Chikkaballapura Gelatin Blast | ಪ್ರಧಾನಿ, ಮುಖ್ಯಮಂತ್ರಿ, ಗಣಿ ಸಚಿವ ಟ್ವೀಟ್ ಮಾಡಿ ಸ್ಫೋಟದ ಬಗ್ಗೆ ಏನಂದ್ರು?
ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟ ಘಟನೆ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶಾದ ವ್ಯಕ್ತಪಡಿಸಿದ್ದಾರೆ. ಜಿಲೆಟಿನ್ ಸ್ಫೋಟ ಕೇಸ್ ಸಂಬಂಧ ಟ್ವೀಟ್ ಮಾಡಿರುವ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. (2/2)
— CM of Karnataka (@CMofKarnataka) February 23, 2021
ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ 6 ಜನ ಮೃತಪಟ್ಟಿದ್ದು ಅತೀವ ದುಃಖವಾಗಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಸಾಂತ್ವನಿಸಿದ್ದಾರೆ.
Pained by the loss of lives due to a mishap at Chikkaballapur in Karnataka. Condolences to the bereaved families. Praying that the injured recover quickly: PM @narendramodi
— PMO India (@PMOIndia) February 23, 2021
ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಘಟನೆ ಸಂಬಂಧ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ.
ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಈಗಾಗಲೇ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ನಡೆದ ಸಂಭವಿಸಿದ ಸ್ಫೋಟಕ್ಕೆ 5 ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಅವರ ಆತ್ಮಕ್ಕೆ ಚಿರಶಾಂತಿಸಿಗಲಿ. ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮೂಲಕ ನಿರಾಣಿ ಸಂತಾಪ ಸೂಚಿಸಿದ್ದಾರೆ.
ಘಟನಾಸ್ಥಳಕ್ಕೆ ಲೋಕಾಯುಕ್ತ ಭೇಟಿ ಘಟನಾಸ್ಥಳಕ್ಕೆ ಲೋಕಾಯುಕ್ತ SP C.W.ಪೂವಯ್ಯ ನೇತೃತ್ವದಲ್ಲಿ ಲೋಕಾಯುಕ್ತ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಅಧಿಕಾರಿ ಸಿಬ್ಬಂದಿಯಿಂದ ಸ್ಥಳದಲ್ಲಿ ಗಣಿಗಾರಿಕೆ ಪರಿಶೀಲನೆ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಗೃಹಸಚಿವ ಬೊಮ್ಮಾಯಿ ಭೇಟಿ ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟ ಘಟನಾ ಸ್ಥಳಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಗೃಹ ಸಚಿವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಾಥ್ ಕೊಟ್ಟಿದ್ದಾರೆ. ಗೃಹ ಸಚಿವರಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ, ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್, FSL, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಇದನ್ನೂ ಓದಿ: Chikkaballapura Gelatin Blast | ಶಿವಮೊಗ್ಗ ಸ್ಫೋಟ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ, ಐವರ ಸಾವು
Published On - 10:42 am, Tue, 23 February 21