AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಲ್ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ಜಿಕಾ ವೈರಸ್‌ ಪತ್ತೆಯಾಗಿದೆ. ಮಾರಕ ವೈರಸ್‌ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚ ನಡೆಸಿದ್ದಾರೆ. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ಇನ್ನು ಬಹುತೇಕ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಲ್ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ
TV9 Web
| Edited By: |

Updated on:Nov 02, 2023 | 11:02 AM

Share

ಚಿಕ್ಕಬಳ್ಳಾಪುರ, ನ.02: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದೆ (Zika Virus). ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆ ಹಿನ್ನಲೆ ಆರೋಗ್ಯ ಇಲಾಖೆ (Karnataka Health Department) ಹೈ ಅಲರ್ಟ್ ಘೋಷಿಸಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿದೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದ 68 ಕಡೆಗಳಲ್ಲಿ ಸೊಳ್ಳೆಗಳನ್ನು ಸಂಗ್ರಹಿಸಿ ಅವುಗಳಲ್ಲಿ ಮಾರಣಾಂತಿಕ ವೈರಸ್‌ ಇದೆಯೇ ಎಂದು ಪರಿಣತರು ಪರೀಕ್ಷೆ ನಡೆಸಿದ್ದರು. ಅದರಂತೆ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿತ್ತು. ಸದ್ಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್‌ ಪತ್ತೆಯಾಗಿದೆ. ಮಾರಕ ವೈರಸ್‌ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರ ಡಿಹೆಚ್​ಒ ಡಾ.ಮಹೇಶ್​ಕುಮಾರ್, ಅಕ್ಟೋಬರ್ 27ರಂದು ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಆದರೆ ಈವರೆಗೂ ಮನುಷ್ಯನ ರಕ್ತದಲ್ಲಿ ಜಿಕಾ ವೈರಸ್​ ಕಂಡು ಬಂದಿಲ್ಲ. ಪರೀಕ್ಷೆಗೆ ಮನುಷ್ಯರ ರಕ್ತದ ಮಾದರಿಯನ್ನು ಲ್ಯಾಬ್​ಗೆ ಕಳಿಸಲಾಗಿದೆ. ಮನುಷ್ಯರಲ್ಲಿ ಜಿಕಾ ವೈರಸ್ ಪತ್ತೆಯಾದರೆ ವೇಗವಾಗಿ ಹರಡುತ್ತೆ. ಜಿಕಾ ವೈರಸ್ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದರು.

ತಲಕಾಯಲಬೆಟ್ಟದ ಸುತ್ತಮುತ್ತ 5 ಗ್ರಾಮಗಳಿವೆ. 5 ಗ್ರಾಮಗಳಲ್ಲಿ ಸೊಳ್ಳೆಗಳ ನಾಶ, ಜನಜಾಗೃತಿ ಕೈಗೊಳ್ಳಲಾಗಿದೆ. ಮನೆ ಮನೆಗೆ ತೆರಳಿ ಸೊಳ್ಳೆ ಪತ್ತೆ ಹಾಗೂ ಜಾಗೃತಿ ಮೂಡಿಸುತ್ತಿದ್ದೇವೆ. 5 ಗ್ರಾಮದಲ್ಲಿ 40 ಜನ ಗರ್ಭಿಣಿಯರು ಇದ್ದಾರೆ. ಅದರಲ್ಲಿ 30 ಜನರನ್ನು ಪತ್ತೆ ಹಚ್ಚಿ ಮುಂಜಾಗ್ರತೆ ವಹಿಸಲಾಗಿದೆ. 3 ಜ್ವರ ಪ್ರಕರಣಗಳು ಕಂಡು ಬಂದಿವೆ. ಎಲ್ಲರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜಿಕಾ ವೈರಸ್ ನಿಂದ ಪ್ರಾಣಾಪಾಯವಿಲ್ಲ. ಆದರೆ ಗರ್ಭಿಣಿಯರಿಗೆ ವೈರಸ್ ತಗುಲಿದ್ರೆ ಹುಟ್ಟುವ ಮಕ್ಕಳಿಗೆ ನರದೌರ್ಬಲ್ಯ ಆಗುತ್ತೆ. ಸದ್ಯಕ್ಕೆ ಜಿಕಾ ವೈರಸ್ ಗೆ ಸೂಕ್ತ ಚಿಕಿತ್ಸೆ ಇಲ್ಲ. ಸೊಳ್ಳೆ ಪರದೆ ಹಾಗೂ ಮೈತುಂಬ ಬಟ್ಟೆ ಬಳಸುವಂತೆ ಸೂಚಿಸಿದ್ದಾರೆ.

ವೈರಸ್ ಪತ್ತೆಯಾದ ಭಾಗದಲ್ಲಿ ಮುನ್ನೇಚ್ಚರಿಕೆ ವಹಿಸಲು ಸೂಚನೆ

ಟಿವಿ9ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾತನಾಡಿ, ಈಗಾಗಲೇ ಸೋಂಕು ಪತ್ತೆಯಾದ ಭಾಗದಲ್ಲಿ ವೈದ್ಯರ ತಂಡ ಮುನ್ನೆಚ್ಚರಿಕೆ ವಹಿಸಿದೆ. ಜಿಕಾ ವೈರಸ್​ ಪತ್ತೆಯಾದ ಕಡೆ ಯಾವುದೇ ಹರಡುವಿಕೆಯಾಗಿಲ್ಲ. ಜಿಕಾ ವೈರಸ್ ಪತ್ತೆಯಾದ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಮನೆ ಮನೆ ಸಮೀಕ್ಷೆ ಮಾಡಿ ರಕ್ತ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜಿಕಾ ವೈರಸ್ ಹರದಡಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದರು.

ಏನಿದು ಜಿಕಾ ವೈರಸ್

ಜಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‌ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ನಿಂತ ನೀರು ಈ ಸೊಳ್ಳೆಗಳ ಉತ್ಪತ್ತಿ ತಾಣ.

ಇದನ್ನೂ ಓದಿ: ವಿಶ್ವ ಸೊಳ್ಳೆ ದಿನದ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ

ಜಿಕಾ ವೈರಸ್ ಲಕ್ಷಣಗಳು

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ಇನ್ನು ಬಹುತೇಕ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.

ಜ್ವರಪೀಡಿತ 7 ಮಂದಿ ರಕ್ತ ಪರೀಕ್ಷೆ

ಇನ್ನು ಜಿಕಾ ವೈರಸ್ ಪತ್ತೆಯಾದ ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ 30 ಗರ್ಭಿಣಿಯರು ಮತ್ತು ಜ್ವರಪೀಡಿತ 7 ಮಂದಿಯ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:59 am, Thu, 2 November 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್