ಚಿಕ್ಕಬಳ್ಳಾಪುರ, ಏಪ್ರಿಲ್ 02: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ (Srinivasa Sagara Dam) ಮುಳುಗಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ (45) ಮೃತ ದುರ್ದೈವಿಗಳು. ನೀರಿಗೆ ಜಾರಿ ಬಿದ್ದಿದ್ದ ಮಗು ಉಳಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ.
ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ಫರೀನಾ ಬೇಗಂ ಮತ್ತು ಅವರ ಸಂಬಂಧಿಕರು ಜಲಾಶಯಕ್ಕೆ ಭೇಟಿ ನೀಡಿದ್ದರು. ಇದಕ್ಕೂ ಮೊದಲು ಮೃತರು ನಂದಿಬೆಟ್ಟಕ್ಕೆ ತೆರಳಬೇಕು ಎಂದು ನಿರ್ಧರಿಸಿದ್ದರು. ಆದರೆ, ನಂದಿಬೆಟ್ಟ ಬಂದ್ ಆಗಿರುವ ಹಿನ್ನೆಲೆಯಲ್ಲಿ ಶ್ರೀನಿವಾಸಸಾಗರ ಜಲಾಶಯಕ್ಕೆ ಹೋಗಿದ್ದಾರೆ. ಜಲಾಶಯದ ಬಂಡೆಯ ಮೇಲೆ ಕುಳಿತು ಊಟ ಮಾಡುತ್ತಿದ್ದ ವೇಳೆ, ಪರಿಹಿನ್ ಎಂಬುವರ ಮಗು ಜಾರಿ ನೀರಿಗೆ ಬಿದ್ದಿದ್ದೆ. ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಮಗುವನ್ನು ರಕ್ಷಿಸಲಾಗಿದೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇನ್ನು, ಘಟನೆ ಸಂಬಂಧ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ದ ಮೃತರ ಸಂಬಂಧಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಇಲ್ಲಿಗೆ ಬಂದಿದ್ದ ಅನೇಕ ಪ್ರವಾಸಿಗರು ಆಕಸ್ಮಿಕವಾಗಿ ನೀರಲ್ಲಿ ಬಿದ್ದು, ಮೃತಪಟ್ಟಿದ್ದಾರೆ. ಆದರೂ ಕೂಡ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸೂಕ್ತ ಮುಂಜಾಗೃತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪ ವ್ಯಕ್ತಪಡಿಸಿದರು. ಮೃತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ವಿಜಯಪುರ: ವಿಜಯಪುರ ತಾಲೂಕಿನ ಕುಮಟಗಿ ಗ್ರಾಮದ ಹೊರ ಭಾಗದಲ್ಲಿರುವ ಕೆರೆಯಲ್ಲಿ ಈಜಲು ತೆರೆಳಿದ್ದ ಇಬ್ಬರು ಯುವಕರು ನೀರು ಪಾಲಾಗಿದ್ದು, ಇತರೆ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ವಿಜಯಪುರ ನಗರದ ಆರು ಜನ ಯುವಕರು ಈಜಾಡಲು ಕುಮಟಗಿ ಕೆರೆತೆ ತೆರಳಿದ್ದರು. ಆರು ಜನ ಯುವಕರು ಈಜಾಡುವ ವೇಳೆ ಇಬ್ಬರು ನೀರು ಪಾಲಾಗಿದ್ದಾರೆ. ನಾಲ್ವರು ಯುವಕರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ಇಬ್ಬರಲ್ಲಿ, ಓರ್ವ ಯುವಕನನ್ನು ಕೆರೆಯಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟಕ್ಕೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗಿರುವ ಮತ್ತೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಫೋನ್ ಮಾಡಿ ಕರೆದ್ರೂ ಪ್ರಿಯಕರ ಮನೆಗೆ ಬರದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಳೇ?
ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದಲ್ಲಿ ನಡೆದಿದೆ. ಮಾರ್ಚ್ 30 ರ ಭಾನುವಾರ ಯುಗಾದಿ ಹಬ್ಬದ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳ (50) ರಾದಮ್ಮ (60) ಮೃತ ದುರ್ದೈವಿಗಳು.
ಘಟನೆಯಲ್ಲಿ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದರು. ಮೈರೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳ ಹಾಗೂ ಬುಧವಾರ ರಾದಮ್ಮ ಮೃತಪಟ್ಟಿದ್ದಾರೆ. ಮತ್ತೋರ್ವ ಮಹಿಳೆ ಸ್ಥಿತಿಯೂ ಗಂಭೀರವಾಗಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 6:00 pm, Wed, 2 April 25