AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಖಕ, ಚಿಂತಕ, ನ್ಯಾಷನಲ್ ಕಾಲೇಜು ಇಂಗ್ಲಿಷ್ ಪ್ರೊಫೆಸರ್ ಗಂಗಾಧರಮೂರ್ತಿ ಹೃದಯಾಘಾತದಿಂದ ವಿಧಿವಶ

ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ 'ಸಮಾನತಾ ಸೌಧ'ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು ಚಿಂತಕ ಪ್ರೊ. ಬಿ. ಗಂಗಾಧರಮೂರ್ತಿ

ಲೇಖಕ, ಚಿಂತಕ, ನ್ಯಾಷನಲ್ ಕಾಲೇಜು ಇಂಗ್ಲಿಷ್ ಪ್ರೊಫೆಸರ್ ಗಂಗಾಧರಮೂರ್ತಿ ಹೃದಯಾಘಾತದಿಂದ ವಿಧಿವಶ
ಲೇಖಕ, ಚಿಂತಕ ನ್ಯಾಷನಲ್ ಕಾಲೇಜು ಇಂಗ್ಲಿಷ್ ಪ್ರೊಫೆಸರ್ ಗಂಗಾಧರಮೂರ್ತಿ ಹೃದಯಾಘಾತದಿಂದ ವಿಧಿವಶ
TV9 Web
| Updated By: ಸಾಧು ಶ್ರೀನಾಥ್​|

Updated on:Sep 10, 2022 | 8:23 PM

Share

ಖ್ಯಾತ ಲೇಖಕ, ಚಿಂತಕ ಪ್ರೊ. ಬಿ. ಗಂಗಾಧರಮೂರ್ತಿ (English Professor B Gangadhara murthy) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಗಂಗಾಧರಮೂರ್ತಿಯವರು ಗೌರಿಬಿದನೂರಿನ (Gauribidanur) ಅಶ್ವತ್ಥಯ್ಯ ಇಸ್ತೂರಿ ಸಂಜೀವಮ್ಮ ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ನಿವೃತ್ತರಾಗಿದ್ದರು. ಅವರು ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳವಳಿ, ಜನವಿಜ್ಞಾನ ಚಳವಳಿ, ವಿಚಾರವಾದಿ ಚಳವಳಿಯಂಥ ನಾಡಿನ ಬಹುತೇಕ ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು. ಸಂಸ್ಕೃತಿ ಚಿಂತಕರಾಗಿ, ಬರಹಗಾರರಾಗಿ, ಅನುವಾದಕರಾಗಿ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಟೀಚರ್ ಮಾಸಪತ್ರಿಕೆಗೆ ದಶಕಕ್ಕೂ ಹೆಚ್ಚು ಕಾಲದಿಂದ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರೊ.ಬಿ.ಗಂಗಾಧರ ಮೂರ್ತಿಯವರ ಮಹತ್ವದ ಕೆಲಸವೆಂದರೆ, ವಿದುರಾಶ್ವತ್ಥದ ಸ್ವಾತಂತ್ರ್ಯ ಸ್ಮಾರಕವನ್ನು ರೂಪಿಸಿದ್ದು. 1938ರ ಧ್ವಜ ಸತ್ಯಾಗ್ರಹದ ಹತ್ಯಾಕಾಂಡದ ನಂತರ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸ್ಮಾರಕ ಸಂಕೀರ್ಣವನ್ನು ಅಪಾರ ಶ್ರಮ ಹಾಗೂ ಬದ್ಧತೆಯಿಂದ ವಿಶಿಷ್ಟವಾಗಿ ರೂಪಿಸಿ, ವಿನ್ಯಾಸಗೊಳಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು.

ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ಸಾಮಾಜಿಕ ಸಮಾನತೆಗಾಗಿ ದುಡಿಯುವ, ಮಿಡಿಯುವ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಲೇಬೇಕಾದ ಸ್ಥಳ ಅದು. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು.

ಲೇಖಕರಾಗಿಯೂ ಗಂಗಾಧರಮೂರ್ತಿಯವರು ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.

Published On - 8:21 pm, Sat, 10 September 22

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು