ಈಜಲು ತೆರಳಿದ್ದ ಇಬ್ಬರು ಯುವಕರು ನೀರಿಪಾಲು: ಅಗ್ನಿಶಾಮಕ ದಳದಿಂದ ಶವಕ್ಕಾಗಿ ಶೋಧ

ಇಬ್ಬರು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಶವಕ್ಕಾಗಿ ಶೋಧ ನಡೆಯುತ್ತಿದೆ. ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ. 

ಈಜಲು ತೆರಳಿದ್ದ ಇಬ್ಬರು ಯುವಕರು ನೀರಿಪಾಲು: ಅಗ್ನಿಶಾಮಕ ದಳದಿಂದ ಶವಕ್ಕಾಗಿ ಶೋಧ
ಮೆಡಿಕಲ್​ ವಿದ್ಯಾರ್ಥಿ ಸಚ್ಚಿದಾನಂದ, ನರೇಶ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 11, 2022 | 7:30 AM

ಚಿಕ್ಕಬಳ್ಳಾಫುರ: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವಂತಹ ಘಟನೆ ನಗರದ ಶ್ರೀನಿವಾಸಸಾಗರ ಜಲಾಶಯದ ಬಳಿ ಕುಂಟೆಯಲ್ಲಿ ನಡೆದಿದೆ. ಮೆಡಿಕಲ್​ ವಿದ್ಯಾರ್ಥಿ ಸಚ್ಚಿದಾನಂದ, ನರೇಶ್ ನೀರುಪಾಲಾದ ಯುವಕರು.  ಸಚ್ಚಿದಾನಂದ ಚಿಕ್ಕಬಳ್ಳಾಫುರದ ಸರ್ಕಾರಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ. ನರೇಶಬಾಬು ಗೌರಿಬಿದನೂರು ತಾಲೂಕಿನ ರಾಮಚಂದ್ರಪುರ ನಿವಾಸಿ. ಸಹಪಾಠಿಗಳ ಜೊತೆ ಶ್ರೀನಿವಾಸಸಾಗರ ಜಲಾಶಯಕ್ಕೆ ಸಚ್ಚಿದಾನಂದ ಆಗಮಿಸಿದ್ದರು. ನೀರು ಕಂಡಿದ್ದೆ ತಡ ಕುಂಟೆಯಲ್ಲೆ ಈಜಾಡಲು ನೀರಿಗಿಳಿದಿದ್ದ. ನೀರಿನಲ್ಲಿ ಮುಳುಗುತ್ತಿದ್ದ ಎಂ,.ಬಿ.ಬಿ.ಎಸ್ ವಿದ್ಯಾರ್ಥಿ ರಕ್ಷಣಗೆ ನರೇಶ ಹೋಗಿದ್ದ. ಇಬ್ಬರು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಶವಕ್ಕಾಗಿ ಶೋಧ ನಡೆಯುತ್ತಿದೆ. ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕ್ರಿಮಿನಾಶಕ ಸೇವಿಸಿ ಯುವ ರೈತ ಆತ್ಮಹತ್ಯೆ

ಮೈಸೂರು: ಕ್ರಿಮಿನಾಶಕ ಸೇವಿಸಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕು ಹಬ್ಬನ ಕುಪ್ಪೆ ಗ್ರಾಮದಲ್ಲಿ ನಡೆದಿದೆ. ಅನಿಲ್ (30) ಆತ್ಮಹತ್ಯೆ ಮಾಡಿಕೊಂಡ ರೈತ. ತಂಬಾಕು ಬೆಳೆ ಬೆಳೆದಿದ್ದ ರೈತ ಅನಿಲ್, ಕೃಷಿಪತ್ತಿನ ಸಹಕಾರ ಸಂಘದಲ್ಲಿ 5 ಲಕ್ಷ, ಕರ್ನಾಟಕ ಬ್ಯಾಂಕಿನಲ್ಲಿ 2 ಲಕ್ಷ ಒಡವೆ ಅಡಮಾನ ಸಾಲ ಪಡೆದಿದ್ದ. ಅತಿಯಾದ ಮಳೆಯಿಂದ ತಂಬಾಕು ಬೆಳೆ ನಾಶವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಕಾಳು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಬ್ಬು ತುಂಬಿದ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಮೈಸೂರು: ಕಬ್ಬು ತುಂಬಿದ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಾಯವಾಗಿರುವಂತಹ ಘಟನೆ ಸರಗೂರು ತಾಲ್ಲೂಕು ಅಗತ್ತೂರು ಗ್ರಾಮದ ಬಳಿ ನಡೆದಿದೆ. ಚಾಲಕ ಶಿವಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಸಾಗರೆ ಗ್ರಾಮದಿಂದ ಕಬ್ಬಿನ ಲಾರಿ ಬರುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಗಾಯಾಳು ಶಿವಕುಮಾರ್ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಕ್ರಮ ಜಾನುವಾರು ಸಾಗಾಟ, ಇಬ್ಬರ ಬಂಧನ

ಹಾಸನ: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರ ಬಂಧನ ಮಾಡಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ, ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಚಾಲಕ ಸಜ್ಜಾದ್, ಮಾಗಡಿ ಮೂಲದ ಅಹಮದ್ ಪಾಷಾ ಬಂಧಿತರು. ವಾಹನ ಸಮೇತ ಎಂಟು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣದಿಂದ ಬೆಂಗಳೂರಿನ ಕಡೆಗೆ ವಾಹನ ಹೋಗುತ್ತಿತ್ತು. ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ‌ ಸಾಗಾಟ ಬಯಲಾಗಿದೆ. ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಸಿಂಧಿ ಕರುಗಳ ರಕ್ಷಣೆ ಮಾಡಲಾಗಿದೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

35 ಲಕ್ಷ 20 ಸಾವಿರ ಹಣ ದರೋಡೆ ಪ್ರಕರಣ ಭೇದಿಸಿದ ಪೊಲೀಸ್​

ತುಮಕೂರು: ಕೊರಟಗೆರೆ ಪಟ್ಟಣದಲ್ಲಿ ಎತ್ತಿನಹೊಳೆ ಯೋಜನೆಯ ಮ್ಯಾನೇಜರ್ ಅವಿನಾಶ್ ಮನೆಯಲ್ಲಿ 35.20 ಲಕ್ಷ ಹಣ ಕದ್ದಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವಿನಾಶ್ ಕಾರು ಚಾಲಕ ಮಂಜುನಾಥ್, ಸಿದ್ದರಾಜು, ಲಕ್ಷ್ಮೀನಾರಾಯಣ್ ಬಂಧಿತರು. ಆರೋಪಿಗಳಿಂದ 30.20 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:29 am, Sun, 11 September 22

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ