ವೀಕೆಂಡ್ ಎಫೆಕ್ಟ್​! ಪ್ರಕೃತಿ ಸೌಂದರ್ಯ ಸವಿಯಲು ಮುಳ್ಳಯ್ಯನಗಿರಿಗೆ ಬಂದ ಪ್ರವಾಸಿಗರ ದಂಡು

ವೀಕೆಂಡ್ ಹಿನ್ನೆಲೆ ಮಳೆಗಾಲದ ಪ್ರಕೃತಿ ಸೌಂದರ್ಯವನ್ನ ಸವಿಯಲು ಪ್ರವಾಸಿಗರ ದಂಡೆ ಕಾಫಿನಾಡು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಹರಿದು ಬಂದಿತ್ತು. ಹಸಿರು ರಾಶಿಯ ಮಧ್ಯೆ ಕೊರೆಯುವ ಚಳಿಯಲ್ಲಿ ಎತ್ತರದ ಶಿಖರದಲ್ಲಿ ನಿಂತು ಸಾವಿರಾರು ಪ್ರವಾಸಿಗರು ಎಂಜಾಯ್ ಮಾಡಿದರು.

ವೀಕೆಂಡ್ ಎಫೆಕ್ಟ್​! ಪ್ರಕೃತಿ ಸೌಂದರ್ಯ ಸವಿಯಲು ಮುಳ್ಳಯ್ಯನಗಿರಿಗೆ ಬಂದ ಪ್ರವಾಸಿಗರ ದಂಡು
ಮುಳ್ಳಯ್ಯನಗಿರಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 09, 2024 | 7:25 PM

ಚಿಕ್ಕಮಗಳೂರು, ಜೂ.09: ಮಳೆಗಾಲದಲ್ಲಿ(Rainy season) ಪ್ರಕೃತಿ ಸೌಂದರ್ಯ ನೋಡುವುದೇ ಖುಷಿ, ಮಳೆಗಾಲದಲ್ಲಿ ಗಿರಿ ಶಿಖರಗಳಲ್ಲಿ ಸೃಷ್ಟಿಯಾಗುವ ಸೊಬಗನ್ನ ಕಣ್ತುಂಬಿಕೊಳ್ಳುವುದೇ ಅಂದ. ಹೌದು, ರಾಜ್ಯದ ಅತಿ ಎತ್ತರದ ಗಿರಿ ಶಿಖರವಾದ ಮುಳ್ಳಯ್ಯನಗಿರಿ(Mullayanagiri Peak)ಗೆ ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಇಂದು ಭಾನುವಾರ ಹಿನ್ನೆಲೆ ರಾಜ್ಯ, ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರವಾಸಿಗರು, ಎತ್ತರದ ಶಿಖರದ ಮೇಲೆ ನಿಂತು ಮಳೆಗಾಲದಲ್ಲಿ ಸೃಷ್ಟಿಯಾಗಿರುವ ದೃಶ್ಯ ಕಾವ್ಯವನ್ನು ಸವಿದು ಎಂಜಾಯ್ ಮಾಡಿದರು.

ಕೊರೆಯುವ ಚಳಿಯಲ್ಲಿ ದಟ್ಟ ಮಂಜಿನ ನಡುವೆ ಪ್ರವಾಸಿಗರು ಕುಣಿದು ಕುಪ್ಪಳಿಸಿದ್ದು, ಪ್ರತಿ ವೀಕೆಂಡ್​ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಳ್ಳಯ್ಯನಗಿರಿ ,ದತ್ತಪೀಠ ಸೇರಿದಂತೆ ಸುತ್ತಮುತ್ತಲಿನ ಗಿರಿ ಶಿಖರಕ್ಕೆ ಇಂದು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಪ್ರಕೃತಿ ಮಡಿಲಿನಲ್ಲಿ ಸಿಗುವ ಖುಷಿಯನ್ನ ಅನುಭವಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರಿಂದ ಕಿರಿದಾದ ರಸ್ತೆಯ ಮೂಲಕ ಚಿಕ್ಕಮಗಳೂರಿನಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗ ಮಧ್ಯೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್​ನಲ್ಲಿ ಸಿಲುಕಿ ಗಂಟೆಗಟ್ಟಲೆ ಪ್ರವಾಸಿಗರ ವಾಹನಗಳು ನಿಂತಲ್ಲೇ ನಿಲ್ಲಬೇಕಾಯಿತು.

ಇದನ್ನೂ ಓದಿ:ಮುಳ್ಳಯ್ಯನಗಿರಿಹಂಪಿಯಿಂದ ಮುಳ್ಳಯ್ಯನಗಿರಿ ಬೆಟ್ಟದವರೆಗೂ… ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಏರ್​ಟೆಲ್ 5ಜಿ ಲಭ್ಯ

ಇನ್ನು ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಯಾವುದೇ ಸೂಚನೆ ಇಲ್ಲದಿದ್ದರು. ಮುಳ್ಳಯ್ಯನಗಿರಿಗೆ ಪ್ರವಾಸಿಗರ ವಾಹನಗಳಿಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ನಿರ್ಬಂಧ ಮಾಡಿದರು. ಮುಳ್ಳಯ್ಯನಗಿರಿ ತೆರಳುವ ಮಾರ್ಗ ಮಧ್ಯೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಸೀತಾಳಯ್ಯನ ಗಿರಿ ಬಳಿ ಪ್ರವಾಸಿಗರ ವಾಹನಗಳಿಗೆ ಪಾರ್ಕಿಂಗ್ ಮಾಡಿಸಿ ಖಾಸಗಿ ವಾಹನಗಳ ಮೂಲಕ ಮುಳ್ಳಯ್ಯನಗಿರಿಗೆ ತೆರಳುವಂತೆ ಸೂಚನೆ ನೀಡಿದರು. ಇದ್ರಿಂದ ಖಾಸಗಿ ವಾಹನ ಚಾಲಕರು ಕೇಳಿದಷ್ಟು ಹಣ ನೀಡಿ ಖಾಸಗಿ ವಾಹನಗಳಲ್ಲಿ ಪ್ರವಾಸಿಗರು ಮುಳ್ಳಯ್ಯನಗಿರಿಗೆ ತೆರಳುವ ಸ್ಥಿತಿ ನಿರ್ಮಾಣವಾಗಿತ್ತು.

ರಾಜ್ಯ, ಹೊರ ರಾಜ್ಯದಿಂದ ಹರಿದು ಬಂದಿದ್ದ ಸಾವಿರಾರು ಪ್ರವಾಸಿಗರು ಮುಳ್ಳಯ್ಯನಗಿರಿ ಪ್ರಕೃತಿ ಸೌಂದರ್ಯ ನೋಡಿ ಸಖತ್ ಎಂಜಾಯ್ ಮಾಡಿದರು. ಮಲೆನಾಡಲ್ಲಿ ಮಳೆಗಾಲ‌ದಲ್ಲಿ ಸೃಷ್ಟಿಯಾಗುವ ಅದ್ಭುತ ಪ್ರಕೃತಿ ದೃಶ್ಯ ಕಾವ್ಯವನ್ನ ಪ್ರವಾಸಿಗರು ಸವಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!