ಚಿಕ್ಕಮಗಳೂರು: ಕಾರು, ಕ್ರೂಸರ್ ನಡುವೆ ಡಿಕ್ಕಿ, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಅಫಜಲ್ಪುರಕ್ಕೆ ತೆರಳುವಾಗ ಕಾರು, ಕ್ರೂಸರ್ ವಾಹನ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಕ್ರೂಸರ್ ವಾಹನ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಅಫಜಲ್ಪುರಕ್ಕೆ ತೆರಳುವಾಗ ಈ ಅಪಘಾತವಾಗಿದ್ದು, ಶಾಲಾ ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೂಡಲೇ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಘಟನೆ ತಡರಾತ್ರಿ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ದಕ್ಷಿಣ ಕನ್ನಡ: ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿ ಬೈಕ್ ಸವಾರ ಲಕ್ಷ್ಮಣ ನಾಯ್ಕ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪದ ಮಸೀದಿ ಬಳಿ ನಡೆದಿದೆ. ಪಾಣಾಜೆ ಸಿಎ ಬ್ಯಾಂಕ್ ಉದ್ಯೋಗಿಯಾಗಿದ್ದ ಲಕ್ಷ್ಮಣ್ ನಾಯ್ಕ್, ಪುತ್ತೂರಿನಿಂದ ಪಾಣಾಜೆ ಕಡೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:22 am, Mon, 6 March 23