ಚಿಂತಾಮಣಿ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ದುರ್ಮರಣ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ವಿದ್ಯುತ್ ಆಘಾತದಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಪಂಪ್ ಸೆಟ್ ರಿಪೇರಿ ಮಾಡುವಾಗ ವಿದ್ಯುತ್ ಆಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರೆಲ್ಲರೂ ಮುಂತಕೆದಿರೇನಹಳ್ಳಿ ನಿವಾಸದ ಸಂಬಂಧಿಕರು ಎನ್ನಲಾಗಿದೆ.

ಚಿಕ್ಕಬಳ್ಳಾಪುರ, ಮಾರ್ಚ್ 07: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ (Electric shock) ಮೂವರು ಯುವಕರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ. ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತರು. ಮೃತರೆಲ್ಲರೂ ಮುಂತಕೆದಿರೇನಹಳ್ಳಿ ನಿವಾಸದ ಸಂಬಂಧಿಕರು. ಕೃಷಿ ಹೊಂಡದ ಪಂಪ್ಸೆಟ್ ರಿಪೇರಿಗೆ ಹೋದಾಗ ದುರ್ಘಟನೆ ಸಂಭವಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವು
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಡಾ.ಜಯರಾಂ ನಾಯ್ಕ್(53) ಮೃತ ವೈದ್ಯ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣು
ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವಂತಹ ಘಟನೆ ತೀರ್ಥಹಳ್ಳಿಯ ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದಲ್ಲಿ ನಡೆದಿದೆ. ಮುರುಳಿ (29) ನೇಣಿಗೆ ಶರಣಾದ ವ್ಯಕ್ತಿ. ಆಟೋ ಚಾಲಕ ಕೆಲಸ ಮಾಡಿಕೊಂಡಿದ್ದ ಮುರುಳಿ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ನಲ್ಲಿಟ್ಟಿದ್ದ 1.40 ಲಕ್ಷ ರೂ ಹಣ ದೋಚಿ ಕಳ್ಳರು ಪರಾರಿ
ಸ್ಕೂಟಿಯಲ್ಲಿಟ್ಟಿದ್ದ ಹಣ ಕದ್ದ ಕಳ್ಳರು ಪರಾರಿಯಾಗಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬೆಂಗಳೂರು ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಬ್ಯಾಂಕ್ನಿಂದ 1.40 ಲಕ್ಷ ರೂ. ಡ್ರಾ ಮಾಡಿದ್ದ ನರಹರಿ ನಗರದ ರವಿಕುಮಾರ್ಗೆ ಸೇರಿದ ಹಣ ಕಳವು ಮಾಡಲಾಗಿದೆ.
ಇದನ್ನೂ ಓದಿ: ಕೊಪ್ಪಳ: ವಿದೇಶಿ, ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಓರ್ವ ಪ್ರವಾಸಿಗ ನಾಪತ್ತೆ
ಬೈಕ್ ನಿಲ್ಲಿಸಿ ಕಿರಾಣಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಹಣ ಕಳ್ಳತನ ಮಾಡಿದ್ದು, ಮೂವರು ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಸ್ಕೂಟಿ ಕಾಣದಂತೆ ಒಬ್ಬರು ಅಡ್ಡ ನಿಂತು ಖದೀಮರು ಕಳ್ಳತನ ಮಾಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯ ಆಧರಿಸಿ ಕಳ್ಳರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.