AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ತಂದೆಯ ಸಾವಿನ ನೋವಲ್ಲೇ ಮಗಳ ಆತ್ಮಹತ್ಯೆ

ಕೇವಲ 3 ತಿಂಗಳಿನ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸ್ವರ್ಣ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಚಿಕ್ಕಬಳ್ಳಾಪುರದಲ್ಲಿ ತಂದೆಯ ಸಾವಿನ ನೋವಲ್ಲೇ ಮಗಳ ಆತ್ಮಹತ್ಯೆ
ತಂದೆ ಗಂಗಾಧರ್ ಸಾವಿನಿಂದ ಮನನೊಂದು ವಿದ್ಯಾರ್ಥಿನಿ ಸ್ವರ್ಣ ಆತ್ಮಹತ್ಯೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಭಾವನಾ ಹೆಗಡೆ|

Updated on: Oct 12, 2025 | 12:46 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್ 12: ಕೇವಲ 3 ತಿಂಗಳಿನ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇನ್ನೂ ವಿದ್ಯಾಭಾಸ ನಡೆಸುತ್ತಿದ್ದ ಸ್ವರ್ಣ(22) ತಂದೆಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ, ಇಲಿ ಪಾಷಾಣ ಸೇವಿಸಿದ್ದಳು. ವಿಷಯ ತಿಳಿದ ತಾಯಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವರ್ಣ ಸಾವನ್ನಪ್ಪಿದ್ದಾಳೆ.

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

ಜಿಲ್ಲೆಯ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವಳು ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆಯಷ್ಟೇ ಸ್ವರ್ಣಳ ತಂದೆ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ತಂದೆಯ ಸಾವಿನಿಂದ ಸ್ವರ್ಣ ಮಾನಸಿಕವಾಗಿ ಕುಗ್ಗಿದ್ದಳು. ಬದುಕುವ ಧೈರ್ಯ ಕಳೆದುಕೊಂಡಿದ್ದಳು. ಮನನೊಂದ ಸ್ವರ್ಣ ಕಾಲೇಜಿನ ಹಾಸ್ಟೆಲ್ ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ  ಮನೆಗೆ ಬಂದಿದ್ದ ಸ್ವರ್ಣಳನ್ನು ಆಕೆಯ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಗಳು ಸ್ವರ್ಣ ನಿನ್ನೆ (ಅ.11) ತಡರಾತ್ರಿ ಸಾವನ್ನಪ್ಪಿದ್ದಾಳೆ.

ಗಂಡ, ಮಗಳನ್ನು ಕಳೆದುಕೊಂಡ ತಾಯಿಯ ಆಕ್ರಂದನ

ಒಂದು ಕಡೆ ಗಂಡನನ್ನು ಕಳೆದುಕೊಂಡಿದ್ದ ಸ್ವರ್ಣಳ ತಾಯಿ ಸಂಸಾರ ತೂಗಿಸುವ ಜವಾಬ್ದಾರಿ ಹೊತ್ತಿದ್ದರು. ಮಗಳು ಮತ್ತು ಮಗನ ಮುಖ ನೋಡಿಕೊಂಡು ಜೀವನ ಸಾಗಿಸುತ್ತಿದ್ದರು.ಈಗ ಮಗಳನ್ನು ಕಳೆದುಕೊಂಡಿರುವ ಸ್ವರ್ಣಳ ತಾಯಿಗೆ ದಿಕ್ಕೇ ತೋಚದಂತಾಗಿದೆ. ಅಕ್ಕನ ಸಾವಿನಿಂದ ತಮ್ಮ ಸಹ ಕುಗ್ಗಿ ಹೋಗಿದ್ದು, ತಾಯಿ ಮಗ ಇಬ್ಬರೂ ಆತಂಕಕ್ಕೊಳಗಾಗಿದ್ದಾರೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮೃತ ಸ್ವರ್ಣ ತಾಯಿ ಬಳಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ