Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು

ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ.

Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು
ಮೃತ ವ್ಯಕ್ತಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 12:15 PM

ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ(Srinivasa Sagara Dam)ದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ. ಇತ ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದು, ವೀಕೆಂಡ್​ ಹಿನ್ನೆಲೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದಾಗ​ ಈ ಅವಘಡ ಸಂಭವಿಸಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯ ಹತ್ಯೆ

ಶಿವಮೊಗ್ಗ: ನಗರದ ವಿಜಯನಗರದಲ್ಲಿ ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:Raga : ಮೃತ ವ್ಯಕ್ತಿಯನ್ನೂ ಬದುಕಿಸಬಲ್ಲ, ರೋಗಗಳನ್ನೂ ಗುಣಪಡಿಸಬಲ್ಲ ಸಂಜೀವಿನಿಯೇ ರಾಗ

ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌ಯಾಗಿದೆ. ಮಂಗಳೂರುನಿಂದ ಮೂಡಿಗೆರೆ ಹೋಗುವ ಸರಕಾರಿ ಬಸ್​ ಫುಲ್​ ಆಗಿದ್ದು, ಕಾಲೇಜ್ ವಿದ್ಯಾರ್ಥಿಗಳು ಉಜಿರೆಯಲ್ಲಿ ಬಸ್ ಹತ್ತಿದ್ದಾರೆ. ಈ ವೇಳೆ ಕಂಡಕ್ಟರ್ ವಿದ್ಯಾರ್ಥಿಗಳನ್ನು ಬಸ್​ನಲ್ಲಿ ಮುಂದೆ ಹೋಗಲು ತಳ್ಳಾಟ‌ ನಡೆದಿದೆ. ಈ ವಿಚಾರದಲ್ಲಿ ಬಸ್ ಕಂಡಕ್ಟರ್ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು, ವಿದ್ಯಾರ್ಥಿಗಳು ಚಾರ್ಮಾಡಿ ಯುವಕರಿಗೆ ಕರೆ ಮಾಡಿ ಬಸ್ ಅಡ್ಡಹಾಕಲು ಮಾಹಿತಿ ನೀಡಿದ್ದಾರೆ. ಚಾರ್ಮಾಡಿಯಲ್ಲಿದ್ದ ಯುವಕರು ಚೆಕ್ ಪೋಸ್ಟ್ ಗೆ ಬಂದು ಗಲಾಟೆ ಮಾಡಿ, ಸರಕಾರಿ ಬಸ್ ಕಂಡಕ್ಟರ್ ಮತ್ತು ಪ್ಯಾಸೆಂಜರ್​ಗೆ ಸ್ಥಳೀಯರು ಸೇರಿ ಹಲ್ಲೆಗೆ ಯತ್ನಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ