Amit Shah: ಮುದ್ದೇನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಶುಕ್ರವಾರ ಭೇಟಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಚಿವ ಡಾ. ಸುಧಾಕರ್ ಕರೆ

Amit Shah in Karnataka: ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ‌ಕಟೀಲ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಇನ್ನೂ ಅನೇಕ ಸಚಿವರುಗಳು ಸಾಥ್ ನೀಡಲಿದ್ದಾರೆ. ಅಮಿತ್ ಶಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುದ್ದೇನಹಳ್ಳಿಯಲ್ಲಿ ಭರದ ಸಿದ್ಧತೆ ನಡೆದಿದೆ.

Amit Shah: ಮುದ್ದೇನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಶುಕ್ರವಾರ ಭೇಟಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಚಿವ ಡಾ. ಸುಧಾಕರ್ ಕರೆ
ಅಮಿತ್ ಶಾ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 30, 2022 | 2:46 PM

ಚಿಕ್ಕಬಳ್ಳಾಪುರ: ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಸಚಿವ ಅಮಿತ್ ಶಾ ಅವರು ನಾಳಿದ್ದು ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆ ವೇಳೆ ಆಡಳಿತಾರೂಢ ಬಿಜೆಪಿ ವತಿಯಿಂದ ಪಕ್ಷದ ಉನ್ನತ ಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಮುಖ್ಯವಾಗಿ, ಏಪ್ರಿಲ್ 1ರಂದು ಡಾ. ಶಿವಕುಮಾರ ಶ್ರೀಗಳ ಜನ್ಮ ದಿನಾಚರಣೆ ಅಂಗವಾಗಿ ತುಮಕೂರಿನಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅದಾದ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿರುವ ಅಮಿತ್ ಶಾ ಅವರು ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಆಶ್ರಮಕ್ಕೆ ಭೇಟಿ ನೀಡಿ, 400 ಬೆಡ್ ಗಳ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಗೆ ಶಂಕುಸ್ಥಾಪನೆ (Sri Sathya Sai memorial Hospital) ನೆರವೇರಿಸಲಿದ್ದಾರೆ (Union Cooperative Minister Amit Shah).

ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಸಚಿವ ಅಮಿತ್ ಶಾ ಶಂಕುಸ್ಥಾಪನೆ: ಎಪ್ರಿಲ್ 1ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ತುಮಕೂರಿನ ಕಾರ್ಯಕ್ರಮ ಮುಗಿಸಿಕೊಂಡು 2 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಆಶ್ರಮಕ್ಕೆ ಭೇಟಿ ನೀಡಿ, ಆಶ್ರಮದ ಆವರಣದಲ್ಲಿ 400 ಬೆಡ್ ಗಳ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ‌ಕಟೀಲ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಇನ್ನೂ ಅನೇಕ ಸಚಿವರುಗಳು ಸಾಥ್ ನೀಡಲಿದ್ದಾರೆ. ಅಮಿತ್ ಶಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುದ್ದೇನಹಳ್ಳಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬಿಗಿ ಭದ್ರತೆ ಏರ್ಪಾಡುಗಳನ್ನೂ ಕೈಗೊಳ್ಳಲಾಗಿದೆ.

ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರು ಇಂಡಿಯನ್ ಏರ್‌ಪೋರ್ಸ್ ಹೆಲಿಕಾಪ್ಟರ್ ಮೂಲಕ ತುಮಕೂರಿನಿಂದ ಹೊರಟು ಮುದ್ದೇನಹಳ್ಳಿಯ ಸತ್ಯಸಾಯಿ ಸಮಾಗಮಾ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಬರೋಬ್ಬರಿ 50 ನಿಮಿಷಗಳ ಕಾಲ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸತ್ಯಸಾಯಿ ಲೋಕಶಿಕ್ಷಣ ಸಂಸ್ಥೆಗಳು ಹಾಗೂ ಸತ್ಯಸಾಯಿ ಬಾಬಾ ಆಶ್ರಮದಿಂದ, ಆಶ್ರಮದ ಆವರಣದಲ್ಲಿ 400 ಬೆಡ್‌ಗಳ ಶ್ರೀ ಸತ್ಯ ಸಾಯಿ ಸರಳಾ ಮೆಮೋರಿಯಲ್ ಮಲ್ಟಿ ಸ್ಪೆಷಾಲಿಟಿ ಆಶ್ಪತ್ರೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಭೂಮಿಪೂಜೆ ನೆರೆವೇರಿಸಲಿದ್ದಾರೆ.

 Union Home minister Amit Shah 4

ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಸಚಿವ ಅಮಿತ್ ಶಾ ಶಂಕುಸ್ಥಾಪನೆ

ಕೇಂದ್ರ ಗೃಹ ಸಚಿವರಿಗೆ ಯಾರೆಲ್ಲಾ ಸಾಥ್ ನೀಡಲಿದ್ದಾರೆ: ಕೇಂದ್ರ ಸಚಿವರಾದ ಅಮಿತ್ ಶಾ ರವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ಕುಮಾರ್ ಕಟೀಲು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಟಿಬಿ ನಾಗರಾಜ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಸಚಿವರು ಹಾಗೂ ಬಿಜೆಪಿ ಗಣ್ಯರು ಸಾಥ್ ನೀಡಲಿದ್ದಾರೆ.

ಅಮಿತ್ ಶಾ ರವರಿಗೆ ಜಡ್+ ಕ್ಯಾಟಗರಿ ಭದ್ರತೆ:

Union Home minister Amit Shah to visit muddenahalli

ಅಮಿತ್ ಶಾ ರವರಿಗೆ ಜಡ್+ ಕ್ಯಾಟಗರಿ ಭದ್ರತೆ

ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರಾದ ಅಮಿತ್ ಶಾ ರವರು ಜಡ್+ ಕ್ಯಾಟಗರಿ ಭದ್ರತೆಯನ್ನು ಹೊಂದಿದ್ದಾರೆ. ಇದರಿಂದ ಇಂದು ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಎ.ಎಸ್.ಎಲ್. ತಂಡ, ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳು ಸೇರಿದಂತೆ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಎಸ್ಪಿ ಸಭೆ ನಡೆಸಿ, ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್‌ನಿಂದ ಕಾರ್ಯಕ್ರಮದ ವೇದಿಕೆಯವರೆಗೂ ಬಂದು ಹೋಗುವ ಸ್ಥಳ ಪರಿಶೀಲನೆ ನಡೆಸಿ, ಪೊಲೀಸ್ ಭದ್ರತೆಯ ಬಗ್ಗೆ ಚರ್ಚೆ ನಡೆಸಿದರು. ಕಾರ್ಯಕ್ರಮಕ್ಕೆ ಸಿಆರ್‌ಪಿಎಫ್, ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ವಿಚಕ್ಷಣ ದಳ ಸೇರಿದಂತೆ ವಿವಿಧ ಏಜೆನ್ಸಿಗಳಿಂದ ಭದ್ರತೆಗೆ ಏರ್ಪಾಡು ಮಾಡಿಕೊಂಡಿದ್ದಾರೆ.

ಅಮಿತ್‌ ಶಾ ಕಾರ್ಯಕ್ರಮ ಯಶಸ್ವಿಗೊಳಿಸಲು ಡಾ. ಕೆ.ಸುಧಾಕರ್ ಕರೆ:  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರದಲ್ಲಿ ಡಾ. ಕೆ.ಸುಧಾಕರ್ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿಯೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಸಭೆಯ ನಂತರ ಟಿವಿ 9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ ಡಾ. ಕೆ.ಸುಧಾಕರ್, ಅಮಿತ್‌ಶಾ ರವರು ಆಗಮಿಸುತ್ತಿರುವುದು ಖಾಸಗೀ ಕಾರ್ಯಕ್ರಮವಾದರೂ ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರುಗಳು, ಬಿಜೆಪಿ ರಾಜ್ಯಾಧ್ಯಕ್ಷರು ಆಗಮಿಸುತ್ತಿರುವ ಕಾರಣ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದು, ಅಮಿತ್‌ಶಾ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

-ಭೀಮಪ್ಪ ಪಾಟೀಲ್, ಟಿವಿ9, ಚಿಕ್ಕಬಳ್ಳಾಪುರ

ಇದನ್ನೂ ಓದಿ: ಶಿಡ್ಲಘಟ್ಟ ವೃದ್ಧ ದಂಪತಿ ಕೊಲೆ ಪ್ರಕರಣ: 3 ಆರೋಪಿಗಳನ್ನು ಇಬ್ಬರೇ ಪೊಲೀಸರು ಹಿಡಿದರು!!

ಇದನ್ನೂ ಓದಿ: ಅಮಿತ್ ಶಾ ತುಮಕೂರಿಗೆ ಭೇಟಿ ಹಿನ್ನೆಲೆ, ಮತ್ತೆ ಮುನ್ನೆಲೆಗೆ ಬಂದ ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವ ವಿಚಾರ

Published On - 1:36 pm, Wed, 30 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್