AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Jobs 2026: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ; ನೇರ ನೇಮಕಾತಿ ಪ್ರಕಟಣೆ!

ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್​​ನಲ್ಲಿ 5 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುವವರಿಗೆ ಇದೊಂದು ಸುವರ್ಣಾವಕಾಶ. ಜೂನ್ 25 ರಿಂದ ಅರ್ಜಿ ವಿತರಣೆ ಆರಂಭವಾಗಿದ್ದು, ಜುಲೈ 24 ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿಕ್ಕಮಗಳೂರು ಮುಖ್ಯ ಕಚೇರಿಯಲ್ಲಿ ಶುಲ್ಕ ಪಾವತಿಸಿ ಅರ್ಜಿ ಪಡೆದು ಸಲ್ಲಿಸಬಹುದು.

Bank Jobs 2026: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ; ನೇರ ನೇಮಕಾತಿ ಪ್ರಕಟಣೆ!
ಉದ್ಯೋಗ ಅವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on:Jul 08, 2026 | 9:45 AM

Share

ಮುಖ್ಯಾಂಶಗಳು

  • ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್​​ನಲ್ಲಿ ನೇಮಕಾತಿ.
  • 5 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
  • ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುವವರಿಗೆ ಇದೊಂದು ಸುವರ್ಣಾವಕಾಶ.

ಚಿಕ್ಕಮಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಸುವರ್ಣಾವಕಾಶ ಇಲ್ಲಿದೆ. ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್​​ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಉದ್ಯೋಗದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.

ಉದ್ಯೋಗದ ವಿವರಗಳು:

  • ಸಂಸ್ಥೆಯ ಹೆಸರು: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್ ನಿಯಮಿತ
  • ಹುದ್ದೆಯ ಹೆಸರು: ಕಿರಿಯ ಸಹಾಯಕರು (Junior Assistants)
  • ಒಟ್ಟು ಹುದ್ದೆಗಳ ಸಂಖ್ಯೆ: 05 ಹುದ್ದೆಗಳು
  • ನೇಮಕಾತಿ ವಿಧಾನ: ನೇರ ನೇಮಕಾತಿ
  • ಸ್ಥಳ: ಹನುಮಂತಪ್ಪ ಸರ್ಕಲ್ ಹತ್ತಿರ, ಕೆ.ಎಂ ರಸ್ತೆ, ಚಿಕ್ಕಮಗಳೂರು

ಇದನ್ನೂ ಓದಿ: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್!

ಅರ್ಜಿ ಪಡೆಯುವುದು ಮತ್ತು ಶುಲ್ಕದ ವಿವರ:

ನೇಮಕಾತಿಗೆ ಸಂಬಂಧಿಸಿದ ಅರ್ಜಿಯನ್ನು ಬ್ಯಾಂಕಿನ ಕಚೇರಿ ವೇಳೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿಸಿ ನೇರವಾಗಿ ಪಡೆದುಕೊಳ್ಳಬಹುದಾಗಿದೆ.

  • ಅರ್ಜಿ ಶುಲ್ಕ: ರೂ. 100 + ಜಿ.ಎಸ್.ಟಿ (100 + GST)
  • ಅರ್ಜಿ ಲಭ್ಯವಿರುವ ಸ್ಥಳ: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕಿನ ಪ್ರಧಾನ ಕಚೇರಿ.

ಪ್ರಮುಖ ದಿನಾಂಕಗಳು:

  • ಅರ್ಜಿ ವಿತರಣೆ ಆರಂಭದ ದಿನಾಂಕ: 25-06-2026 ರಿಂದ ಅರ್ಜಿಗಳನ್ನು ಪಡೆಯಬಹುದಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-07-2026.

ಅಭ್ಯರ್ಥಿಗಳ ಗಮನಕ್ಕೆ:

ನೇಮಕಾತಿಗೆ ಸಂಬಂಧಿಸಿದ ನಿಯಮಗಳು, ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ಹೆಚ್ಚಿನ ಶರತ್ತುಗಳ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಬ್ಯಾಂಕಿನ ಕಚೇರಿ ಸಮಯದಲ್ಲಿ ‘ಪ್ರಧಾನ ವ್ಯವಸ್ಥಾಪಕರು / ಸಿ.ಇ.ಒ’ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:16 pm, Tue, 7 July 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ