ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ಆರೋಪ: ಚಿಕ್ಕಬಳ್ಳಾಪುರದಲ್ಲಿ ಇಬ್ಬರ ಬಂಧನ
ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಟೆಲಿಗ್ರಾಂ ಗ್ರೂಪ್ ಮೂಲಕ ಸಂಚು ರೂಪಿಸುತ್ತಿದ್ದ ಆರೋಪದಡಿ ಚಿಕ್ಕಬಳ್ಳಾಪುರದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಇಬ್ಬರಿಗೂ ಸದ್ಯಕ್ಕೆ ಭಯೋತ್ಪಾದನೆ ಹಿನ್ನೆಲೆ ಇಲ್ಲ. ಹೀಗಿದ್ದರೂ ತನಿಖೆ ತೀವ್ರಗೋಳಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಪದ್ಮಿನಿ ಸಾಹೂ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 25: ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಬ್ಬೀರ್ ಮತ್ತು ಉತ್ತರ ಭಾರತ ಮೂಲದ ಸಲ್ಮಾನ್ ಬಂಧಿತರು. ಆರೋಪಿಗಳು ಟೆಲಿಗ್ರಾಂನಲ್ಲಿ 8 ಜನರು ಗ್ರೂಪ್ ಮಾಡಿಕೊಂಡು ಭಯೋತ್ಪಾದನೆ ನಡೆಸಲು ಒಳಸಂಚು ನಡೆಸಿದ್ದರು. ಈ ಹಿನ್ನಲೆ ಆರೋಪಿಗಳ ಹಿನ್ನೆಲೆ, ಸಂಪರ್ಕದಲ್ಲಿದ್ದವರ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಪ್ರಚೋದನಕಾರಿ ವಿಡಿಯೋ ನೋಡಿ ಭಯೋತ್ಪಾದನೆ ಬಗ್ಗೆ ಇವರು ಚರ್ಚೆ ನಡೆಸಿದ್ದರು ಎನ್ನಲಾಗಿದ್ದು, ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಚಿಕ್ಕಬಳ್ಳಾಪುರ ಎಸ್ಪಿ ಪದ್ಮಿನಿ ಸಾಹೂ ಪ್ರತಿಕ್ರಿಯೆ
ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಸಿರುವ ಚಿಕ್ಕಬಳ್ಳಾಪುರ ಎಸ್ಪಿ ಪದ್ಮಿನಿ ಸಾಹೂ, ಭಯೋತ್ಪಾದನೆ ಬಗ್ಗೆ ಟೆಲಿಗ್ರಾಂನಲ್ಲಿ ಚರ್ಚೆ ವಿಚಾರ ಸಂಬಂಧ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರಿಗೂ ಸದ್ಯಕ್ಕೆ ಭಯೋತ್ಪಾದನೆ ಹಿನ್ನೆಲೆ ಇಲ್ಲ. ಹೀಗಿದ್ದರೂ ತನಿಖೆ ತೀವ್ರಗೋಳಿಸಲಾಗಿದೆ. ಆರೋಪಿಗಳ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತೇವೆ ಎಂದವರು ತಿಳಿಸಿದ್ದಾರೆ.
ಸುಲಿಗೆ, ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ
ಸುಲಿಗೆ, ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಾದೇಶ್, ಪ್ರಜ್ವಲ್, ಕಾರ್ತಿಕ್, ಶ್ಯಾಮ್ ಬಂಧಿತ ಆರೋಪಿಗಳು. ಬಂಧಿತರಿಂದ 20 ಲಕ್ಷ ಮೌಲ್ಯದ 25 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಹಾರ ಮೂಲದ ವ್ಯಕ್ತಿಗೆ ಬೆದರಿಸಿ ಗ್ಯಾಂಗ್ ಮೊಬೈಲ್ ಸುಲಿಗೆ ಮಾಡಿತ್ತು. ಅಲ್ಲದೆ ಒಂದೂವರೆ ತಿಂಗಳಲ್ಲಿ ಹಲವೆಡೆ ಆರೋಪಿಗಳು ಕಳ್ಳತನ ಮಾಡಿದ್ದರು. ಬಂದ ದುಡ್ಡಲ್ಲಿ ಗ್ಯಾಂಗ್ ಬೆಂಗಳೂರಿನಲ್ಲಿ ಮೋಜು-ಮಸ್ತಿ ಮಾಡುತ್ತಿತ್ತು ಎಂಬುದು ಗೊತ್ತಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:52 am, Fri, 25 September 26




