
ಚಿಕ್ಕಮಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಸುವರ್ಣಾವಕಾಶ ಇಲ್ಲಿದೆ. ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಉದ್ಯೋಗದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್!
ನೇಮಕಾತಿಗೆ ಸಂಬಂಧಿಸಿದ ಅರ್ಜಿಯನ್ನು ಬ್ಯಾಂಕಿನ ಕಚೇರಿ ವೇಳೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿಸಿ ನೇರವಾಗಿ ಪಡೆದುಕೊಳ್ಳಬಹುದಾಗಿದೆ.
ನೇಮಕಾತಿಗೆ ಸಂಬಂಧಿಸಿದ ನಿಯಮಗಳು, ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ಹೆಚ್ಚಿನ ಶರತ್ತುಗಳ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಬ್ಯಾಂಕಿನ ಕಚೇರಿ ಸಮಯದಲ್ಲಿ ‘ಪ್ರಧಾನ ವ್ಯವಸ್ಥಾಪಕರು / ಸಿ.ಇ.ಒ’ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:16 pm, Tue, 7 July 26