಮಗು ಬಚಾವ್ ಆಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ಹೋಟಲ್ ಗೆ ನುಗ್ಗಿದೆ. ಹೋಟಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂ ಆಗಿವೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ಯಾಂಟರ್ನ್ನು ವಶಕ್ಕೆ ಪಡೆದು ಚಾಲಕ ಅಜೀತ್ನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತೇವೆ. ಇಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ಎಂದು ಎಸ್ಪಿ ಡಿ.ಎಲ್.ನಾಗೇಶ ತಿಳಿಸಿದ್ರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:31 am, Sat, 17 September 22