ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಆ ಮೂಲಕ ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಶವಾಗಾರದ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು. 

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ
ಕಾಡಾನೆ (ಸಂಗ್ರಹ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 25, 2024 | 5:38 PM

ಚಿಕ್ಕಮಗಳೂರು, ಮಾರ್ಚ್​​ 25: ಜಿಲ್ಲೆಯಲ್ಲಿ ಕಾಡಾನೆ (wild elephant) ದಾಳಿಗೆ ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಟು ತಿಂಗಳಲ್ಲಿ ನಾಲ್ವರು ಸಾವು

ಕಾಫಿನಾಡಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಿತ್ತು. ಆ ಮೂಲಕ ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಶವಾಗಾರದ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ಬಲಿ

ಚಿಕ್ಕಮಗಳೂರು ತಾಲೂಕಿನ ಕೆ.ಆರ್ ಪೇಟೆ ಸಮೀಪದ ಕಂಚೇನಹಳ್ಳಿ ಗ್ರಾಮದ ತೋಟದ ಕೆಲಸಕ್ಕೆ ತೆರಳುತ್ತಿದ್ದ 68 ವರ್ಷದ ತಮಿಳುನಾಡು ಮೂಲದ ಕಾರ್ಮಿಕ ಶ್ರೀಧರ್ ಮೇಲೆ ತೋಟದಲ್ಲಿ ನಿಂತಿದ್ದ ಒಂಟಿ ಸಲಗ ಏಕಾಏಕಿ ದಾಳಿ ಮಾಡಿತ್ತು. ಒಂಟಿ ಸಲಗದ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಶ್ರೀಧರ್​​ನನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಧರ್ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿತ್ತು. ಮನೆಗೆ ಆಧಾರವಾಗಿದ್ದ ಶ್ರೀಧರ್ ಸಾವಿನಿಂದ ಕುಟುಂಬ ಕಂಗಲಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ದೇವರಮನೆ ಬೆಟ್ಟದಲ್ಲಿ ಒಂಟಿ ಸಲಗ ಕಾಟ, ಪ್ರವಾಸಿಗರಿಗೆ ಆತಂಕ

ಕಾಡಾನೆಗಳು ಎಂಟು ತಿಂಗಳಲ್ಲಿ ನಾಲ್ಕು ಜನರನ್ನ ಬಲಿ ಪಡೆದಿದ್ದು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡಾನೆಗಳು ಆತಂಕ ಸೃಷ್ಟಿ ಮಾಡಿದೆ. ಕಾಡಾನೆಗಳಿಂದ ಶಾಶ್ವತ ಪರಿಹಾರ ನೀಡೋದರ ಜೊತೆಗೆ ಕಾಡಾನೆ ದಾಳಿಯಿಂದ ಯಾರೇ ಮೃತಪಟ್ರೂ ಅವರ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!