ಮದುವೆ ದಿಬ್ಬಣದ ಬಸ್ ಅಪಘಾತ; ಓರ್ವ ಸಾವು, 20 ಜನರಿಗೆ ಗಾಯ
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಮದುವೆ ಮುಗಿಸಿ ವಾಪಸ್ ಆಗ್ತಿರುವಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ.
ದೇವನಹಳ್ಳಿ: ಮದುವೆ ದಿಬ್ಬಣಕ್ಕೆ ಬಂದು ಹೋಗ್ತಿದ್ದ ಬಸ್ ಅಪಘಾತವಾಗಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಸ್ ಬಿದ್ದಿದೆ.
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಮದುವೆ ಮುಗಿಸಿ ವಾಪಸ್ ಆಗ್ತಿರುವಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ಕೇಳಿ ಬಂದಿದೆ. ಯುವತಿಯನ್ನು ಪ್ರೀತಿಸಿದ್ದಕ್ಕೆ ಅನ್ಯ ಕೋಮಿನ ಯುವಕನ ಕೊಲೆ ನಡೆದಿದೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ(32) ಕೊಲೆಯಾದ ಯುವಕ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಲಮೇಲ ಪೊಲೀಸರು ಯುವತಿಯ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಗ್ರಾಮದ ಬಾವಿಯಲ್ಲಿ ರವಿ ನಿಂಬರಗಿ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶವ ಹೊರತೆಗೆದಿದ್ದಾರೆ. ಅನ್ಯಕೋಮಿನ ಯುವತಿ ಪ್ರೀತಿಸುತ್ತಿದ್ದ ಹಿನ್ನೆಲೆ ರವಿ ನಿಂಬರಗಿಯನ್ನು ಯುವತಿ ಮನೆಯವರು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರವಿ ಹತ್ಯೆಗೈದು ಶವವನ್ನು ಬಾವಿಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮಂಗಳೂರಿನ ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಧ್ವನಿವರ್ಧಕ ವಶ
Published On - 7:30 am, Sun, 24 October 21